Wednesday, 18th October 2017  

Vijayavani

1. ರಾತ್ರಿ ಹಾಕಿದ ಟಾರು ಬೆಳಗ್ಗೆ ಕಿತ್ತುಬಂತು- ಸರ್ಕಾರದಿಂದ ಕಾಟಾಚಾರದ ಗುಂಡಿ ಮುಚ್ಚೋಕಾರ್ಯ- ಕೋಟ್ಯಾಂತರ ರೂಪಾಯಿ ನೀರಲ್ಲಿ ಹೋಮ 2. ಬರಿಗೈಯಲ್ಲಿ ಕಾರ್ಮಿಕನಿಂದ ಮಾನ್​ಹೋಲ್​ ಸ್ವಚ್ಛತೆ- ಸುರಕ್ಷಾ ಸಾಧನ ನೀಡಿದ ಮಹಾನಗರ ಪಾಲಿಕೆ- ಮಂಗಳೂರಿನಲ್ಲಿ ಅಮಾನವೀಯ ಘಟನೆ 3. ಪರಿಸರ ಉಳಿಸಿ, ಪಟಾಕಿ ತ್ಯಜಿಸಿ ಅಭಿಯಾನಕ್ಕೆ ಆಕ್ಷೇಪ- ವರ್ತಕರೊಂದಿಗೆ ಪರಿಸರ ಪ್ರೇಮಿಗಳ ವಾಗ್ವಾದ- ಮೈಸೂರಿನಲ್ಲಿ ಪಟಾಕಿ ಜಟಾಪಟಿ 4. ಅನೈತಿಕ ಸಂಬಂಧ ತಿಳಿದು ಗಂಡ ಬಿಟ್ಟ- ಪ್ರಿಯಕರನಿಗಾಗಿ ಮಗಳಿಗೆ ಕೊಟ್ಲು ಕಾಟ- ಗಂಗಾವತಿಯ ಹಿರೇಜಂತಕಲ್​ನಲ್ಲಿ ಕ್ರೂರಿ ತಾಯಿ 5. ನೋಟ್​ಬ್ಯಾನ್​ ವಿಚಾರದಲ್ಲಿ ಕಮಲ್​ ಉಲ್ಟಾ- ಬೆಂಬಲ ವ್ಯಕ್ತಪಡಿಸಿದ್ದಕ್ಕೆ ಕ್ಷಮೆಯಾಚನೆ- ಇದು ಕಮಲ್​ ಹೊಸ ರಾಜಕೀಯ ಆಟ
Breaking News :

ಮುಂದುವರಿದ ಮಳೆ ಕೆಲವೆಡೆ ನೆಲಕಚ್ಚಿದ ಬೆಳೆ

Saturday, 20.05.2017, 3:00 AM       No Comments

ಬೆಂಗಳೂರು: ರಾಜ್ಯದಲ್ಲಿ ಮಳೆ-ಗಾಳಿ ಆರ್ಭಟ ಮುಂದುವರಿದಿದ್ದು, ಬರದ ನಡುವೆಯೂ ಕೆಲವು ಜಿಲ್ಲೆಗಳಲ್ಲಿ ಇರುವ ನೀರಿನಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ನೆಲಕಚ್ಚಿವೆ.

ಅದರಲ್ಲೂ, ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ತೋಟಗಾರಿಕಾ ಬೇಳೆಗಳು ಮಳೆಯಿಂದ ತೀವ್ರ ಹಾನಿಗೊಳಗಾಗಿವೆ. ದ್ರಾಕ್ಷಿ, ಮಾವು, ಗೋಡಂಬಿ ಬೆಳೆ ನೆಲಕಚ್ಚಿದ್ದು, ಕೊಯ್ಲಿಗೆ ಬಂದಿದ್ದ ಭತ್ತದ ಬೆಳೆಯೂ ಸಂಪೂರ್ಣ ಹಾಳಾಗಿದೆ.

ಸಿಡಿಲಿಗೆ ಬಲಿ: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕನ್ನಶೆಟ್ಟಿಹಳ್ಳಿಯಲ್ಲಿ ಸಿಡಿಲು ಬಡಿದು ವೆಂಕಟಾಚಲಪತಿ (48) ಎಂಬುವರು ಮೃತಪಟ್ಟಿದ್ದು, ಬಂಡಮಿಂದಪಲ್ಲಿಯಲ್ಲಿ ಐವರು ಸಿಡಿಲಿನಿಂದ ತೀವ್ರವಾಗಿ ಗಾಯಗೊಂಡಿದ್ದಾರೆ.

