Friday, 20th July 2018  

Vijayavani

ಶೀರೂರು ಶ್ರೀಗಳ ಸಾವು ಕೊಲೆಯಲ್ಲ - ಅವರಿಗೆ ಮೊದಲಿಂದಲೂ ಅನಾರೋಗ್ಯ ಇತ್ತು - ಉಡುಪಿಯಲ್ಲಿ ಪೇಜಾವರ ಶ್ರೀ ಸ್ಪಷ್ಟನೆ        ರಾಹುಲ್‌ ಅಪ್ಪುಗೆಗೆ ಬಿಜೆಪಿ ಸಿಡಿಮಿಡಿ - ಸದನದಲ್ಲಿನ ವರ್ತನೆ ಬಗ್ಗೆ ಕೋಪ - ರಾಹುಲ್‌ಗೆ ಸ್ಪೀಕರ್‌ ನೀತಿಪಾಠ        ಭಾಷಣಕ್ಕಿಂತ ರಾಹುಲ್‌ ಕಣ್ಣೇಟು ಫೇಮಸ್‌ - ಪ್ರಿಯಾ ವಾರಿಯರ್‌ ವಿಡಿಯೋಗೆ ಲಿಂಕ್‌ - ಸಾಮಾಜಿಕ ಜಾಲತಾಣಗಳಲ್ಲಿ ಫುಲ್‌ವೈರಲ್‌        ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿದ ಸಿಎಂ - ಕಾವೇರಿಗೆ ಮುಖ್ಯಮಂತ್ರಿ ದಂಪತಿಯಿಂದ ಪೂಜೆ - ಸಚಿವ ಡಿಕೆಶಿ, ಮಹೇಶ್‌ ಸಾಥ್‌        ಸಿಬ್ಬಂದಿ ಒತ್ತಾಯದಿಂದ ಅಲ್ಲಿಗೆ ಹೋಗಿದ್ದೆ - ಮೊಗಸಾಲೆಯಲ್ಲಿ ಬರ್ತಡೇ ಪಾರ್ಟಿ ತಪ್ಪು - ಕ್ಷಮೆ ಕೋರಿದ ವಿಧಾನಸಭೆ ಕಾರ್ಯದರ್ಶಿ        ನಿನ್ನೆ ಬೌಬೌ ಬಿರಿಯಾನಿ - ಇಂದು ಮಿಯಾಂವ್‌ ಮಿಯಾಂವ್‌ ಮಸಾಲ - ಬೆಂಗಳೂರಿನ ವಿಜಯನಗರದಲ್ಲಿ ಬೆಕ್ಕು ನಾಯಿ ಭಕ್ಷ       
Breaking News

ಬಿಬಿಎಂಪಿ ಅಕ್ರಮದ ದಾಖಲೆ ಇಂದು ಬಿಡುಗಡೆ

Friday, 24.02.2017, 9:31 AM       No Comments

ಯಾದಗಿರಿ: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಮೂರೂವರೆ ಸಾವಿರ ಕೋಟಿ ರೂ. ಅಕ್ರಮ ನಡೆದಿದ್ದು, ಈ ಬಗ್ಗೆ ನನ್ನ ಬಳಿ ದಾಖಲೆಗಳಿವೆ. ಬೆಂಗಳೂರಿನಲ್ಲಿ ಶುಕ್ರವಾರ ಮಾಧ್ಯಮಗಳ ಎದುರು ಪ್ರಸ್ತುತಪಡಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೊಸ ಬಾಂಬ್ ಸಿಡಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬೆಂಗಳೂರಿನ ಜನತೆ ಕಟ್ಟಿದ ತೆರಿಗೆ ಮೂರೂವರೆ ಸಾವಿರ ಕೋಟಿ ಹಣ ಬಿಬಿಎಂಪಿ ಖಾತೆಗೆ ಜಮೆಯಾಗಿಲ್ಲ. ಹಾಗಿದ್ದರೆ ಎಲ್ಲಿಗೆ ಹೋಯ್ತು? ಎಂಬ ಬಗ್ಗೆ ತನಿಖೆ ಯಾಗಬೇಕು. ಅಲ್ಲದೆ, ಈ ಅವ್ಯವಹಾರಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ನೇರ ಹೊಣೆಯಾಗಿದ್ದಾರೆ ಎಂದು ಆರೋಪಿಸಿದರು.

