Thursday, 19th July 2018  

Vijayavani

ತೆರೆದ ವಾಹನದಲ್ಲಿ ಶೀರೂರು ಶ್ರೀ ಮೆರವಣಿಗೆ - ಉಡುಪಿ ತಲುಪಿದ ಶ್ರೀಗಳ ಪಾರ್ಥಿವ ಶರೀರ - ಭಕ್ತರಲ್ಲಿ ಮಡುಗಟ್ಟಿದ ಶೋಕ        ಶೀರೂರು ಶ್ರೀ ಅಸಹಜ ಸಾವು - ರಥಬೀದಿಯಲ್ಲಿ 45 ನಿಮಿಷ ಸಾರ್ವಜನಿಕ ದರ್ಶನ - ಶೀರೂರಿಗೆ ಡಿಸಿ, ಜಿಪಂ ಸಿಇಓ ಆಗಮನ        ಶೀರೂರು ಶ್ರೀ ಅಹಸಜ ಸಾವು ಹಿನ್ನೆಲೆ - ಶೀರೂರು ಮಠಕ್ಕೆ ಫೋರೆನ್ಸಿಕ್ ತಜ್ಞರ ಭೇಟಿ - ಶ್ರೀಗಳ ಲ್ಯಾಪ್​ಟಾಪ್ ಪರಿಶೀಲನೆ        ರಾಜ್ಯದಲ್ಲಿ ಮಹಾ ಮಳೆಯ ಅಬ್ಬರ - ಮಡಿಕೇರಿಯ ಹಾರಂಗಿ ಜಲಾಶಯ ಭರ್ತಿ - ವಿಶೇಷ ಪೂಜೆ ಸಮರ್ಪಿಸಿದ ಸಿಎಂ        ನಾಳೆ ಕೇಂದ್ರ ಸರ್ಕಾರಕ್ಕೆ ಅವಿಶ್ವಾಸ ಪರೀಕ್ಷೆ - ಮೋದಿ ಸರ್ಕಾರದ ಬೆಂಬಲಕ್ಕೆ ನಿಂತ ಶಿವಸೇನೆ -ನಡೆಯೋದಿಲ್ವಾ ಸೋನಿಯಾ ಆಟ?        ಐನೂರಾಯ್ತು, 2 ಸಾವಿರ ಆಯ್ತು - ಆರ್​ಬಿಐನಿಂದ ಈಗ 100ರ ಹೊಸ ನೋಟು ಬಿಡುಗಡೆ - ನೇರಳೆ ಬಣ್ಣದಲ್ಲಿ ಬರಲಿದೆ ನೂರು ರೂ.       
Breaking News

ಮನೆ ಮನೆಗೆ ಕುಮಾರಣ್ಣ ಅಭಿಯಾನಕ್ಕೆ ಚಾಲನೆ

Thursday, 05.10.2017, 3:03 AM       No Comments

ತುಮಕೂರು: ಮುಖ್ಯಮಂತ್ರಿ ಸಿದ್ದರಾಮಯ್ಯನಿಗೆ ದುರಹಂಕಾರ ಜಾಸ್ತಿಯಾಗಿದೆ. ಅಧಿಕಾರ ಹಾಗೂ ಹಣ ಪಕ್ಷದ ಬಗ್ಗೆ ಲಘುವಾಗಿ ಮಾತನಾಡಿಸುತ್ತಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಗುಡುಗಿದರು.

