Sunday, 21st January 2018  

Vijayavani

ಬಳ್ಳಾರಿಯಲ್ಲಿ ಮನೆಗೆ ಬಂದ ಜಾಂಬವಂತ- ಚಿರತೆ ಭಯದಿಂದ ತುಮಕೂರಲ್ಲಿ ಮನೆ ಬಿಟ್ಟ ಕುಟುಂಬ- ರಾಜ್ಯದಲ್ಲಿ ಹೆಚ್ಚಿದ ಕಾಡುಪ್ರಾಣಿಗಳ ಉಪಟಳ        ಕೊಳ್ಳೇಗಾಲದಲ್ಲಿ ಬಿಜೆಪಿ ಪರಿವರ್ತನಾ ರ್ಯಾಲಿ- ಮಾದಪ್ಪನ ಬೆಟ್ಟದಲ್ಲಿ ಬಿಎಸ್​ವೈ ವಿಶೇಷ ಪೂಜೆ - ಫ್ಲೆಕ್ಸ್​​ ವಿಚಾರವಾಗಿ ಕಾರ್ಯಕರ್ತರ ಗಲಾಟೆ        ಹೆಲ್ಮೆಟ್​ ಧರಿಸಿ ಬಂದ ಕದೀಮ- ನರ್ಸ್​ ಇರುವಾಗಲೇ ಕ್ಯಾಶ್ ಎಗರಿಸಿದ- ಕುಂದಾಪುರ ಖಾಸಗಿ ಆಸ್ಪತ್ರೆಯಲ್ಲಿ ಹಗಲು ದರೋಡೆ        ದೆಹಲಿ ಅಗ್ನಿ ಅವಘಡದಲ್ಲಿ 17 ಮಂದಿ ಸಜೀವದಹನ- ಪಟಾಕಿ ಕಾರ್ಖಾನೆ ಮಾಲೀಕನ ಬಂಧನ- ಮೃತರಿಗೆ 5 ಲಕ್ಷ ಪರಿಹಾರ (ಕಾರ್ಖಾನೆ ಮಾಲೀಕನ ಬಂಧನ)        ಲಾಲ್​​ಬಾಗ್​ನಲ್ಲಿ ಪುಷ್ಪ ಪ್ರದರ್ಶನ- ಸಸ್ಯಕಾಶಿಗೆ ಹರಿದು ಬಂದ ಜನ- ಲಾಲ್​ಬಾಗ್​ ಸುತ್ತಮುತ್ತ ಭಾರಿ ಟ್ರಾಫಿಕ್​       
Breaking News :

ಭಗವಾಧ್ವಜ, ಬೈಕ್​ಗೆ ಬೆಂಕಿ, ಉದ್ವಿಗ್ನ

Friday, 15.09.2017, 3:00 AM       No Comments

ಚಾಮರಾಜನಗರ: ನಗರದ ಗಾಳಿಪುರ ಬಡಾವಣೆಯ ಶ್ರೀ ವಿನಾಯಕ ದೇವಸ್ಥಾನದ ಕೇಸರಿ ಭಗವಾಧ್ವಜ ಹಾಗೂ ಬೈಕ್​ವೊಂದಕ್ಕೆ ಬೆಂಕಿ ಹಚ್ಚಲಾಗಿದೆ. ಬುಧವಾರ ತಡರಾತ್ರಿ ಅಥವಾ ಗುರುವಾರ ಬೆಳಗಿನ ಜಾವ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರಿಂದ ಧ್ವಜದ ಸ್ವಲ್ಪ ಭಾಗ ಹಾಗೂ ಬೈಕ್​ನ ಸೀಟು ಸುಟ್ಟುಹೋಗಿದೆ. ಎರಡನ್ನೂ ಪಟ್ಟಣ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೀಗಾಗಿ ಕೆಲ ಕಾಲ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಬಂದೋಬಸ್ತ್ ಮಾಡಿದ್ದು, ಹೆಚ್ಚಿನ ಅನಾಹುತ ತಪ್ಪಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧಮೇಂದ್ರ ಕುಮಾರ್ ಮೀನಾ, ಬೆಂಕಿ ಹಚ್ಚಿದ ಪ್ರಕರಣದ ಬಗ್ಗೆ ತ್ವರಿತವಾಗಿ ತನಿಖೆ ನಡೆಸಿ ಆರೋಪಿಗಳನ್ನು ಪತ್ತೆ ಹಚ್ಚಲಾಗುವುದು. ಮುಂಜಾಗ್ರತಾ ಕ್ರಮವಾಗಿ ದೇವಾಲಯದ ಬಳಿ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಆಯೋಜಿಸಲಾಗಿದೆ ಎಂದರು. ಇದೇ ವೇಳೆ ಹಿಂದುಪರ ಸಂಘಟನೆಗಳ ಒಕ್ಕೂಟ ಹಾಗೂ ಆಜಾದ್ ಹಿಂದುಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

Back To Top