Wednesday, 18th July 2018  

Vijayavani

ಶಬರಿಮಲೆ ಪ್ರವೇಶಕ್ಕೆ ಮಹಿಳೆಯರಿಗೆ ಅನುಮತಿ - ಕೇರಳ ಸರ್ಕಾರದಿಂದ ಗ್ರೀನ್​ಸಿಗ್ನಲ್        ಕೇಂದ್ರದಿಂದ ನೆರವಿನ ಮಹಾಪೂರ - ಕೃಷಿ ಯೋಜನೆ, ಮೆಗಾ ಡೈರಿ ಆರಂಭಕ್ಕೆ 900 ಕೋಟಿ ನೆರವು        ಸ್ಮಶಾನ ಜಾಗದ ವಿಚಾರವಾಗಿ ಜಟಾಪಟಿ - ಎರಡು ಗುಂಪುಗಳ ಮಧ್ಯೆ ಮಾರಾಮಾರಿ - ಘರ್ಷಣೆಯಲ್ಲಿ 50 ಮಂದಿಗೆ ಗಾಯ        ಕೃಷ್ಣಾ ನದಿಯಲ್ಲಿ ಪ್ರವಾಹದ ನರ್ತನ - ಯಾದಗಿರಿಯ ನೀಲಕಂಠನದೊಡ್ಡಿ ಗ್ರಾಮಕ್ಕೆ ಜಲದಿಗ್ಬಂಧನ - ಗ್ರಾಮಸ್ಥರು ತಲ್ಲಣ        ಮೈಸೂರು ಮಹಾರಾಣಿ ಕಾಲೇಜಿನಲ್ಲಿ ಜಿಟಿಡಿ - ಬಳ್ಳಾರಿಗೆ ಕಳಿಸೋದಾಗಿ ಅಧಿಕಾರಿಗಳಿಗೆ ವಾರ್ನಿಂಗ್- ಚಪ್ಪಾಳೆ ಹೊಡೆದ ಸ್ಟೂಡೆಂಟ್ಸ್        ಎಲ್ಲೆಡೆ ಕೇಳಿಬರ್ತಿದೆ ಧೋನಿ ನಿವೃತ್ತಿ ವಿಷಯ - ಲೀಡ್ಸ್​​ನಲ್ಲಿ ಅಂಪೈರ್ ಬಳಿ ಬಾಲ್ ಪಡೆದಿದ್ದೇಕೆ - ಕ್ರಿಕೆಟಿಗೆ ಗುಡ್​​ಬೈ ಹೇಳ್ತಾರಾ ಮಾಹಿ       
Breaking News

ಭದ್ರಾ ಮೇಲ್ದಂಡೆ ಯೋಜನೆಗೆ ಶೀಘ್ರ ಚಾಲನೆ

Tuesday, 12.06.2018, 3:00 PM       No Comments

ತುಮಕೂರು: ಅತ್ಯಂತ ಹಿಂದುಳಿದಿರುವ ಪಾವಗಡ ತಾಲೂಕಿಗೆ ಸಮರ್ಪಕ ನೀರಾವರಿ ಸೌಲಭ್ಯ ಕಲ್ಪಿಸುವುದು ಮೊದಲ ಆದ್ಯತೆ ಎಂದು ಕಾರ್ವಿುಕ ಸಚಿವ ವೆಂಕಟರಮಣಪ್ಪ ಹೇಳಿದರು.

ಸಿದ್ಧಗಂಗಾ ಮಠಕ್ಕೆ ಸೋಮವಾರ ಭೇಟಿ ನೀಡಿ ಡಾ.ಶಿವಕುಮಾರ ಸ್ವಾಮೀಜಿ ಆಶೀರ್ವಾದ ಪಡೆದ ಅವರು, ಪಾವಗಡ ತಾಲೂಕಿನಲ್ಲಿ ಸಾಕಷ್ಟು ಸಮಸ್ಯೆಗಳಿದ್ದು, ಅವುಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಮಂತ್ರಿ ಪದವಿ ಪ್ರಭಾವ ಬಳಸಿಕೊಳ್ಳುತ್ತೇನೆ ಎಂದರು.

ಪಾವಗಡ ತಾಲೂಕಿಗೆ ನೀರು ಒದಗಿಸುವ 2350 ಕೋಟಿ ರೂ. ಭದ್ರಾ ಮೇಲ್ದಂಡೆ ಯೋಜನೆಗೆ ಹಿಂದಿನ ಕಾಂಗ್ರೆಸ್ ಸರ್ಕಾರ ಅನುಮೋದನೆ ನೀಡಿದೆ. ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಸಚಿವ ಸಂಪುಟದಲ್ಲಿ ಒಪ್ಪಿಗೆ ಪಡೆದು ಕಾಮಗಾರಿ ಆರಂಭಿಸಲಾಗುವುದು ಎಂದು ಹೇಳಿದರು.

ಸಣ್ಣ ಕೈಗಾರಿಕೆ ಸಚಿವನಾಗಿದ್ದಾಗ ಪಾವಗಡದ 40 ಎಕರೆ ಪ್ರದೇಶದಲ್ಲಿ ಗಾರ್ವೆಂಟ್ಸ್ ಕೈಗಾರಿಕೆ ಆರಂಭಿಸಲಾಗಿತ್ತು. ಈಗಲೂ ಅಂತಹ ಕೈಗಾರಿಕೆ ಆರಂಭಿಸಲು ಸರ್ಕಾರದಲ್ಲಿ ಕೆಲಸ ಮಾಡಬೇಕಿದೆ. ತಾಲೂಕಿನ ನಿರುದ್ಯೋಗಿ ಯುವಕರಿಗೆ ಕೆಲಸ ಕೊಡುವ ಜವಾಬ್ದಾರಿ ನನ್ನ ಮೇಲಿದೆ. ಕಟ್ಟಡ ಕಾರ್ವಿುಕರು, ಕೈಗಾರಿಕೆಗಳಲ್ಲಿ ಕೆಲಸ ಮಾಡುವವರಿಗೆ ಇಎಸ್​ಐ, ಪಿಎಫ್ ನೀಡದೆ ವಂಚಿಸುತ್ತಿರುವ ಬಗ್ಗೆ ಸಾಕಷ್ಟು ದೂರುಗಳಿದ್ದು, ಈ ಬಗ್ಗೆ ಕ್ರಮಕೈಗೊಳ್ಳುತ್ತೇನೆ. ಶೀಘ್ರದಲ್ಲಿಯೇ ಇಲಾಖೆ ಅಧಿಕಾರಿಗಳ ಸಭೆ ಕರೆಯಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆಂಚಮಾರಯ್ಯ, ಜಿಪಂ ಸದಸ್ಯ ವೆಂಕಟೇಶ್, ಕಲ್ಲಹಳ್ಳಿ ದೇವರಾಜು ಮತ್ತಿತರರು ಇದ್ದರು.

Leave a Reply

Your email address will not be published. Required fields are marked *

Back To Top