Friday, 20th July 2018  

Vijayavani

ಶೀರೂರು ಶ್ರೀಗಳ ಸಾವು ಕೊಲೆಯಲ್ಲ - ಅವರಿಗೆ ಮೊದಲಿಂದಲೂ ಅನಾರೋಗ್ಯ ಇತ್ತು - ಉಡುಪಿಯಲ್ಲಿ ಪೇಜಾವರ ಶ್ರೀ ಸ್ಪಷ್ಟನೆ        ರಾಹುಲ್‌ ಅಪ್ಪುಗೆಗೆ ಬಿಜೆಪಿ ಸಿಡಿಮಿಡಿ - ಸದನದಲ್ಲಿನ ವರ್ತನೆ ಬಗ್ಗೆ ಕೋಪ - ರಾಹುಲ್‌ಗೆ ಸ್ಪೀಕರ್‌ ನೀತಿಪಾಠ        ಭಾಷಣಕ್ಕಿಂತ ರಾಹುಲ್‌ ಕಣ್ಣೇಟು ಫೇಮಸ್‌ - ಪ್ರಿಯಾ ವಾರಿಯರ್‌ ವಿಡಿಯೋಗೆ ಲಿಂಕ್‌ - ಸಾಮಾಜಿಕ ಜಾಲತಾಣಗಳಲ್ಲಿ ಫುಲ್‌ವೈರಲ್‌        ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿದ ಸಿಎಂ - ಕಾವೇರಿಗೆ ಮುಖ್ಯಮಂತ್ರಿ ದಂಪತಿಯಿಂದ ಪೂಜೆ - ಸಚಿವ ಡಿಕೆಶಿ, ಮಹೇಶ್‌ ಸಾಥ್‌        ಸಿಬ್ಬಂದಿ ಒತ್ತಾಯದಿಂದ ಅಲ್ಲಿಗೆ ಹೋಗಿದ್ದೆ - ಮೊಗಸಾಲೆಯಲ್ಲಿ ಬರ್ತಡೇ ಪಾರ್ಟಿ ತಪ್ಪು - ಕ್ಷಮೆ ಕೋರಿದ ವಿಧಾನಸಭೆ ಕಾರ್ಯದರ್ಶಿ        ನಿನ್ನೆ ಬೌಬೌ ಬಿರಿಯಾನಿ - ಇಂದು ಮಿಯಾಂವ್‌ ಮಿಯಾಂವ್‌ ಮಸಾಲ - ಬೆಂಗಳೂರಿನ ವಿಜಯನಗರದಲ್ಲಿ ಬೆಕ್ಕು ನಾಯಿ ಭಕ್ಷ       
Breaking News

ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಕಾಯ್ದೆ ಅನುಷ್ಠಾನ

Thursday, 14.09.2017, 3:00 AM       No Comments

ಬೆಂಗಳೂರು: ಶಾಲಾ ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಇದರ ನಿಯಂತ್ರಣಕ್ಕಾಗಿ ಕರ್ನಾಟಕ ಶಿಕ್ಷಣ ಕಾಯ್ದೆಗೆ ತಿದ್ದುಪಡಿ ತಂದಿರುವ ನಿಯಮಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲಾಗುವುದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಹೇಳಿದರು.

