Sunday, 24th September 2017  

Vijayavani

1. 3ನೇ ಮ್ಯಾಚ್‌ನಲ್ಲೂ ಆಸೀಸ್‌ ಉಡೀಸ್‌- ರೋಹಿತ್,ರಹಾನೆ,ಪಾಂಡ್ಯ ಬೊಂಬಾಟ್‌ ಆಟ- ಭಾರತಕ್ಕೆ ಸರಣಿ ವಶ 2. ದೆಹಲಿಯಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ- ಜಾವ್ಡೇಕರ್ ನೇತೃತ್ವದಲ್ಲಿ ಮೀಟಿಂಗ್‌- ತಡವಾಗಿ ದೆಹಲಿ ವಿಮಾನ ಏರಿದ ಈಶ್ವರಪ್ಪ 3. ಸಿದ್ದಾರ್ಥ್​ ಮನೆ ಮೇಲೆ ಐಟಿ ದಾಳಿ ಪ್ರಕರಣ- 650 ಕೋಟಿ ಮೌಲ್ಯದ ಅಕ್ರಮ ಆದಾಯ ಪತ್ತೆ- ದಿಗ್ವಿಜಯ ನ್ಯೂಸ್​ಗೆ ಐಟಿ‌ ಮೂಲಗಳ ಮಾಹಿತಿ 4. ವಿಶ್ವಸಂಸ್ಥೆಯಲ್ಲಿ ಮತ್ತೆ ಬಾಲ ಬಿಚ್ಚಿದ ಪಾಕಿಸ್ತಾನ- ಮಡಿಲಲ್ಲಿ ಕೆಂಡ ಇಟ್ಕೊಂಡು ಭಾರತದತ್ತ ವಾಗ್ಬಾಣ- ಇಂಡಿಯಾ ಉಗ್ರವಾದದ ತಾಯಿ ಅಂತಾ ಪಾಕ್ ಉದ್ಧಟತನ 5. ಕೋಕ್ ಸ್ಟುಡಿಯೋದಿಂದ ಸಂಗೀತ ಸಂಜೆ- ಪೆಪೋನ್ ಗಾಯನಕ್ಕೆ ಮನಸೋತ ಯುವಜನ- ಹುಚ್ಚಿದ್ದು ಕುಣಿಸಿದ ಯುವದಸರಾ
Breaking News :

ಮಕ್ಕಳು ಆಗಲಿಲ್ಲ ಎಂದು ಪತ್ನಿಯನ್ನೇ ಕೊಲೆಗೈದ ಪೇದೆ

Wednesday, 19.07.2017, 3:00 AM       No Comments

ವಿಜಯವಾಣಿ ಸುದ್ದಿಜಾಲ ಯಾದಗಿರಿ

ಮಕ್ಕಳಾಗಲಿಲ್ಲ ಎಂದು ಪೊಲೀಸ್ ಪೇದೆಯೊಬ್ಬ ಪತ್ನಿಗೆ ವಿಷವುಣಿಸಿ ಕೊಲೆ ಮಾಡಿದ್ದು, ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಹಣಮಂತಿ (26) ಕೊಲೆಯಾದವಳು. ನಗರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೇದೆ ಮಹೇಂದ್ರ ಆರೋಪಿ.

ರಾಯಚೂರು ಜಿಲ್ಲೆಯ ಕೊಪ್ಪರ ಗ್ರಾಮದ ಹಣಮಂತಿ ಜತೆ ಯಾದಗಿರಿ ಜಿಲ್ಲೆ ಕಲ್ಲನಕೇರಾ ಗ್ರಾಮದ ಪೇದೆ ಮಹೇಂದ್ರ ಮದುವೆ ಎಂಟು ವರ್ಷಗಳ ಹಿಂದೆ ನಡೆದಿತ್ತು. ಆದರೆ ಇದುವರೆಗೆ ದಂಪತಿಗೆ ಮಕ್ಕಳಾಗಿರಲಿಲ್ಲ. ಇದೇ ವಿಚಾರವಾಗಿ ದಿನವೂ ಗಂಡ-ಹೆಂಡತಿ ಮಧ್ಯೆ ಜಗಳ ನಡೆಯುತ್ತಿತ್ತು. ಮಹೇಂದ್ರ ನಿತ್ಯವೂ ಪತ್ನಿಗೆ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದ. ಅಲ್ಲದೆ ಮತ್ತೋರ್ವ ಯುವತಿ ಜತೆ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದೆ.

