Tuesday, 21st November 2017  

Vijayavani

1. ಇಂಧನ ಇಲಾಖೆಯಲ್ಲಿ ಅವ್ಯವಹಾರ ಆರೋಪ – ವಿಧಾನಸಭೆಯಲ್ಲಿ ಸದನ ಸಮಿತಿ ವರದಿ ಮಂಡನೆ – ಸಂಸದೆ ಶೋಭಾ ವಿರುದ್ಧ ಡಿಕೆಶಿ ಅಸ್ತ್ರ 2. ಮದ್ಯಪಾನ ನಿಷೇಧಕ್ಕೆ ಸದನದಲ್ಲಿ ಗುದ್ದಾಟ – ಮದ್ಯ ವಿರೋಧಿ ಹೋರಾಟಕ್ಕೆ ಶೆಟ್ಟರ್​ ಸಾಥ್​​​​​ – ಸಿಎಂ ವಿರುದ್ಧ ಸಂಜಯ್​​ ಪಾಟೀಲ್​​ ಕಟು ಟೀಕೆ 3. 63ರಲ್ಲಿ ಬಿಡುಗಡೆಯಾಗಿತ್ತು ಪದ್ಮಾವತಿ ಚಿತ್ರ – ಆಗಿಲ್ಲದ ವಿವಾದ ಈಗ ಸೃಷ್ಟಿ – ವಿರೋಧಿ ಪಡೆಗೆ ಪ್ರಶ್ನೆ ಮುಂದಿಟ್ಟ ಚಿತ್ರತಂಡ 4. ತ್ರಿವಳಿ ತಲಾಖ್​ಗೆ ಸದ್ಯದಲ್ಲೇ ಬ್ರೇಕ್​ – ಚಳಿಗಾಲದ ಅಧಿವೇಶನದಲ್ಲಿ ವಿಧೇಯಕ ಮಂಡನೆ – ಕೇಂದ್ರ ಸರ್ಕಾರದ ಮಹತ್ವದ ನಡೆ 5. ಐಶ್ವರ್ಯ ಫೋಟೋ ತೆಗೆಯಲು ನೂಕುನುಗ್ಗಲು – ಮಾಧ್ಯಮದವರ ನಡೆಗೆ ಬಚ್ಚನ್​​​​​​​ ಸೊಸೆ ಕಣ್ಣೀರು – ಕೈಮುಗಿದು ಕಣ್ಣೀರಿಟ್ಟ ಐಶ್ವರ್ಯ
Breaking News :

ಬ್ಲೂವೇಲ್​ಜಾಗೃತಿ, ಕೇಂದ್ರದಿಂದ ಪತ್ರ

Wednesday, 06.09.2017, 3:00 AM       No Comments

ಮಂಗಳೂರು: ‘ಬ್ಲೂವೇಲ್ ಚಾಲೆಂಜ್‘ ಅಂತರ್ಜಾಲ ಆಟದ ಮೂಲಕ ಹದಿಹರೆಯದ ಮಕ್ಕಳು ಪ್ರಾಣಾಪಾಯಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಶಿಕ್ಷಕರು ಮಕ್ಕಳ ಮೇಲೆ ಹೆಚ್ಚಿನ ನಿಗಾ ಇಡುವಂತೆ ಭಾರತ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯದೇಶದ ಎಲ್ಲ ಶಾಲೆಯ ಪ್ರಾಂಶುಪಾಲರಿಗೆ ಪತ್ರ ಬರೆದಿದೆ.

ಶಾಲೆಯಲ್ಲಿ ಮಕ್ಕಳ ವರ್ತನೆ ಮೇಲೆ ಗಮನ ಹರಿಸುತ್ತಿರಬೇಕು. ಈ ಆಟದ ದುಷ್ಪರಿಣಾಮ ವಿವರಿಸಿ, ಆಟ ಆಡದಂತೆ ಜಾಗೃತಿ ಮೂಡಿಸಬೇಕು. ಯಾವುದೇ ಮಗುವಿನ ನಡವಳಿಕೆಯಲ್ಲಿ ವ್ಯತ್ಯಾಸ ಕಂಡುಬಂದರೆ ತಕ್ಷಣ ಹೆತ್ತವರ ಗಮನಕ್ಕೆ ತರಬೇಕು. ಹೆತ್ತವರ ಜತೆ ನಿರಂತರ ಸಂಪರ್ಕದಲ್ಲಿದ್ದು, ಮಗುವಿನ ನಡವಳಿಕೆ ಗಮನಿಸುತ್ತಿರಬೇಕು ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಮೇನಕಾ ಸಂಜಯ್ ಗಾಂಧಿ ಪತ್ರದಲ್ಲಿ ತಿಳಿಸಿದ್ದಾರೆ. 0-19 ವಯೋಮಿತಿಯ ಸಂಕಷ್ಟದಲ್ಲಿರುವ ಮಕ್ಕಳ ರಕ್ಷಣೆಗಾಗಿ ದಿನದ 24 ಗಂಟೆಯೂ ಇರುವ ಉಚಿತ ತುರ್ತು ದೂರವಾಣಿ 1098ಗೆ ಕರೆ ಮಾಡಿ ತಿಳಿಸಬೇಕು ಎಂದು ಪತ್ರದಲ್ಲಿ ತಿಳಿಸಲಾಗಿದೆ.

ರಾಜ್ಯ ಶಿಕ್ಷಣ ಇಲಾಖೆಯಿಂದಲೂ ಪತ್ರ: ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿದ್ಯಾರ್ಥಿಗಳು ಬ್ಲೂವೇಲ್​ನಂಥ ಪ್ರಚೋದನಕಾರಿ ಆಟದ ಗೀಳಿಗೆ ಬೀಳದಂತೆ ಕರಪತ್ರ, ಬ್ಯಾನರ್, ಪತ್ರಿಕಾ ಪ್ರಕಟಣೆ,

ಜಾಥಾ ಮೊದಲಾದ ಕಾರ್ಯಕ್ರಮ ನಡೆಸಿ ಜಾಗೃತಿ ಮೂಡಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿಯಿಂದ ಜಿಲ್ಲಾ ಉಪನಿರ್ದೇಶಕರಿಗೆ ಹೊರಡಿಸಲಾದ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

Back To Top