ಅಪಾರ ಹಾನಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಂದಗುಡಿ ಹೋಬಳಿ ವ್ಯಾಪ್ತಿಯಲ್ಲಿ 61 ಮನೆಗಳ ಹೆಂಚು ಮತ್ತು ಶೀಟ್​ಗಳು ಹಾರಿವೆ. ನೆಲಮಂಗಲದಲ್ಲಿ 50ಕ್ಕೂ ಅಧಿಕ ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಕರಾವಳಿ, ಚಿಕ್ಕಮಗಳೂರು, ಶಿವಮೊಗ್ಗ, ಮಂಡ್ಯ ಜಿಲ್ಲೆಗಳಲ್ಲೂ ಉತ್ತಮ ಮಳೆಯಾಗಿದ್ದು, ಬಹುತೇಕ ಕಡೆ ಗಾಳಿಗೆ ಸಿಲುಕಿ ವಿದ್ಯುತ್ ಕಂಬಗಳು, ಮರಗಳು ಧರೆಗುರುಳಿವೆ.

ಕೃಷಿಹೊಂಡಕ್ಕೆ ಬಿದ್ದು ಸಾವು

ಕೊಪ್ಪಳ: ತಾಲೂಕಿನ ಬಿಸರಳ್ಳಿಯಲ್ಲಿ ಕೃಷಿಹೊಂಡದಲ್ಲಿ ಕಾಲು ಜಾರಿ ಬಿದ್ದು, ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಮಂಜುನಾಥ ಮೋಚಿ-ಲಲಿತಮ್ಮ ದಂಪತಿ ಮಕ್ಕಳಾದ ಅಕ್ಕಮ್ಮ(8) ಮತ್ತು ಭರತ್ (6) ಮೃತರು. ಕಳೆದ 3 ದಿನಗಳ ಹಿಂದೆ ಮಳೆಯಾಗಿದ್ದು, ಊರಿನ ಪಕ್ಕದಲ್ಲಿರುವ ವಿರೂಪಾಕ್ಷ ಗೌಡಗೆ ಸೇರಿದ ಕೃಷಿ ಹೊಂಡದಲ್ಲಿ ನೀರು ಸಂಗ್ರಹವಾಗಿತ್ತು. ಶುಕ್ರವಾರದಂದು ಸಹೋದರ ಭರತ್ ಹಾಗೂ ಸಹೋದರಿ ನೇತ್ರಾ ಜತೆ ಹೊಂಡಕ್ಕೆ ಬಾಲಕಿ ಅಕ್ಕಮ್ಮ ಬಟ್ಟೆ ತೊಳೆಯಲು ಹೋಗಿದ್ದು, ಈ ವೇಳೆ ದುರಂತ ಸಂಭವಿಸಿದೆ.

ನಾಳೆಯಿಂದ ಒಣಹವೆ ಸಾಧ್ಯತೆ

ಮೇ 21ರ ಬಳಿಕ ರಾಜ್ಯದಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲ ಜಿಲ್ಲೆಗಳಲ್ಲಿ ಮೇ 20 ರಂದು ಗುಡುಗು ಸಹಿತ ಗಾಳಿ ಮಳೆಯ ಸಾಧ್ಯತೆ ಇದೆ. ಮೇ 23ರ ವರೆಗೆ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಉಡುಪಿ, ದಕ್ಷಿಣ ಕನ್ನಡ ಹಾಗೂ ಕರಾವಳಿಯ ಅಲ್ಲಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ. ಆದರೆ ಬಹುತೇಕ ಭಾಗದಲ್ಲಿ ಒಣಹವೆ ಇರಲಿದೆ ಎಂದು ಇಲಾಖೆ ಸೂಚನೆ ನೀಡಿದೆ.

ತಾಪಮಾನದಲ್ಲಿ ಏರಿಕೆ

ಉತ್ತರ ಒಳನಾಡಿನಲ್ಲಿ ತಾಪಮಾನದಲ್ಲಿ ಮತ್ತೆ ಏರಿಕೆಯಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡು ಭಾಗದಲ್ಲಿ ಸಾಮಾನ್ಯ ಉಷ್ಣಾಂಶ ದಾಖಲಾಗಿದೆ. ಕಲಬುರಗಿಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು 43 ಡಿಗ್ರಿ ಸೆ.ಉಷ್ಣಾಂಶ ದಾಖಲಾಗಿದೆ.

Leave a Reply

Your email address will not be published. Required fields are marked *

Back To Top