Thursday, 19th July 2018  

Vijayavani

ಶಬರಿಮಲೆ ಪ್ರವೇಶಕ್ಕೆ ಮಹಿಳೆಯರಿಗೆ ಅನುಮತಿ - ಕೇರಳ ಸರ್ಕಾರದಿಂದ ಗ್ರೀನ್​ಸಿಗ್ನಲ್        ಕೇಂದ್ರದಿಂದ ನೆರವಿನ ಮಹಾಪೂರ - ಕೃಷಿ ಯೋಜನೆ, ಮೆಗಾ ಡೈರಿ ಆರಂಭಕ್ಕೆ 900 ಕೋಟಿ ನೆರವು        ಸ್ಮಶಾನ ಜಾಗದ ವಿಚಾರವಾಗಿ ಜಟಾಪಟಿ - ಎರಡು ಗುಂಪುಗಳ ಮಧ್ಯೆ ಮಾರಾಮಾರಿ - ಘರ್ಷಣೆಯಲ್ಲಿ 50 ಮಂದಿಗೆ ಗಾಯ        ಕೃಷ್ಣಾ ನದಿಯಲ್ಲಿ ಪ್ರವಾಹದ ನರ್ತನ - ಯಾದಗಿರಿಯ ನೀಲಕಂಠನದೊಡ್ಡಿ ಗ್ರಾಮಕ್ಕೆ ಜಲದಿಗ್ಬಂಧನ - ಗ್ರಾಮಸ್ಥರು ತಲ್ಲಣ        ಮೈಸೂರು ಮಹಾರಾಣಿ ಕಾಲೇಜಿನಲ್ಲಿ ಜಿಟಿಡಿ - ಬಳ್ಳಾರಿಗೆ ಕಳಿಸೋದಾಗಿ ಅಧಿಕಾರಿಗಳಿಗೆ ವಾರ್ನಿಂಗ್- ಚಪ್ಪಾಳೆ ಹೊಡೆದ ಸ್ಟೂಡೆಂಟ್ಸ್        ಎಲ್ಲೆಡೆ ಕೇಳಿಬರ್ತಿದೆ ಧೋನಿ ನಿವೃತ್ತಿ ವಿಷಯ - ಲೀಡ್ಸ್​​ನಲ್ಲಿ ಅಂಪೈರ್ ಬಳಿ ಬಾಲ್ ಪಡೆದಿದ್ದೇಕೆ - ಕ್ರಿಕೆಟಿಗೆ ಗುಡ್​​ಬೈ ಹೇಳ್ತಾರಾ ಮಾಹಿ       
Breaking News

ಮಹಿಳೆಯರ ಸಬಲೀಕರಣಕ್ಕೆ ‘ವಿಜಯವಾಣಿ’ ಆದ್ಯತೆ

Wednesday, 13.06.2018, 11:11 AM       No Comments

ಗುಡಿಬಂಡೆ: ಮಹಿಳೆಯರ ಸಬಲೀಕರಣಕ್ಕೆ ವಿಜಯವಾಣಿ ಪತ್ರಿಕೆ ಅನೇಕ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿರುವುದು ಸ್ವಾಗತಾರ್ಹ ಎಂದು ಪಟ್ಟಣ ಪಂಚಾಯಿತಿ ಸದಸ್ಯೆ ಲಕ್ಷ್ಮೀಕಾಂತಮ್ಮ ಹೇಳಿದರು.

ವಿಜಯವಾಣಿ ಕನ್ನಡ ದಿನಪತ್ರಿಕೆ ಹಾಗೂ ದಿಗ್ವಿಜಯ ಸುದ್ದಿವಾಹಿನಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ‘ನಾರಿ ನಿನಗೊಂದು ಸ್ಯಾರಿ’ ಸ್ಪರ್ಧೆಯಲ್ಲಿ ವಿಜೇತರಾದ ಮಹಿಳೆಯರಿಗೆ ಪಟ್ಟಣದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಬಹುಮಾನ ವಿತರಣೆ ಸಮಾರಂಭದಲ್ಲಿ ಮಾತನಾಡಿದರು.

ನಾಲ್ಕು ಗೋಡೆಗಳ ನಡುವೆ ಜೀವನ ನಡೆಸುವ ಮಹಿಳೆಯರಿಗೆ ಎಲ್ಲ ರಂಗದಲ್ಲಿಯೂ ಹೊಸ ಕಾರ್ಯಕ್ರಮಗಳನ್ನು ಆಯೋಜಿಸಿ ಮಹಿಳಾ ಸಬಲೀಕರಣ ಮಾಡುತ್ತಿರುವುದು ಸಂತಸ ತಂದಿದೆ. ಮಹಿಳೆಯರು ದಿನಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಂಡು ಜ್ಞಾನ ವೃದ್ಧಿಸಿಕೊಳ್ಳುವ ಜತೆಗೆ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು ಎಂದರು.

