Sunday, 15th July 2018  

Vijayavani

ಬಾಲಕನ ವಿಡಿಯೋ ಹಿಂದೆ ಬಿಜೆಪಿ ಕೈವಾಡ ಆರೋಪ - ವಿಡಿಯೋ ತನಿಖೆಗೆ ಸದಾನಂದಗೌಡ ಆಗ್ರಹ - ರಾಜಕಾರಣಿಗಳ ಆಟಕ್ಕೆ ಕೊಡವರ ಆಕ್ರೋಶ        26 ವರ್ಷ ಲಿಂಗಾಯತರೇ ರಾಜ್ಯ ಆಳಿದ್ದಾರೆ - ಕುಮಾರಸ್ವಾಮಿ ಸಿಎಂ ಆಗಿ 2 ತಿಂಗಳಾಗಿದೆ - ಉತ್ತರ ಕರ್ನಾಟಕ ನಿರ್ಲಕ್ಷ್ಯ ಆರೋಪಕ್ಕೆ ದೇವೇಗೌಡ ತಿರುಗೇಟು        ಕೊನೆಗೂ ಶಿರಾಡಿ ಘಾಟ್‌ ಲೋಕಾರ್ಪಣೆ - ವಾಸ್ತು ಪ್ರಕಾರ ರೇವಣ್ಣ ಉದ್ಘಾಟನೆ - ರಾಷ್ಟ್ರೀಯ ಹೆದ್ದಾರಿ ಸಂಚಾರಕ್ಕೆ ಮುಕ್ತ        ಮಟನ್ ಬಿರಿಯಾನಿ, ಚಿಕನ್ ಚಾಪ್ಸ್, ಬೋಟಿ ಗೊಜ್ಜು, ಮೊಟ್ಟೆ - 25 ಸಾವಿರ ಮಂದಿಗೆ ಭರ್ಜರಿ ಬಾಡೂಟ - ಚಾಮುಂಡೇಶ್ವರಿ ಕ್ಷೇತ್ರದ ಜನರಿಗೆ ಜಿಟಿಡಿ ಕೃತಜ್ಞತೆ        ಒಂದು ದೇಶ ಒಂದೇ ಚುನಾವಣೆ - ಮೋದಿ ಪರಿಕಲ್ಪನೆಗೆ ಸೂಪರ್‌ಸ್ಟಾರ್‌ ಬೆಂಬಲ - ಹಣ, ಸಮಯ ಉಳಿತಾಯ ಎಂದ ರಜನಿ        ಉಕ್ಕಿಹರಿಯುತ್ತಿರೋ ಕೃಷ್ಣೆ - ಬೆಳಗಾವಿ, ಚಿಕ್ಕೋಡಿ ಭಾಗದಲ್ಲಿ ಪ್ರವಾಹ ಪರಿಸ್ಥಿತಿ - ಇತ್ತ ತಮಿಳುನಾಡಿನಲ್ಲಿ ಕಾವೇರಿ ಭೋರ್ಗರೆತ       
Breaking News

ಮಧ್ಯಪ್ರದೇಶದಲ್ಲಿ ಶೇ.75 ಅಂಕ ಪಡೆದವರಿಗೆ ಉಚಿತ ಉನ್ನತ ಶಿಕ್ಷಣ

Monday, 21.08.2017, 3:00 AM       No Comments

ಭೋಪಾಲ್: ಮಧ್ಯಪ್ರದೇಶದಲ್ಲಿ ವಿಧಾನಸಭಾ ಚುನಾವಣೆಗೆ ವರ್ಷ ಬಾಕಿ ಇರುವಂತೆಯೇ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಶಿಕ್ಷಣ ವ್ಯವಸ್ಥೆ ಸುಧಾರಣೆ ಹಾಗೂ ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ಮಹತ್ವದ ಘೋಷಣೆಗಳನ್ನು ಹೊರಡಿಸಿದ್ದಾರೆ. 12ನೇ ತರಗತಿಯಲ್ಲಿ ಶೇ.75ಕ್ಕಿಂತ ಹೆಚ್ಚು ಅಂಕ ಗಳಿಸುವ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಭರವಸೆ ನೀಡಿರುವ ಚೌಹಾಣ್, ಅರಣ್ಯ ಇಲಾಖೆ ಹೊರತು ಪಡಿಸಿ ಸರ್ಕಾರದ ಉಳಿದೆಲ್ಲ ವಿಭಾಗಗಳಲ್ಲೂ ಮಹಿಳೆಯರಿಗೆ ಶೇ. 33 ಮೀಸಲು ಘೋಷಿಸಿದ್ದಾರೆ.

ಬಹುಕೋಟಿ ವ್ಯಾಪಂ ಹಗರಣದಲ್ಲಿ ಹರಾಜಾದ ರಾಜ್ಯದ ಶಿಕ್ಷಣ ಇಲಾಖೆಯ ಗೌರವ, ಪ್ರತಿಷ್ಠೆಯನ್ನು ಮರಳಿ ತರಲು ಪಣತೊಟ್ಟಿರುವ ಸಿಎಂ ಚೌಹಾಣ್, ಸಿಬಿಎಸ್​ಸಿ ಪಠ್ಯಕ್ರಮದಲ್ಲಿ ಶೇ. 85ಕ್ಕಿಂತ ಹೆಚ್ಚು ಅಂಕಗಳಿಗೆ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಶುಲ್ಕವನ್ನೂ ಭರಿಸುವ ಭರವಸೆ ನೀಡಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಪಾಲ್ಗೊಂಡಿದ್ದ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆರ್ಥಿಕ ತೊಂದರೆಯಿಂದಾಗಿಯೇ ರಾಜ್ಯದಲ್ಲಿ ಹಲವರು 12ನೇ ತರಗತಿ ಬಳಿಕ ಶಿಕ್ಷಣ ತೊರೆಯುತ್ತಿದ್ದಾರೆ. ಇದನ್ನು ತಪ್ಪಿಸಲು ಈ ಕ್ರಮ ಕೈಗೊಂಡಿರುವುದಾಗಿ ತಿಳಿಸಿದರು.

ಚೌಹಾಣ್ ಸಿಎಂ ಅಭ್ಯರ್ಥಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲೂ ಶಿವರಾಜ್ ಸಿಂಗ್ ಚೌಹಾಣ್ ಅವರೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಅಮಿತ್ ಷಾ ಘೋಷಿಸಿದರು.

ರಾಜ್ಯದಲ್ಲ್ಲೂ ಶೇ.33 ಮಹಿಳಾ ಮೀಸಲಾತಿ: ಕರ್ನಾಟಕದಲ್ಲಿ ಮೊದಲು ಶೇ.30 ಮಹಿಳಾ ಮೀಸಲಾತಿ ಜಾರಿಯಲ್ಲಿತ್ತು. ಆದರೆ 2015ರಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಮಾಡಿದ ಶಿಫಾರಸು ಪರಿಗಣಿಸಿ ರಾಜ್ಯ ಸರ್ಕಾರ ಈ ಮೀಸಲಾತಿ ಪ್ರಮಾಣವನ್ನು ಶೇ.33ಕ್ಕೆ ಏರಿಕೆ ಮಾಡಿತು. ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಶೇ.50 ಮಹಿಳಾ ಮೀಸಲು ಜಾರಿಯಲ್ಲಿದೆ. -ಏಜೆನ್ಸೀಸ್

 

Leave a Reply

Your email address will not be published. Required fields are marked *

Back To Top