Thursday, 19th April 2018  

Vijayavani

ಬಿಜೆಪಿ ಕಚೇರಿಯಲ್ಲಿ ಅಮಿತ್‌ ಷಾ ಮೀಟಿಂಗ್ - ಸೋಶಿಯಲ್‌ ಮೀಡಿಯಾ ಬಗ್ಗೆ ಫುಲ್‌ ಮಾರ್ಕ್ಸ್‌ - ಎಚ್ಚರಿಕೆ ಹೆಜ್ಜೆ ಇಡಲು ಸಲಹೆ        ಒಂಟಿಸಲಗದ ಮನೆಗೆ ಬಂತು ಬಿ ಫಾರಂ ​​ - ಅಂಬಿ ಷರುತ್ತುಗಳಿಗೆ ಒಪ್ಪಿದ ಪರಂ - ಪಕ್ಷದ ನಡೆ ಬಗ್ಗೆ ರೆಬೆಲ್‌ಸ್ಟಾರ್‌ ಗರಂ        ಕೈ ಟಿಕೆಟ್​ ತಪ್ಪಿದ್ದಕ್ಕೆ ಶಶಿಕುಮಾರ್ ಅಸಮಾಧಾನ​ - ದೇವೆಗೌಡರ ಭೇಟಿಯಾದ ಕೊಲ್ಲೂರ ಕಾಳ - ಪದ್ಮನಾಭ ನಗರದ ನಿವಾಸದಲ್ಲಿ ಜೆಡಿಸ್​ ಸೇರ್ಪಡೆ        ಟಿಕೆಟ್​ಗಾಗಿ ಹೆಚ್ಚಿದ ಕಣ್ಣೀರಧಾರೆ - ಮಾಯಕೊಂಡದಲ್ಲಿ ಕಣ್ಣೀರಿಟ್ಟ ಮಾಜಿ ಶಾಸಕ - ತರೀಕೆರೆಯಲ್ಲಿ ಶಿವಶಂಕರಪ್ಪ ಭಾವುಕ        ಭವಾನಿ ಸೋಲಿಸಿ ಎಂದಿದ್ದು ನನ್ನನ್ನಲ್ಲ - ಕೈ ಅಭ್ಯರ್ಥಿ ವಿರುದ್ಧ ಮಾತನಾಡಿದ್ದಾರೆ - ಭವಾನಿ ವಿಡಿಯೋ ಬಗ್ಗೆ ಸಾ.ರಾ ಮಹೇಶ್‌ ಸ್ಪಷ್ಟನೆ        ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ - 6ನೇ ವೇತನ ಆಯೋಗದ ಶಿಫಾರಸು ಜಾರಿಗೆ ಗ್ರೀನ್​ಸಿಗ್ನಲ್ - ಚುನಾವಣಾ ಆಯೋಗದಿಂದ ಒಪ್ಪಿಗೆ       
Breaking News

ಬೋಲ್ಡ್ ಪಾತ್ರದಲ್ಲಿ ನವ್ಯಾ

Monday, 16.04.2018, 3:03 AM       No Comments

ಬೆಂಗಳೂರು: ಖಾಸಗಿ ವಾಹಿನಿಯೊಂದರಲ್ಲಿ ಪ್ರಸಾರವಾಗುತ್ತಿರುವ ‘ಸತ್ಯಂ ಶಿವಂ ಸುಂದರಂ’ ಧಾರಾವಾಹಿಯಲ್ಲಿ ನಟಿಸುತ್ತಿರುವ ನವ್ಯಾ ಗೌಡ ಖಾತೆಯಲ್ಲಿ ಸದ್ಯ ಎರಡು ಚಿತ್ರಗಳಿವೆ. ಆ ಸಿನಿಮಾಗಳ ಕೆಲಸಗಳು ನಡೆಯುತ್ತಿರುವಾಗಲೇ ಅವರು ಮತ್ತೊಂದು ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾದ ಖುಷಿಯಲ್ಲಿದ್ದಾರೆ.

