Saturday, 24th February 2018  

Vijayavani

ಮತ್ತೊಂದು ಸುತ್ತಿನ ರಣಕಹಳೆಗೆ ಕೈ ಸಿದ್ಧತೆ - ಇಂದಿನಿಂದ ಮೂರುದಿನ ರಾಹುಲ್ ರಾಜ್ಯ ಪ್ರವಾಸ - ಅಧ್ಯಕ್ಷರ ಆಗಮನಕ್ಕೆ ಭರ್ಜರಿ ತಯಾರಿ        ಮೈಸೂರಲ್ಲಿ ರಂಗೇರಿದ ಎಲೆಕ್ಷನ್ ಅಖಾಡ - ಸುನಿಲ್ ಬೋಸ್ ಜತೆಗಿರುವ ಜೆಡಿಎಸ್‌ ಅಭ್ಯರ್ಥಿ ಫೋಟೋ ವೈರಲ್ - ಆರೋಪ ತಳ್ಳಿ ಹಾಕಿದ ಅಶ್ವಿನ್ ಕುಮಾರ್‌        ಉದ್ಯೋಗ ಕೊಡಿಸುವುದಾಗಿ ನೇಪಾಳದಿಂದ ಕರೆಸಿದ - ಮದುವೆಯಾಗ್ತೀನಿ ಅಂತಾ ಅತ್ಯಾಚಾರವೆಸಗಿದ - ಕಾಮ ಪಿಶಾಚಿ ಹೋಟೆಲ್‌ ಕ್ಯಾಶಿಯರ್‌ ಎಸ್ಕೇಪ್‌        ಸುಪ್ರೀಂಕೋರ್ಟ್​​ ಆದೇಶಗಾಳಿಗೆ ತೂರಿ ಬಾರ್ ಓಪನ್ ​- ಎಂಜಲು ಕಾಸಿಗಾಗಿ ನಿಯಮ ಉಲ್ಲಂಘಿಸಿದ್ರಾ ಅಧಿಕಾರಿಗಳು -ದಿಗ್ವಿಜಯ ನ್ಯೂಸ್ ರಿಯಾಲಿಟಿ ಚೆಕ್‌ನಲ್ಲಿ ಅಸಲಿ ಮುಖ ಬಯಲು        ಬೋಲ್‌ವೆರ್‌ ಕೊರೆಸಿದ್ದು ಒಂದ್ಕಡೆ - ನೀರು ಚಿಮ್ಮಿದ್ದು ಇನ್ನೊಂದ್ಕಡೆ - ಚಿತ್ರದುರ್ಗದ ಹೊಳಲ್ಕೆರೆಯಲ್ಲಿ ಆಕಾಶಕ್ಕೆ ಉಕ್ಕಿದ ಗಂಗೆ       
Breaking News

ಮುಕ್ತ ವಿವಿಗಾಗಿ ಸಿಎಂ ದೆಹಲಿಗೆ

Tuesday, 12.09.2017, 3:00 AM       No Comments

ಮೈಸೂರು: ಕಗ್ಗಂಟಾಗಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಮಾನ್ಯತೆ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ವಿಷಯವಾಗಿ ರ್ಚಚಿಸಲು ಸೆ.16ರಂದು ದೆಹಲಿಗೆ ತೆರಳಲಿದ್ದು, ಸಂಬಂಧಪಟ್ಟವರ ಜತೆ ಮಾತುಕತೆ ನಡೆಸಲಿದ್ದಾರೆ.

ಮುಕ್ತ ವಿವಿ ಕುಲಪತಿ ಪ್ರೊ.ಶಿವಲಿಂಗಯ್ಯ ಅವರನ್ನು ಸೋಮವಾರ ನಗರದಲ್ಲಿರುವ ನಿವಾಸಕ್ಕೆ ಸಿಎಂ ಕರೆಸಿಕೊಂಡು ಸುದೀರ್ಘವಾಗಿ ರ್ಚಚಿಸಿದರು. ‘ಯುಜಿಸಿ ಸೂಚನೆ ಪ್ರಕಾರ ತಾಂತ್ರಿಕ, ಅರೆವೈದ್ಯಕೀಯ ಕೋರ್ಸ್​ಗಳನ್ನು ಸ್ಥಗಿತಗೊಳಿಸಲಾಗಿದೆ. ಮಾನ್ಯತೆ ನವೀಕರಣಕ್ಕೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯಗಳ ಧನಸಹಾಯ ಆಯೋಗ (ಯುಜಿಸಿ)ಕ್ಕೆ ಅಗತ್ಯ ದಾಖಲೆಗಳನ್ನು ಕಳೆದ ಫೆಬ್ರವರಿಯಲ್ಲಿಯೇ ನೀಡಲಾಗಿದೆ. ಆದರೆ, ಆ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಜತೆಗೆ, ನಮ್ಮ ಪ್ರಸ್ತಾವನೆಯನ್ನು ಒಪ್ಪಿರುವ ಅಥವಾ ತಿರಸ್ಕರಿಸಿರುವ ಕುರಿತೂ ಮಾಹಿತಿ ನೀಡಿಲ್ಲ. ಹೀಗಾಗಿ, 2016-17ನೇ ಮತ್ತು 2017-18ನೇ ಸಾಲಿನ ಮಾನ್ಯತೆ ನವೀಕರಣ ಪ್ರಸ್ತಾವನೆ ಯುಜಿಸಿಯಲ್ಲಿಯೇ ಬಾಕಿ ಉಳಿದಿದೆ’ ಎಂದು ಕುಲಪತಿ ಪ್ರೊ.ಶಿವಲಿಂಗಯ್ಯ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

‘ಮಾನ್ಯತೆ ವಿಷಯ ಕುರಿತು ಸಿಎಂ ಮಾಹಿತಿ ಪಡೆದುಕೊಂಡಿದ್ದು, ಅವರ ಸೂಚನೆ ಮೇರೆಗೆ ವರದಿಯನ್ನು ತಯಾರಿಸಿ, ನಾನೇ ಖುದ್ದಾಗಿ ಬೆಂಗಳೂರಿನ ಮುಖ್ಯಮಂತ್ರಿ ಕಚೇರಿಗೆ ಸಲ್ಲಿಸಿದ್ದೇನೆ’ ಎಂದು ಕರಾಮá-ವಿ ಕುಲಪತಿ ಪ್ರೊ.ಶಿವಲಿಂಗಯ್ಯ ತಿಳಿಸಿದರು.

Leave a Reply

Your email address will not be published. Required fields are marked *

Back To Top