ನಾಲಿಗೆ ಮೇಲೆ ಹಿಡಿತ ಇರಲಿ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಬಗ್ಗೆ ಏಕವಚನದಲ್ಲಿ ಟೀಕೆ ಮಾಡುತ್ತಿರುವ ಕೆಪಿಸಿಸಿ ಕಾರ್ಯಾಧ್ಯಕ್ಷರೇ ನಿಮ್ಮ ನಾಲಿಗೆ ಮೇಲೆ ಹಿಡಿತ ಇಟ್ಟುಕೊಳ್ಳಿ. ಬಿಎಸ್​ವೈ ರಾಜಕಾರಣ ಮಾಡಲು ಆರಂಭಿಸಿದಾಗ ನೀವು ಎರಡು ವರ್ಷದ ಮಗುವಾಗಿದ್ರಿ. ಹಿರಿಯರನ್ನು ಗೌರವಿಸುವ ಸಂಸ್ಕೃತಿ ಕಲಿಯದವರನ್ನು ಜನ ನಗಣ್ಯವಾಗಿ ನೋಡುತ್ತಾರೆ. ಈ ರೀತಿ ಸಿನಿಮೀಯ ಸ್ಟೈಲ್​ನಲ್ಲಿ ಬಿಜೆಪಿ ಮುಖಂಡ ಹಾಗೂ ಚಿತ್ರ ನಟ ಜಗ್ಗೇಶ್ ಗುರುವಾರ ದಿನೇಶ್ ಗುಂಡೂರಾವ್ ಅವರಿಗೆ ಎಚ್ಚರಿಕೆ ನೀಡಿದರು. ಯಡಿಯೂರಪ್ಪ 45 ವರ್ಷದಿಂದ ರಾಜಕಾರಣ ಮಾಡುತ್ತಿದ್ದಾರೆ. ಆದ್ದರಿಂದ ಇನ್ನು ಮುಂದೆ ಅವರ ಬಗ್ಗೆ ಮಾತನಾಡುವಾಗ ಎಚ್ಚರ ಇರಲಿ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್ ಹೈಕಮಾಂಡ್​ಗೆ ಕಪ್ಪ ನೀಡಿರುವುದಕ್ಕೆ ಸಂಬಂಧಪಟ್ಟಂತೆ ಡೈರಿಯಲ್ಲಿ ದಾಖಲಾಗಿದೆ ಎಂಬ ಮಾತನ್ನು ಯಡಿಯೂರಪ್ಪ ಹೇಳಿದ್ದಾರೆ ಹೊರತು, ಡೈರಿ ಸಿಕ್ಕಿದೆ ಎಂದು ಎಲ್ಲಿಯೂ ಹೇಳಿಲ್ಲ. ಎಚ್.ಡಿ.ಕುಮಾರಸ್ವಾಮಿ ಬಳಿ ದಾಖಲೆಗಳಿದ್ದರೆ ಅದನ್ನು ಸಾರ್ವಜನಿಕರ ಮುಂದಿಡಬೇಕು. ಹಿಟ್ ಆಂಡ್ ರನ್ ರೀತಿ ಮಾತನಾಡಬಾರದು. ರಾಜ್ಯದಲ್ಲಿ ಕಾಂಗ್ರೆಸ್ ಮುಳುಗುತ್ತಿರುವ ಹಡಗಾಗಿದೆ. ಸಿದ್ದರಾಮಯ್ಯ ಅವರ ಆಡಳಿತದಿಂದ ಅವರ ಪಕ್ಷದ ಅನೇಕರು ಬೇಸತ್ತಿದ್ದಾರೆ. ಅವರೆಲ್ಲರೂ ಬಿಜೆಪಿ ಸೇರಲು ಮುಂದಾಗಿದ್ದಾರೆ.

| ಡಿ.ವಿ. ಸದಾನಂದಗೌಡ ಕೇಂದ್ರ ಸಚಿವ

 

ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ಅವರ ಕುಟುಂಬಸ್ಥರು ಯಲಹಂಕ ಬಳಿಯ ನವರತ್ನ ಅಗ್ರಹಾರ ವ್ಯಾಪ್ತಿಯಲ್ಲಿ ಒತ್ತುವರಿ ಮಾಡಿಕೊಂಡಿರುವ 66.7 ಎಕರೆ ಸರ್ಕಾರಿ ಜಮೀನನ್ನು ತಕ್ಷಣ ಹಸ್ತಾಂತರಿಸದಿದ್ದ್ದೆ ಫೆ.26ರಂದು ಲೋಕಾಯುಕ್ತ ಮತ್ತು ಕಂದಾಯ ಸಚಿವರಿಗೆ ದೂರು ಸಲ್ಲಿಸಲಾಗುವುದು.

| ಅಶ್ವತ್ಥ ನಾರಾಯಣ ಬಿಜೆಪಿ ವಕ್ತಾರ

Leave a Reply

Your email address will not be published. Required fields are marked *

Back To Top