‘ಮದುವೆ ದಿಬ್ಬಣ’ ಚಿತ್ರ ನಿರ್ದೇಶನ ಮಾಡಿದ್ದ ಉಮೇಶ್ ಸದ್ಯ ‘ಜಸ್ಟ್ ಮಿಸ್’ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಶೀಘ್ರದಲ್ಲೇ ಮುಹೂರ್ತವನ್ನೂ ನೆರವೇರಿಸಿಕೊಳ್ಳುತ್ತಿದ್ದಾರೆ. ಈ ಚಿತ್ರಕ್ಕೆ ಇಬ್ಬರು ನಾಯಕಿಯರಿದ್ದು, ಅದರಲ್ಲಿ ಒಬ್ಬರಾಗಿ ನವ್ಯಾ ಆಯ್ಕೆಯಾಗಿದ್ದಾರೆ. ‘ಚಿತ್ರದಲ್ಲಿ ನನ್ನದು ಬೋಲ್ಡ್ ಪಾತ್ರ. ಆ ರೀತಿಯ ಪಾತ್ರಗಳಲ್ಲಿ ನಟಿಸುವುದು ನನಗೆ ಹೆಚ್ಚು ಇಷ್ಟ. ನನ್ನ ಪಾತ್ರಕ್ಕೂ ನಿಜಜೀವನಕ್ಕೂ ಸಾಮ್ಯತೆ ಇದೆ’

ಎಂದು ಪಾತ್ರದ ಬಗ್ಗೆ ಮಾಹಿತಿ ನೀಡುತ್ತಾರೆ ಅವರು. ಮುನಿ, ಮಂಡ್ಯ ರಮೇಶ್, ರಮೇಶ್ ಭಟ್ ಸೇರಿ ದೊಡ್ಡ ತಾರಾಗಣ ಚಿತ್ರದಲ್ಲಿ ಇರಲಿದೆಯಂತೆ. ಹಾಗಾಗಿ ಹಿರಿಯ ಕಲಾವಿದರ ಜತೆ ತೆರೆ ಹಂಚಿಕೊಳ್ಳುತ್ತಿರುವ ಖುಷಿಯಲ್ಲಿದ್ದಾರೆ ನವ್ಯಾ. ಮತ್ತೋರ್ವ ನಾಯಕಿಯಾಗಿ ಲೀನಾ ಖುಷಿ ನಟಿಸುತ್ತಿದ್ದಾರೆ. ಅಂದಹಾಗೆ, ‘ಜಸ್ಟ್ ಮಿಸ್’ ಚಿತ್ರಕ್ಕೆ ತಾವು ನಾಯಕಿಯಾಗಿ ಆಯ್ಕೆಯಾಗಿದ್ದರ ಬಗ್ಗೆ ಮಾಹಿತಿ ನೀಡುವ ನವ್ಯಾ, ‘ಧಾರಾವಾಹಿಯಲ್ಲಿ ನನ್ನದು ಬೋಲ್ಡ್ ಪಾತ್ರ. ಅದನ್ನು ನಿರ್ದೇಶಕರು ನೆಚ್ಚಿಕೊಂಡಿದ್ದರು. ಆಡಿಷನ್ ವೇಳೆ ನನ್ನ ಆಕ್ಟಿಂಗ್ ಇಷ್ಟಪಟ್ಟರು. ಚಿತ್ರದ ಕಥೆ ಇಷ್ಟವಾಯಿತು. ಹಾಗಾಗಿ ಒಪ್ಪಿಕೊಂಡೆ’ ಎನ್ನುತ್ತಾರೆ. ಈಗಾಗಲೇ ಅವರಿಗೆ ಕಿರುತೆರೆಯಲ್ಲಿ ಅನೇಕ ಆಫರ್​ಗಳು ಬರುತ್ತಿವೆಯಂತೆ. ಆದರೆ ಅವರು ಇನ್ನುಮುಂದೆ ಹಿರಿತೆರೆಯಲ್ಲಿ ತೊಡಗಿಸಿಕೊಳ್ಳುವ ಯೋಚನೆಯಲ್ಲಿದ್ದಾರೆ. ‘ಒಲವ…’ ಚಿತ್ರದಲ್ಲಿ ನವ್ಯಾ ಬೋಲ್ಡ್ ಆಗಿ ಕಾಣಿಸಿಕೊಂಡರೆ ‘ಗುಡ್ಡದ’ಲ್ಲಿ ಪಕ್ಕಾ ಹಳ್ಳಿ ಹುಡುಗಿ ಅವತಾರ ತಾಳಿದ್ದಾರೆ.

Leave a Reply

Your email address will not be published. Required fields are marked *

Back To Top