ಈ ವಿಚಾರವನ್ನು ಹಣಮಂತಿ ಭಾನುವಾರ ಪಾಲಕರಿಗೆ ತಿಳಿಸಿದ್ದು, ಇದರಿಂದ ಮತ್ತಷ್ಟು ಕುಪಿತಗೊಂಡ ಮಹೇಂದ್ರ, ಶೌಚಗೃಹ ಶುಚಿಗೊಳಿಸಲು ಬಳಸುವ ಹಾರ್ಪಿಕ್ ಲಿಕ್ವಿಡನ್ನು ಬಲವಂತವಾಗಿ ಆಕೆಗೆ ಕುಡಿಸಿದ್ದಾನೆ.

ತೀವ್ರ ಅಸ್ವಸ್ಥಗೊಂಡ ಹಣಮಂತಿಯನ್ನು ರಾಯಚೂರಿನ ರಿಮ್್ಸ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾಳೆ. ಮಹೇಂದ್ರನ ವಿರುದ್ಧ ಮೃತಳ ತಂದೆ ಈರಣ್ಣ ನಗರ ಠಾಣೆಗೆ ದೂರು ಸಲ್ಲಿಸಿದ್ದಾರೆ.


ವಿಷ ಸೇವಿಸಿ ಆಸ್ವಸ್ಥಗೊಂಡಿದ್ದ ಮಹಿಳೆ ರಕ್ಷಿಸಿದ ಪೊಲೀಸರು

ವಿಜಯವಾಣಿ ಸುದ್ದಿಜಾಲ ಬೆಂಗಳೂರು

ದಢೂತಿ ಎಂದು ಹಂಗಿಸುತ್ತಿದ್ದ ಗಂಡನ ವರ್ತನೆಗೆ ಬೇಸತ್ತು ಮಹಿಳೆಯೊಬ್ಬರು ಪೊಲೀಸ್ ಠಾಣೆ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಗೃಹಿಣಿಯನ್ನು ಪೊಲೀಸರು ರಕ್ಷಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ.

ವೈಯಾಲಿಕಾವಲ್ ಟೆಂಪಲ್ ಸ್ಟ್ರೀಟ್​ನ ನಿವಾಸಿ, ಖಾಸಗಿ ಕಂಪನಿ ಉದ್ಯೋಗಿ ನರೇಂದ್ರ ಬಾಬು ಜತೆ 2007ರಲ್ಲಿ ಇವರಿಗೆ ವಿವಾಹವಾಗಿತ್ತು. ಪತ್ನಿ ದಪ್ಪಗಿದ್ದರಿಂದ ಯಾವಾಗಲೂ ದಢೂತಿ ಎಂದು ಹಂಗಿಸುತ್ತಾ ನರೇಂದ್ರಬಾಬು ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಪತಿ ವಿರುದ್ಧ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪತಿ ನರೇಂದ್ರಬಾಬು ಕೂಡ ಪ್ರತಿ ದೂರು ನೀಡಿದ್ದರು. ದಂಪತಿ ಜಗಳ ಠಾಣೆ ಮೆಟ್ಟಿಲು ಹತ್ತಿತ್ತು.

ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ಠಾಣೆಯ ಬಳಿ ಬಂದ ಮಹಿಳೆ ಏಕಾಏಕಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕೂಡಲೇ ಸ್ಥಳದಲ್ಲಿದ್ದ ಪೊಲೀಸರು ಆಕೆ ಕೈಯಲ್ಲಿದ್ದ ವಿಷದ ಬಾಟಲಿ ಕಿತ್ತೆಸೆದಿದ್ದು, ಆಸ್ಪತ್ರೆಗೆ ದಾಖಲಿಸಿದ್ದಾರೆ.

ಹಲ್ಲೆ ದೃಶ್ಯ ಸೆರೆ: ನರೇಂದ್ರಬಾಬು ಪಕ್ಕದ ಮನೆಯವರಿಂದ ಮಹಿಳೆ ಮೇಲೆ ಹಲ್ಲೆ ಮಾಡಿಸಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ ಎನ್ನಲಾಗಿದ್ದು, ವೈಯಾಲಿ ಕಾವಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

Back To Top