ಜೆಡಿಎಸ್ ರಾಜ್ಯಾದ್ಯಂತ ಹಮ್ಮಿಕೊಂಡಿರುವ ‘ಮನೆ ಮನೆಗೆ ಕುಮಾರಣ್ಣ’ ಕಾರ್ಯಕ್ರಮಕ್ಕೆ ಸಿದ್ಧಗಂಗಾ ಮಠದಲ್ಲಿ ಚಾಲನೆ ನೀಡಿ ಮಾತನಾಡಿದರು. ಕಾಂಗ್ರೆಸ್ ದೇಶದಲ್ಲಿಯೇ ನೆಲಕಚ್ಚಿದೆ. ಹಾಗಾಗಿ, ಕರ್ನಾಟಕದಲ್ಲಿ ಕಾಂಗ್ರೆಸ್ ಮರುಪ್ರತಿಷ್ಠಾಪಿಸಲು ಹಣದ ಹೊಳೆ ಹರಿಸ ಲಾಗುತ್ತಿದೆ. ಸಿದ್ದರಾಮಯ್ಯ ಜೆಡಿಎಸ್ ಬಗ್ಗೆ ಲಘುವಾಗಿ ಮಾತನಾಡುವುದನ್ನು ಗಮನಿಸಿದ್ದೇನೆ. ನಮ್ಮ ಶಕ್ತಿ ಮುಂದಿನ ಚುನಾವಣೆಯಲ್ಲಿ ಗೊತ್ತಾಗಲಿದೆ. ನಾನು ಅಭ್ಯರ್ಥಿಗಳನ್ನು ಗೆಲ್ಲಿಸುತ್ತೇನೆ, ಸೋಲಿಸುತ್ತೇನೆ ಎಂದು ಹೇಳಲ್ಲ. ಕಾರ್ಯಕರ್ತರೇ ನಮ್ಮ ಪಕ್ಷದ ಆಸ್ತಿ ಎಂದರು. ಹಿಂದುಳಿದ ಸಮುದಾಯದ ಸಿದ್ದರಾಮಯ್ಯ ಅವರನ್ನು ಗುರುತಿಸಿ ಡಿಸಿಎಂ ಮಾಡಿದ್ದೆ. ಅವರು ನಮ್ಮನ್ನು ಬಿಟ್ಟು ಕಾಂಗ್ರೆಸ್ ಸೇರಿದರು. ಅವರನ್ನು ಕಾಂಗ್ರೆಸ್​ಗೆ ಕರೆದುಕೊಂಡು ಹೋಗಿದ್ದ ಮಾಜಿ ಸಿಎಂ ಎಸ್.ಎಂ.ಕೃಷ್ಣ, ಎಚ್.ವಿಶ್ವನಾಥ್ ಅವರೇ ಪಕ್ಷದಿಂದ ಹೊರಬಂದಿದ್ದಾರೆ. ಇದರಿಂದ ಸಿದ್ದರಾಮಯ್ಯ ಅವರ ಮನಸ್ಥಿತಿ ಅರ್ಥಮಾಡಿಕೊಳ್ಳಬಹುದು ಎಂದು ಪಕ್ಕದಲ್ಲಿಯೇ ಕುಳಿತಿದ್ದ ವಿಶ್ವನಾಥ್ ಕಡೆ ತಿರುಗಿ ಹೇಳಿದರು. ಜೆಡಿಎಸ್ ಬಂಡಾಯ ಶಾಸಕರಿಂದ ಕಾಂಗ್ರೆಸ್ ಉನ್ನತಿಯೋ, ಅವನತಿಯೋ ಕಾದುನೋಡಿ ಎಂದು ಮುಗುಳ್ನಕ್ಕರು.

ರಾಜ್ಯದ 224 ಕ್ಷೇತ್ರಗಳಿಗೂ ಜೆಡಿಎಸ್ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ. ನವೆಂಬರ್ ಅಂತ್ಯ ಅಥವಾ ಡಿಸೆಂಬರ್ ಆರಂಭದಲ್ಲಿ ಎಲ್ಲ ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳನ್ನು ಘೊಷಿಸಲಾಗುವುದು.

| ಎಚ್.ಡಿ.ದೇವೇಗೌಡ, ಜೆಡಿಎಸ್ ವರಿಷ್ಠ

ಮಗನ ಆರೋಗ್ಯಕ್ಕಾಗಿ ಯಾಗ

ಎಚ್.ಡಿ.ಕುಮಾರಸ್ವಾಮಿ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿ ವಿಶ್ರಾಂತಿ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಮಗನ ಆರೋಗ್ಯ ಸುಧಾರಣೆಗೆ ಪ್ರಾರ್ಥಿಸಿ ಸಿದ್ಧಗಂಗೆಯ ಸಿದ್ಧಲಿಂಗೇಶ್ವರರ ಸನ್ನಿಧಿಯಲ್ಲಿ ಎಚ್.ಡಿ. ದೇವೇಗೌಡ ಹೋಮ, ಹವನ ಹಾಗೂ ಯಾಗ ನೆರವೇರಿಸಿದರು.

 ಎಚ್​ಡಿಕೆ ಹುಬ್ಬಳ್ಳಿ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್

ಹುಬ್ಬಳ್ಳಿ: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರ ಹುಬ್ಬಳ್ಳಿಯ ಬಾಡಿಗೆ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಕೆಲ ವಸ್ತುಗಳು ಸುಟ್ಟು ಕರಕಲಾಗಿವೆ. ಭೈರಿದೇವರಕೊಪ್ಪದ ಮಾಯಕಾರ ಕಾಲನಿಯಲ್ಲಿನ ನಿವಾಸದಲ್ಲಿ ರಾತ್ರಿ 12 ಗಂಟೆ ಹೊತ್ತಿಗೆ ಶಾರ್ಟ್ ಸರ್ಕ್ಯೂಟ್ ಆಗಿ, ವಸ್ತುಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಎರಡು ಸೋಫಾ ಸೆಟ್ ಸುಟ್ಟು ಹೋಗಿದ್ದು, ಬೆಡ್ ರೂಂಗೂ ಬೆಂಕಿ ಆವರಿಸಿಕೊಂಡು ಕೆಲ ವಸ್ತುಗಳು ಕರಕಲಾಗಿವೆ. ಕೂಡಲೇ ಎಚ್ಚೆತ್ತ ಮನೆಯ ಕೆಲಸಗಾರರು ಹಾಗೂ ಪೊಲೀಸ್ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

Leave a Reply

Your email address will not be published. Required fields are marked *

Back To Top