Thursday, 21st June 2018  

Vijayavani

ಮೈತ್ರಿ ಸರ್ಕಾರದಲ್ಲಿ ಮತ್ತೆ ತಾರತಮ್ಯತೆ - ರೇವಣ್ಣ ಕಾರ್​​​ಗೆ ಗೇಟ್​​ ಓಪನ್​​, ದೇಶಪಾಂಡೆಗೆ ನಟರಾಜ ಸರ್ವಿಸ್​​        ಅಂದು ಹೇಳಿದ್ದೊಂದು.. ಇಂದು ಮಾಡಿದ್ದೊಂದು - ಸಂಡೂರಿನಲ್ಲಿ ಕೊಟ್ಟು ಮಾತು ಮರೆತ ಸಿಎಂ - ಮತ್ತೆ ಗಣಿಗಾರಿಕೆಗೆ ಅವಕಾಶ        ಡಿಕೆಶಿ ಡೈರಿಯಲ್ಲಿ ಕೆಜಿ ಕೋಡ್​ ವಿಚಾರ - ದೆಹಲಿಯಿಂದ ಆಗಮಿಸಿದ ಇಡಿ ತಂಡ - ಡಿಕೆಶಿ ಸೇರಿ ಐವರು ವಿರುದ್ಧ ಇಡಿ FIR ಸಾಧ್ಯತೆ        ಶಕ್ತಿ ಭವನದಲ್ಲಿ ಬಜೆಟ್​​​ ಪೂರ್ವಭಾಗಿ ಸಭೆ - ಸಣ್ಣ ನೀರಾವರಿ ಇಲಾಖೆ ಜತೆ ಸಿಎಂ ಚರ್ಚೆ - ಅನುದಾನ ಭರವಸೆ ನೀಡಿದ ಎಚ್​ಡಿಕೆ        ಬಿಜಿಎಸ್​ ಆಸ್ಪತ್ರೆಯಲ್ಲಿ ಶ್ರೀಗಳಿಗೆ ಚಿಕಿತ್ಸೆ - ನಡೆದಾಡುವ ದೇವರ ಕಾಣಲು ಗಣ್ಯರ ದಂಡು - ಶ್ರೀಗಳ ಆರೋಗ್ಯ ವಿಚಾರಿಸಿದ ಬಿಎಸ್​​ವೈ        ಜಿಲ್ಲಾಸ್ಪತ್ರೆಯಲ್ಲಿ ಅನಾಥವಾಯ್ತು ಕಂದಮ್ಮ - ಶಸ್ತ್ರಚಿಕಿತ್ಸೆಗೆ ಬಂದು ಮಗು ಬಿಟ್ಟೋದ ಹೆತ್ತಮ್ಮ - ರೋಧಿಸುತ್ತಿದೆ 3 ತಿಂಗಳ ಕೂಸು       
Breaking News

ಮಳೆಗಾಲದ ಬಗ್ಗೆ ಮುನ್ನೆಚ್ಚರಿಕೆ ಇರಲಿ

Wednesday, 13.06.2018, 11:15 PM       No Comments

ಯಾದಗಿರಿ: ಮಳೆಗಾಲ ಪ್ರಾರಂಭವಾಗಿದ್ದು, ಜಿಲ್ಲೆಯಲ್ಲಿ ಸಂಭವಿಸಬಹುದಾದ ನೈಸಗರ್ಿಕ ವಿಕೋಪ ಘಟನೆಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ಸೂಚಿಸಿದ್ದಾರೆ.
ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ರಾಷ್ಟ್ರೀಯ ವಿಕೋಪ ನಿರ್ವಹಣಾ ಪ್ರಾಧಿಕಾರ ಮಾರ್ಗಸೂಚಿ ಅನ್ವಯ ಮಳೆಗಾಲಕ್ಕೆ ಸಂಬಂಧಿಸಿದಂತೆ ಸಕರ್ಾರಕ್ಕೆ ಅನುಪಾಲನಾ ವರದಿ ಸಲ್ಲಿಸಲು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದ ಅವರು, ಅಧಿಕಾರಿಗಳು ಹವಾಮಾನ ವರದಿ ತಿಳಿದಿರಬೇಕು. ಎಷ್ಟು ಮಿಮೀ. ಮಳೆ ಸುರಿದರೆ ಯಾವ ಪ್ರದೇಶಕ್ಕೆ ಹಾನಿಯಾಗುತ್ತದೆ. ಯಾವ ಪ್ರದೇಶದಲ್ಲಿ ಹೆಚ್ಚು ನೀರು ನಿಲ್ಲುತ್ತದೆ ಎಂಬ ಮಾಹಿತಿ ಇರಬೇಕು. ಅಂದಾಗ ಮಾತ್ರ ಶೀಘ್ರ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಅನುಕೂಲವಾಗುತ್ತದೆ.
ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕುಗಳ ತಹಸೀಲ್ದಾರರು ಮತ್ತು ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕೇಂದ್ರ ಸ್ಥಾನ ಬಿಡಬೇಕಾದಲ್ಲಿ ಮೇಲಧಿಕಾರಿಗಳಿಗೆ ತಿಳಿಸಬೇಕು. ರಜೆಯ ಸಮಯದಲ್ಲಿ ತಮ್ಮ ಮೊಬೈಲ್ಗಳನ್ನು ಚಾಲನೆಯಲ್ಲಿಡಬೇಕು ಎಂದು ತಾಕೀತು ಮಾಡಿದರು.
ಸುರಪುರ ತಾಲೂಕಿನ ಕಕ್ಕೇರಾ ಪುರಸಭೆ ವ್ಯಾಪ್ತಿಯಲ್ಲಿ ಬರುವ ನೀಲಕಂಠರಾಯನಗಡ್ಡಿಯ ಜನರು ಕೃಷ್ಣಾ ನದಿ ನೀರಿನಿಂದ ಪ್ರತಿ ವರ್ಷ ಮಳೆಗಾಲದಲ್ಲಿ ಸಂಪರ್ಕ ಕಳೆದುಕೊಳ್ಳುತ್ತಾರೆ. ಇಲ್ಲಿ ಈಗಾಗಲೇ ಸೇತುವೆ ನಿಮರ್ಾಣ ಕಾರ್ಯ ಪ್ರಗತಿಯಲ್ಲಿದೆ. ಅಲ್ಲಿಯವರೆಗೆ ಜನರ ಉಪಯೋಗಕ್ಕಾಗಿ ಬೋಟ್ ಹಾಗೂ ಲೈ್ ಜಾಕೆಟ್ ವ್ಯವಸ್ಥೆ ಮಾಡಿಕೊಂಡಿರಬೇಕು. ಅಲ್ಲದೇ, ಜಿಲ್ಲೆಯಲ್ಲಿ ಸಂಭವಿಸಬಹುದಾದ ಅನಾಹುತಗಳ ಹೆಚ್ಚಿನ ಹಾನಿಯನ್ನು ತಪ್ಪಿಸಲು ಮತ್ತು ಕಾಯರ್ಾಚರಣೆ ನಡೆಸಲು ಅಗ್ನಿಶಾಮಕ ಹಾಗೂ ಪೊಲೀಸ್ ಇಲಾಖೆಯು ಸಕಲ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.

Leave a Reply

Your email address will not be published. Required fields are marked *

Back To Top