Friday, 22nd June 2018  

Vijayavani

ಕೊಲೆ ಆರೋಪಿ ಬಂಧಿಸುವ ವೇಳೆ ಹೈಡ್ರಾಮ - ಖಾಕಿ ಮೇಲೆಯೇ ಹಲ್ಲೆಗೆ ಯತ್ನ - ಹಂತಕನ ಮೇಲೆ ಖಾಕಿ ಫೈರಿಂಗ್‌        ಹಣಕಾಸು ವಿಷಯಕ್ಕೆ ಗಂಡಹೆಂಡತಿ ನಡುವೆ ಫೈಟ್‌ - ಪತ್ನಿ ಮೇಲೆ ಪತಿ ಶೂಟೌಟ್‌ - ನಾಪತ್ತೆಯಾಗಿರೋ ಹಂತಕನಿಗಾಗಿ ಖಾಕಿ ತಲಾಶ್‌        ಅಗರ್ ಬತ್ತಿ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ - ಶಾರ್ಟ್‌ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಕಾರ್ಖಾನೆ - ಬೆಂಗಳೂರಿನ ಕೆಪಿ ಅಗ್ರಹಾರದಲ್ಲಿ ಘಟನೆ        ಸರ್ಕಾರದ ಅಸ್ತಿತ್ವಕ್ಕೆ ಗಂಡಾಂತರ - ಸಿಎಂ ಕೈಗೆ ಸಿಕ್ಕಿದೆ ಗುಪ್ತಚರ ವರದಿ - ಸರ್ಕಾರ ಉಳಿಸಿಕೊಳ್ಳಲು ಎಚ್‌ಡಿಕೆ ಮಾಸ್ಟರ್‌ ಪ್ಲಾನ್‌        ಹಸಿರ ಸಿರಿ ನಡುವೆ ದುರ್ನಾಥ - ವಾಕ್‌ ಹೋದವರಿಗೆ ವಾಕರಿಕೆ - ಗಬ್ಬು ನಾರುತ್ತಿದೆ ಕಬ್ಬನ್‌ಪಾರ್ಕ್‌        ಜನದಟ್ಟಣೆ ನಿಯಂತ್ರಣಕ್ಕೆ BMRCL ಪರಿಹಾರ - ಮೆಟ್ರೋ ರೈಲಿಗೆ 3 ಬೋಗಿಗಳ ಸೇರ್ಪಡೆ - ಇಂದಿನಿಂದ ನೇರಳೆ ಮಾರ್ಗದಲ್ಲಿ ಓಡಾಟ       
Breaking News

ಮಹದಾಯಿ ತಿರುವು ಯೋಜನೆ ಗೋವಾ ತಂಡ ಪರಿಶೀಲನೆ

Saturday, 13.01.2018, 3:02 AM       No Comments

ಪಣಜಿ: ಮಹದಾಯಿ ನದಿ ತಿರುವಿಗಾಗಿ ಕರ್ನಾಟಕ ಅಣೆಕಟ್ಟೆ ನಿರ್ಮಾಣ ಕಾಮಗಾರಿ ಕೈಗೊಂಡಿರುವುದನ್ನು ಪರಿಶೀಲಿಸಲು ಗೋವಾ ಸರ್ಕಾರ ನಿಯೋಗವೊಂದನ್ನು ಕಣಕುಂಬಿ ಗ್ರಾಮಕ್ಕೆ ರವಾನಿಸಿದೆ. ಈ ಬಗ್ಗೆ ಶುಕ್ರವಾರ ಮಾಹಿತಿ ನೀಡಿರುವ ಗೋವಾದ ಜಲಸಂಪನ್ಮೂಲ ಸಚಿವ ವಿನೋದ್ ಪಾಳ್ಯಾಕಾರ್, ಮಹದಾಯಿಯ ಉಪನದಿಗೆ ಅಡ್ಡಲಾಗಿ ಕರ್ನಾಟಕವು ಕಣಕುಂಬಿ ಗ್ರಾಮದಲ್ಲಿ ಅಣೆಕಟ್ಟೆ ನಿರ್ವಿುಸುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ. ಇದನ್ನು ಪರಿಶೀಲಿಸಲು ಇಂಜಿನಿಯರ್​ಗಳ ನಿಯೋಗವನ್ನು ಕಣಕುಂಬಿಗೆ ಕಳುಹಿಸುವಂತೆ ಮುಖ್ಯ ಇಂಜಿನಿಯರ್​ಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ.

ಮಹದಾಯಿ ವಿಚಾರದಲ್ಲಿ ಜ.25ರಂದು ಕರ್ನಾಟಕ ಬಂದ್ ನಡೆಸುವ ಮಾಹಿತಿಯಿದೆ. ಬಂದ್​ಗೆ ಕರೆ ನೀಡುವ ಅಧಿಕಾರ ಎಲ್ಲರಿಗೂ ಇದೆ, ಆದರೆ ಆ ಸಂದರ್ಭ ಆಸ್ತಿಪಾಸ್ತಿ ನಷ್ಟ ಮಾಡದೆ, ಶಾಂತಿಯುತವಾಗಿ ಬಂದ್ ನಡೆಸಬೇಕು.

| ರಾಮಲಿಂಗಾರೆಡ್ಡಿ ಗೃಹ ಸಚಿವ

 

ಮಹದಾಯಿ ನೀರು ಹಂಚಿಕೆ ವಿಷಯದಲ್ಲಿ ನ್ಯಾಯಾಧಿಕರಣದ ಚೌಕಟ್ಟಿನಲ್ಲಿ ಮಾತ್ರ ಮಾತುಕತೆಗೆ ಸಿದ್ಧನಿದ್ದು, ಇದೇ ನಿಲುವನ್ನು ಪತ್ರದಲ್ಲಿ ಬರೆದಿದ್ದೇನೆ. ಕರ್ನಾಟಕವು ಕಳಸಾ ಬಂಡೂರಿ ನಾಲೆ ಕಾಮಗಾರಿ ಆರಂಭಿಸಿದೆ ಎಂದಾದರೆ ಮಾಧ್ಯಮದವರೇ ಸ್ವತಃ ತೆರಳಿ ನೋಡಿ ಬಂದು ನನಗೆ ತಿಳಿಸಲಿ.

| ಮನೋಹರ್ ಪರಿಕ್ಕರ್ ಗೋವಾ ಸಿಎಂ

Leave a Reply

Your email address will not be published. Required fields are marked *

Back To Top