Sunday, 22nd July 2018  

Vijayavani

ಶೀರೂರು ಶ್ರೀ ಸಾವಿನ ಹಿಂದೆ ರಮ್ಯಾ ಶೆಟ್ಟಿ ಕೈವಾಡ - ಗೋಡಂಬಿ ಜ್ಯೂಸ್ ಕುಡಿಸಿರೋ ಶಂಕೆ - ತನಿಖೆ ಚುರುಕುಗೊಳಿಸಿದ ಉಡುಪಿ ಪೊಲೀಸರು        ದೋಸ್ತಿ ಸರ್ಕಾರಕ್ಕೆ ಆಯುಷ್ಯ ಕಡಿಮೆ - ಜೆಡಿಎಸ್ ಜತೆ ಲೋಕ ಎಲೆಕ್ಷನ್​​ ಮೈತ್ರಿ ಬೇಡ - ತುಮಕೂರಿನಲ್ಲಿ ಮಾಜಿ ಶಾಸಕ ರಾಜಣ್ಣ ಅಪಸ್ವರ        ಡಿಸಿಎಂ ಪರಮೇಶ್ವರ್​ಗೆ ದೋಸ್ತಿ ಇಷ್ಟ - ದೊಡ್ಡಗೌಡರಿಗೆ ಆಗ್ತಿದೆಯಂತೆ ಕಷ್ಟ - ಲೋಕಸಭಾ ಮೈತ್ರಿಯಲ್ಲೇ ದೋಸ್ತಿ ಬಗ್ಗೆ ಎದ್ದಿದೆ ಗೊಂದಲ        ರಸ್ತೆಯಲ್ಲಿ ಬರ್ತಿದ್ದ ಬಾಲಕಿ ಮೇಲೆ ಹರಿದ ಕಾರು - ಪವಾಡ ಸದೃಶ್ಯ ರೀತಿಯಲ್ಲಿ ಪುಟಾಣಿ ಪಾರು - ಉತ್ತರ ಪ್ರದೇಶದಲ್ಲೊಂದು ಪವಾಡ        ಕೊಪ್ಪಳದ ಅಂಜನಾದ್ರಿ ಬೆಟ್ಟಕ್ಕೂ ಸಂಚಕಾರ- ಹನುಮಂತ ಹುಟ್ಟಿದ ಸ್ಥಳ ಮುಜರಾಯಿ ಇಲಾಖೆ ವಶಕ್ಕೆ - ದೋಸ್ತಿ ಸರ್ಕಾರದ ಮತ್ತೊಂದು ವಿವಾದ        ಜಲಾಶಯದಿಂದ ತುಂಗಭದ್ರಾ ನದಿಗೆ ನೀರು - ಡ್ರೋಣ್ ಕಣ್ಣಲ್ಲಿ ಮನಮೋಹಕ ನೋಟ - ಎಲ್ಲೆಲ್ಲೂ ಹಸಿರ ಸಿರಿಯ ವೈಭವ       
Breaking News

ಮಕ್ಕಳನ್ನು ಹೊಗಳಿದರೆ ಉತ್ತಮ ರಿಸಲ್ಟ್

Monday, 08.05.2017, 3:00 AM       No Comments

ನಿಮ್ಮ ಮಕ್ಕಳು ಸದಾ ಚೆನ್ನಾಗಿರಬೇಕು, ನಗುನಗುತ್ತಿರಬೇಕು ಎಂದು ನೀವು ಬಯಸುತ್ತೀರಾ? ಹಾಗಿದ್ದರೆ ಪ್ರತಿದಿನ ಅವರನ್ನು ಹೊಗಳಿ ಪ್ರೋತ್ಸಾಹಿಸುವುದನ್ನು ಮರೆಯಬೇಡಿ. ಬ್ರಿಂಗ್ಟನ್​ನಲ್ಲಿ ನಡೆದ ಬ್ರಿಟಿಷ್ ಸೈಕೋಲಾಜಿಕಲ್ ಸೊಸೈಟಿಯ ವಾರ್ಷಿಕ ಸಮಾವೇಶದಲ್ಲಿ ಡಿ ಮಾಂಟ್​ಫೋರ್ಟ್ ವಿಶ್ವವಿದ್ಯಾಲಯದ ಸ್ಯೂ ವೆಸ್ಟ್​ವುಡ್ ಅವರು ಈ ಬಗ್ಗೆ ಸಂಶೋಧನಾ ವರದಿಯನ್ನು ಮಂಡಿಸಿದ್ದು, ಪಾಲಕರಿಂದ ಮಕ್ಕಳು ಸದಾ ಕಾಲ ಉತ್ತಮ ಹಿತನುಡಿ ಮತ್ತು ಪ್ರೋತ್ಸಾಹಭರಿತ ಮಾತುಗಳನ್ನು ಕೇಳುತ್ತಿದ್ದರೆ ಮಕ್ಕಳ ಮಾನಸಿಕ ಆರೋಗ್ಯದ ಮೇಲೆ ಧನಾತ್ಮಕ ಪರಿಣಾಮ ಬೀರುತ್ತದೆ. ಮಗುವಿನ ಆರೋಗ್ಯವು ಉತ್ತಮವಾಗಿರುತ್ತದೆ ಎಂದು ವರದಿ ಹೇಳಿದೆ.

ಕೆಲವು ಪಾಲಕರು ವಿನಾಕಾರಣ ಮಕ್ಕಳನ್ನು ನಿರಂತರ ಬಯ್ಯುತ್ತಿರುತ್ತಾರೆ, ಅದು ಮಗುವಿನ ಮಾನಸಿಕ ಆರೋಗ್ಯದ ಮೇಲೆ ಪರೋಕ್ಷ ಪರಿಣಾಮ ಬೀರುತ್ತದೆ. ಕೆಟ್ಟ ಮಾತುಗಳನ್ನೇ ಕೇಳುವ ಮಗು ತನ್ನಲ್ಲಿ ನಕಾರಾತ್ಮಕ ಭಾವನೆ ಬೆಳೆಸಿಕೊಂಡು ತಾನು ನಿಷ್ಪ್ರಯೋಜಕ ಎನಿಸಿಕೊಳ್ಳುತ್ತದೆ. ಆದರೆ, ಅದರ ಬದಲಾಗಿ ಹಿತನುಡಿಗಳನ್ನು, ಒಳ್ಳೆಯ ವರ್ತನೆಯನ್ನು ಮಗುವಿನಲ್ಲಿ ತೋರ್ಪಡಿಸಿದರೆ, ಮಗುವಿನ ಮಾನಸಿಕ ಸ್ಥಿತಿ ಉತ್ತಮಗೊಳ್ಳುತ್ತದೆ ಎಂದು ವರದಿ ತಿಳಿಸಿದೆ.-ಏಜೆನ್ಸೀಸ್

Leave a Reply

Your email address will not be published. Required fields are marked *

Back To Top