ನ್ಯೂ ಪಬ್ಲಿಕ್ ಶಾಲೆ ಮುಖ್ಯಶಿಕ್ಷಕಿ ಡಿ.ಎಲ್.ಪರಿಮಳಾ ಮಾತನಾಡಿ, ಮಹಿಳೆಯರು ಜ್ಞಾನ ಹೆಚ್ಚಿಸಿಕೊಳ್ಳಲು ಪ್ರತಿದಿನ ಪತ್ರಿಕೆಗಳನ್ನು ಓದಬೇಕು ಹಾಗೂ ಪ್ರಚಲಿತ ವಿದ್ಯಮಾನಗಳ ಕುರಿತು ತಿಳಿದುಕೊಳ್ಳಬೇಕು. ಪ್ರತಿಕೆಯಲ್ಲಿ ಬರುವ ಸುದ್ದಿಗಳ ಬಗ್ಗೆ ಅನಕ್ಷರಸ್ಥರಿಗೆ ತಿಳಿಸಬೇಕು ಎಂದರು.

ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಅಧ್ಯಕ್ಷ ಎಚ್.ಪಿ.ರಾಮನಾಥ್ ಮಾತನಾಡಿ, ಡಾ.ವಿಜಯ ಸಂಕೇಶ್ವರ ಅವರು ಪ್ರತಿ ಹಳ್ಳಿಯಲ್ಲೂ ವಿಜಯವಾಣಿ ಪತ್ರಿಕೆ ಸಿಗುವಂತೆ ಮಾಡಿದ್ದಾರೆ ಎಂದು ಅವರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಸ್ಪರ್ಧೆಯಲ್ಲಿ ವಿಜೇತರಾದ ಸಕೀನಾ(ಲಕ್ಷ್ಮೀಸಾಗರ), ಎಚ್.ವಿ.ನಾಗರತ್ನಾ(ಸೊಪ್ಪಿನ ಪೇಟೆ), ವಿಮಲಮ್ಮ(ಉಪ್ಪಾರಹಳ್ಳಿ ರಸ್ತೆ), ವಿ.ಜಿ.ಸುಧಾ(ವರ್ಲಕೊಂಡ), ಜ್ಞಾನೇಶ್ವರಿ ಮನೋಹರ್(ಬಂದಾರದಲಹಳ್ಳಿ)ಗೆ ಬಹುಮಾನ ವಿತರಿಸಲಾಯಿತು. ವಿಜಯವಾಣಿ ಪತ್ರಿಕೆ ವಿತರಣಾ ವಿಭಾಗದ ಜಿಲ್ಲಾ ಪ್ರತಿನಿಧಿ ಮನೋಹರ್ ಬಾಬು, ತಾಲೂಕು ವರದಿಗಾರ ಎನ್.ವಿ.ವೆಂಕಟೇಶ್ ಮತ್ತಿತರರಿದ್ದರು.

 ವಿಜಯವಾಣಿ ಪತ್ರಿಕೆ ಇಂತಹ ಸ್ಪರ್ಧೆಗಳನ್ನು ಹಮ್ಮಿಕೊಳ್ಳುತ್ತಿರುವುದರಿಂದ ಮಹಿಳೆಯರು ಪತ್ರಿಕೆ ಓದುವ ಹವ್ಯಾಸ ಬೆಳೆಸಿಕೊಳ್ಳುತ್ತಿದ್ದಾರೆ. ಇಂತಹ ಕಾರ್ಯಕ್ರಮಗಳು ಇನ್ನೂ ಹೆಚ್ಚಾಗಿ ನಡೆಯಬೇಕು. ವಿಜಯವಾಣಿ ಪತ್ರಿಕೆಗೆ ಧನ್ಯವಾದಗಳು.

| ವಿಮಲಮ್ಮ

ವಿಜೇತೆ.

ವಿಜಯವಾಣಿ ಪತ್ರಿಕೆ ಮಹಿಳೆಯರಿಗಾಗಿ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ಸಂತಸ ತಂದಿದೆ. ಇಂತಹ ಸ್ಪರ್ಧೆಯಲ್ಲಿ ಭಾಗವಹಿಸಲು ಗ್ರಾಮದ ಮಹಿಳೆಯರು ಕಾಯುತ್ತಿದ್ದಾರೆ. ನನಗೆ ಬಹುಮಾನ ನೀಡಿದ್ದಕ್ಕಾಗಿ ವಿಜಯವಾಣಿಗೆ ಧನ್ಯವಾದಗಳು.

| ವಿ.ಜಿ.ಸುಧಾ

ಬಹುಮಾನ ವಿಜೇತೆ

Leave a Reply

Your email address will not be published. Required fields are marked *

Back To Top