Friday, 20th October 2017  

Vijayavani

1. ಲಿಂಗಾಯತ ಪ್ರತಿಪಾದಕರಾಗಿದ್ದಕ್ಕೆ ಕಲಬುರ್ಗಿ ಹತ್ಯೆ – ಲಿಂಗಾಯತ ವಿಚಾರ ಬರೆದಿದ್ದಕ್ಕೆ ಗೌರಿ ಲಂಕೇಶ್​ ಕೊಲೆ ಶಂಕೆ – ಬೆಂಗಳೂರಿನಲ್ಲಿ ಜಾಮದಾರ್​ ವಿವಾದಾತ್ಮಕ ಹೇಳಿಕೆ 2. ಬಿಜೆಪಿ ಬಿಟ್ಟು ಕಾಂಗ್ರೆಸ್​ ಸೇರಿದಕ್ಕೆ ಮಾರಣಾಂತಿಕ ಹಲ್ಲೆ – ಮಾಜಿ ಕಾರ್ಪೊರೇಟರ್​ ರವೀಂದ್ರ ವಿರುದ್ಧ ಮಹಿಳೆ ಆರೋಪ – ಗಾಯಾಳುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ 3. ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾರಥೋತ್ಸವ – ರಥೋತ್ಸವದ ವೇಳೆ ನೂಕು ನುಗ್ಗಲು – ಭಕ್ತರ ನಿಯಂತ್ರಿಸಲು ಪೊಲೀಸರಿಂದ ಲಾಠಿ ಚಾರ್ಜ್ 4. ಹಾಲಿವುಡ್, ಬಾಲಿವುಡ್​ ಬೇರೆ ಅಲ್ಲ – ಎರಡೂ ಕಡೆ ಲೈಂಗಿಕ ಶೋಷಣೆ ಇದ್ದೆ ಇದೆ – ಸಂದರ್ಶನದಲ್ಲಿ ಸತ್ಯ ತೆರೆದಿಟ್ಟ ಪ್ರಿಯಾಂಕ ಚೋಪ್ರಾ 5. ದೀಪಾವಳಿಗೆ ಪ್ರಧಾನಿ ತಾಯಿ ಫುಲ್ ಖುಷ್​ – ರಾಮನ ಹಾಡಿಗೆ ಸಖತ್ ಸ್ಟೆಪ್ಸ್​ – 97ರ ಹರೆಯದಲ್ಲೂ ಹೀರಾಬೆನ್​ ಜೀವನ ಪ್ರೀತಿ
Breaking News :

ಬೆಳಗಾವಿ ಕಾಂಗ್ರೆಸ್​ನಲ್ಲಿ ಸೀರೆ ಜಗಳ

Monday, 28.08.2017, 3:00 AM       No Comments

ಬೆಳಗಾವಿ: ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಎಐಸಿಸಿ ಕಾರ್ಯದರ್ಶಿ ಸತೀಶ್ ಜಾರಕಿಹೊಳಿ ನಡುವಿನ ಶೀತಲ ಸಮರ ಮುಂದುವರಿದಿದ್ದು, ಹೆಬ್ಬಾಳ್ಕರ್​ಗೆ ಸತೀಶ್ ಭಾನುವಾರ ಮಾತಿನೇಟು ನೀಡಿದ್ದಾರೆ.

ಎಐಸಿಸಿ ಕಾರ್ಯದರ್ಶಿ ಹಾಗೂ ತೆಲಂಗಾಣ ಉಸ್ತುವಾರಿ ಜವಾಬ್ದಾರಿ ವಹಿಸಿಕೊಂಡಿರುವ ಹಿನ್ನೆಲೆಯಲ್ಲಿ ಸತೀಶ್ ಜಾರಕಿಹೊಳಿ ಅಭಿಮಾನಿಗಳು ಏರ್ಪಡಿಸಿದ್ದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ‘ಚುನಾವಣೆಯಲ್ಲಿ ನೀವು 70 ರೂ. ಮೌಲ್ಯದ ಸೀರೆ ಹಂಚಿದರೆ ನಾವು 200 ರೂ. ಮೌಲ್ಯದ ಇಳಕಲ್ ಸೀರೆ ಹಂಚುತ್ತೇವೆ’ ಎಂದು ಪರೋಕ್ಷವಾಗಿ ಲಕ್ಷ್ಮೀ ಹೆಬ್ಬಾಳ್ಕರ್​ಗೆ ತಿರುಗೇಟು ನೀಡಿದರು.

ಮಾತಿನುದ್ದಕ್ಕೂ ಹೆಬ್ಬಾಳಕರ್ ಅವರನ್ನು ತಿವಿದ ಸತೀಶ್, ಅಪ್ಪಿತಪ್ಪಿಯೂ ಅವರ ಹೆಸರನ್ನು ಬಳಸಲಿಲ್ಲ. ನಮ್ಮ ಬಳಿಯೂ ಜನರಿದ್ದಾರೆ. ಹಣ-ಸಿದ್ಧಾಂತ ಎಲ್ಲವೂ ಇದೆ. ರಾಜಕೀಯದಲ್ಲಿ ಹಣವೇ ಮುಖ್ಯವಲ್ಲ.

ಜನ ಬೆಂಬಲ ಬೇಕು. ಮುಂದಿನ ದಿನಗಳಲ್ಲಿ ಸಾಮಾಜಿಕ ನ್ಯಾಯದ ಪರ ಇರುವ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂದು ಅಭಿಪ್ರಾಯಪಟ್ಟರು. ನನ್ನ ಕೆಲಸ ನೋಡಿ ಪಕ್ಷದ ಹೈಕಮಾಂಡ್, ಎಐಸಿಸಿ ಕಾರ್ಯದರ್ಶಿ, ತೆಲಂಗಾಣ ರಾಜ್ಯ ಉಸ್ತುವಾರಿ ಹೊಣೆ ವಹಿಸಿದೆ. ಅಲ್ಲಿಯೂ ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತೇನೆ. ಬೆಳಗಾವಿಗೆ ಹೆಸರು ತರುತ್ತೇನೆ. ಅಧಿಕಾರ ಶಾಶ್ವತವಲ್ಲ. ಜನರ ವಿಶ್ವಾಸ ಮುಖ್ಯ. ಈಗಾಗಲೇ ರಾಜಕೀಯ ಲಾಭಕ್ಕಾಗಿ ಕೆಲವರು ಸೀರೆ ಹಂಚುವ ಕಾರ್ಯ ಆರಂಭಿಸಿದ್ದಾರೆ. ಆದರೆ, ನಮ್ಮ ಹೂಡಿಕೆ ಸಮಾಜದ ಮೇಲೆ ಇದೆ. ನಮ್ಮ ಹೂಡಿಕೆ ರಾಜಕೀಯ ಲಾಭಕ್ಕಾಗಿ ಅಲ್ಲವೇ ಅಲ್ಲ. ನಾವು ಇದುವರೆಗೆ ಅನಾಥರಿಗೆ ಹಂಚಿದ 20 ಲಕ್ಷ ರೂ. ಲೆಕ್ಕಹಾಕಿದರೆ 20 ಸಾವಿರ ಸೀರೆ ಹಂಚಿದಂತಾಗುತ್ತದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

Back To Top