Friday, 20th July 2018  

Vijayavani

ಶೀರೂರು ಶ್ರೀಗಳ ಸಾವು ಕೊಲೆಯಲ್ಲ - ಅವರಿಗೆ ಮೊದಲಿಂದಲೂ ಅನಾರೋಗ್ಯ ಇತ್ತು - ಉಡುಪಿಯಲ್ಲಿ ಪೇಜಾವರ ಶ್ರೀ ಸ್ಪಷ್ಟನೆ        ರಾಹುಲ್‌ ಅಪ್ಪುಗೆಗೆ ಬಿಜೆಪಿ ಸಿಡಿಮಿಡಿ - ಸದನದಲ್ಲಿನ ವರ್ತನೆ ಬಗ್ಗೆ ಕೋಪ - ರಾಹುಲ್‌ಗೆ ಸ್ಪೀಕರ್‌ ನೀತಿಪಾಠ        ಭಾಷಣಕ್ಕಿಂತ ರಾಹುಲ್‌ ಕಣ್ಣೇಟು ಫೇಮಸ್‌ - ಪ್ರಿಯಾ ವಾರಿಯರ್‌ ವಿಡಿಯೋಗೆ ಲಿಂಕ್‌ - ಸಾಮಾಜಿಕ ಜಾಲತಾಣಗಳಲ್ಲಿ ಫುಲ್‌ವೈರಲ್‌        ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿದ ಸಿಎಂ - ಕಾವೇರಿಗೆ ಮುಖ್ಯಮಂತ್ರಿ ದಂಪತಿಯಿಂದ ಪೂಜೆ - ಸಚಿವ ಡಿಕೆಶಿ, ಮಹೇಶ್‌ ಸಾಥ್‌        ಸಿಬ್ಬಂದಿ ಒತ್ತಾಯದಿಂದ ಅಲ್ಲಿಗೆ ಹೋಗಿದ್ದೆ - ಮೊಗಸಾಲೆಯಲ್ಲಿ ಬರ್ತಡೇ ಪಾರ್ಟಿ ತಪ್ಪು - ಕ್ಷಮೆ ಕೋರಿದ ವಿಧಾನಸಭೆ ಕಾರ್ಯದರ್ಶಿ        ನಿನ್ನೆ ಬೌಬೌ ಬಿರಿಯಾನಿ - ಇಂದು ಮಿಯಾಂವ್‌ ಮಿಯಾಂವ್‌ ಮಸಾಲ - ಬೆಂಗಳೂರಿನ ವಿಜಯನಗರದಲ್ಲಿ ಬೆಕ್ಕು ನಾಯಿ ಭಕ್ಷ       
Breaking News

ಬೆಳ್ಳಂಬೆಳಗ್ಗೆ ಅಧಿಕಾರಿಗಳ ದಾಳಿ

Thursday, 12.07.2018, 10:14 PM       No Comments

ರೋಣ: ಜಿಪಂ ನೀರು ಮತ್ತು ನೈರ್ಮಲ್ಯ ವಿಭಾಗದ ಎಇಇ ಎಸ್.ಎಚ್. ರಡ್ಡೇರ ಅವರಿಗೆ ಬೆಳ್ಳಂಬೆಳೆಗ್ಗೆ ಎಸಿಬಿ ಅಧಿಕಾರಿಗಳು ಶಾಕ್ ನೀಡಿದ್ದಾರೆ.

ಪಟ್ಟಣದ ಸಂಶಿ ದಿಬ್ಬದಲ್ಲಿರುವ ರಡ್ಡೇರ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳ ತಂಡ ಬೆಳಗ್ಗೆ 6ಕ್ಕೆ ದಾಳಿ ನಡೆಸಿದ್ದು, ಆದಾಯಕ್ಕಿಂತ ಹೆಚ್ಚಿನ ಪ್ರಮಾಣದ ಆಸ್ತಿ ಹೊಂದಿರುವುದನ್ನು ಪತ್ತೆ ಹಚ್ಚಿದ್ದಾರೆ.

ಎಸ್.ಎಚ್. ರಡ್ಡೇರ ರೋಣ ಜಿಪಂ ನೀರು ಮತ್ತು ನೈರ್ಮಲ್ಯ ವಿಭಾಗದ ಎಇಇ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ತಮ್ಮ ಆದಾಯಕ್ಕಿಂತ ಹೆಚ್ಚಿನ ಆಸ್ತಿಯನ್ನು ಅಕ್ರಮವಾಗಿ ಗಳಿಸಿದ್ದಾರೆ ಎಂಬ ಆರೋಪದ ಹಿನ್ನಲೆಯಲ್ಲಿ ಎಸಿಬಿ ತಂಡ ಮಾಹಿತಿ ಪಡೆದು ದಾಳಿ ನಡೆಸಿದೆ.

ಎಸಿಬಿ ಡಿವೈಎಸ್​ಪಿ ವಾಸುದೇವ ನೇತೃತ್ವದಲ್ಲಿ 20ಕ್ಕೂ ಹೆಚ್ಚು ಅಧಿಕಾರಿಗಳ ತಂಡ ರೋಣ ನಿವಾಸ ಮಾತ್ರವಲ್ಲದೇ ಅವರ ಕಚೇರಿ ಮೇಲೆಯೂ ಏಕಕಾಲಕ್ಕೆ ದಾಳಿ ನಡೆಸಿದ್ದು, ಸಂಜೆವರೆಗೆ ಸತತ ಜಾಲಾಡಿದ್ದಾರೆ. ಈ ವೇಳೆ ರೋಣ ಸೇರಿದಂತೆ ವಿವಿಧೆಡೆ ನಿವೇಶನ, ಜಮೀನು ಸೇರಿದಂತೆ ಅಪಾರ ಪ್ರಮಾಣದ ಆಸ್ತಿ ಹೊಂದಿರುವ ಬಗೆಗೆ ಕೆಲ ದಾಖಲೆಗಳು ಲಭ್ಯವಾಗಿವೆ ಎಂದು ಹೇಳಲಾಗುತ್ತಿದೆ. ಬೆಳ್ಳಿ, ಬಂಗಾರದ ಒಡೆವೆ, ಬೆಲೆ ಬಾಳುವ ವಸ್ತುಗಳು ಮತ್ತು ವಿವಿಧ ಬ್ಯಾಂಕ್​ಗಳ ಪಾಸ್​ಬುಕ್ ಈ ವೇಳೆ ದೊರೆತಿವೆ.

Leave a Reply

Your email address will not be published. Required fields are marked *

Back To Top