ಲೈಂಗಿಕ ಕಿರುಕುಳ ಯಾವುದೇ ಶಾಲೆಯಲ್ಲಿ ನಡೆದರೂ ನಾನು ಸಹಿಸುವುದಿಲ್ಲ. ಕರ್ನಾಟಕ ಶಿಕ್ಷಣ ಕಾಯ್ದೆಗೆ ತಿದ್ದುಪಡಿ ತಂದು, ಕರಡು ಪ್ರಕಟಿಸಿದ್ದೇವೆ. ಇತ್ತೀಚಿನ ದಿನಗಳಲ್ಲಿ ಶಾಲೆಗಳಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ಹೆಚ್ಚಾಗುತ್ತಿರುವುದು ಗಮನಕ್ಕೆ ಬಂದಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಾನೂನು ತಿದ್ದುಪಡಿ ಜಾರಿಗೊಳಿಸಲು ಮುಂದಾಗಿದ್ದೇವೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸರ್ಕಾರಿ ಪ್ರೌಢಶಾಲಾ ಶಿಕ್ಷಕರನು ಪದವಿ ಪೂರ್ವ ಕಾಲೇಜಿಗೆ ಹಾಗೂ ಪಿಯು ಕಾಲೇಜಿನ ಉಪನ್ಯಾಸಕರನ್ನು ಸೇವಾ ಜ್ಯೇಷ್ಠತೆ ಆಧಾರದಲ್ಲಿ ಪದವಿ ಕಾಲೇಜಿಗೆ ಬಡ್ತಿ ನೀಡುವ ಕುರಿತು ಕಾನೂನು ತಿದ್ದುಪಡಿ ತರಲು ಎದುರಾಗುತ್ತಿರುವ ತಾಂತ್ರಿಕ ಅಂಶಗಳ ಚರ್ಚೆ ನಡೆಸುತ್ತಿದ್ದೇವೆ. ಪಿಯುಸಿ ಕಲಾ ಮತ್ತು ವಿಜ್ಞಾನ ವಿಭಾಗದಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿರುವುದರಿಂದ ಹೆಚ್ಚುವರಿ ಉಪನ್ಯಾಸಕರ ಸಂಖ್ಯೆ ಹೆಚ್ಚಾಗಿದೆ. ರಾಜ್ಯದಲ್ಲಿ 1357 ಪಿಯು ಉಪನ್ಯಾಸಕರು ಹೆಚ್ಚುವರಿಯಾಗಿದ್ದಾರೆ. ಇವರನ್ನು ಸರ್ಕಾರದಿಂದ ಅನುದಾನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗೆ ನಿಯೋಜನೆ ಮಾಡುವ ಬಗ್ಗೆಯೂ ಚಿಂತನೆ ನಡೆಸುತ್ತಿದ್ದೇವೆ ಎಂದರು.

ರಾಜ್ಯ ಬಿಸಿಯೂಟ ನೌಕರರ ಸಮಸ್ಯೆ ಆಲಿಸಲು ಸೆ.14ರಂದು ಸರ್ವಶಿಕ್ಷಾ ಅಭಿಯಾನದಲ್ಲಿ ಸಂಘಟನೆಯ ಪ್ರಮುಖರ ಸಭೆ ಕರೆದಿದ್ದೇವೆ. ಬಿಸಿಯೂಟ ನೌಕರರ ಸಮಸ್ಯೆಯನ್ನು ರ್ಚಚಿಸಿ ಬಗೆಹರಿಸಲಿದ್ದೇವೆ ಎಂಬ ಭರವಸೆ ನೀಡಿದರು.

ಪರಿಷತ್ ಸದಸ್ಯರು ನಡೆಸುತ್ತಿರುವ ಪ್ರತಿಭಟನೆಗೆ ಸ್ಪಂದಿಸಿ ಅವರ ಬೇಡಿಕೆ ಕುರಿತು ರ್ಚಚಿಸಲು ಸೆ.15ರಂದು ಮುಖ್ಯಮಂತ್ರಿ ಸಭೆ ಕರೆದಿದ್ದಾರೆ. ಸಮಸ್ಯೆಗಳ ಕುರಿತು ಸುದೀರ್ಘವಾಗಿ ರ್ಚಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

 

ಸರ್ಕಾರಿ ಉದ್ಯೋಗಿ ದಂಪತಿ ಶಿಕ್ಷಕ ವರ್ಗಾವಣೆ ಪ್ರಕರಣದಲ್ಲಿ ಸೇವಾನುಭವದ ವಿನಾಯ್ತಿ ನೀಡಿದ ಮಾದರಿಯಲ್ಲೇ ಖಾಸಗಿ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿರುವ ವ್ಯಕ್ತಿಯನ್ನು ಮದುವೆಯಾದ ಶಿಕ್ಷಕರಿಗೆ 5 ವರ್ಷ ಕನಿಷ್ಠ ಸೇವಾವಧಿ ನಿಗದಿ ಪಡಿಸಿರುವುದನ್ನು ಮುಂದಿನ ತಿದ್ದುಪಡಿಯಲ್ಲಿ ಸರಿಪಡಿಸಲು ಚಿಂತನೆ ನಡೆಸಲಾಗುತ್ತದೆ.

| ತನ್ವೀರ್ ಸೇಠ್ ಸಚಿವ

Leave a Reply

Your email address will not be published. Required fields are marked *

Back To Top