Wednesday, 22nd November 2017  

Vijayavani

1. ಉಗ್ರನ ವಿರುದ್ಧ ಕೊಡಲಿಲ್ಲ ಪಾಕ್ ಸಾಕ್ಷ್ಯ – LET ಕ್ರಿಮಿ ಹಫೀಜ್ ಸಯೀದ್​ಗೆ ಕ್ಲೀನ್​ಚಿಟ್ – ಮನೆಯಿಂದ ಹೊರಬರ್ತಾನೆ ಮುಂಬೈ ದಾಳಿ ಮಾಸ್ಟರ್ ಮೈಂಡ್ 2. ಅಲೆಮಾರಿಗಳ ಮನೆ ತೆರವು ವೇಳೆ ಅಮಾನವೀಯ ವರ್ತನೆ – ನಡುರಸ್ತೆಯಲ್ಲಿ ಮಹಿಳೆಗೆ ಹೆರಿಗೆ – ದಿಗ್ವಿಜಯ ನ್ಯೂಸ್​ ವರದಿಗೆ ಡಿಸಿ ಸ್ಪಂದನೆ 3. ಹೆರಿಗೆ ವೇಳೆ ಮೃತಪಟ್ಟಿದ್ದಾಳೆ ಅಂದ್ರು ಡಾಕ್ಟರ್ಸ್​ – ಅಂತ್ಯ ಸಂಸ್ಕಾರದ ವೇಳೆ ಕಣ್ಣು ಬಿಟ್ಲಂತೆ ಬಾಣಂತಿ – ಮನೆಗೆ ತರೋವಷ್ಟರಲ್ಲಿ ಮತ್ತೆ ಸಾವಿನ ದರ್ಶನ 4. ಕೊಪ್ಪಳ ಜಿಲ್ಲಾಪ್ರವಾಸದಲ್ಲಿ ಎಚ್​ಡಿಡಿ – ಗವಿಮಠಕ್ಕೆ ಮಾಜಿ ಪ್ರಧಾನಿ ಭೇಟಿ – ಇಳಿವಯಸ್ಸಿನಲ್ಲೂ ಕಿಂಡಿಯಲ್ಲೆ ತೆರಳಿ ದರ್ಶನ 5. ಯೂರ್ಟನ್​ ವೇಳೆ ಕಾರಿಗೆ ಲಾರಿ ಡಿಕ್ಕಿ – ಡಿಕ್ಕಿ ಹೊಡೆದ ಲಾರಿಗೆ ಟ್ರಕ್ ಡ್ಯಾಶ್ – ಸೌದಿ ಹೈವೇಯಲ್ಲಿ ಹಾರಿಬಲ್ ಆಕ್ಸಿಡೆಂಟ್
Breaking News :

ಮೈಸೂರಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ

Thursday, 20.04.2017, 3:00 AM       No Comments

ಬೆಂಗಳೂರು: ನಂಜನಗೂಡು ಹಾಗೂ ಗುಂಡ್ಲುಪೇಟೆ ಕ್ಷೇತ್ರಗಳ ಉಪ ಚುನಾವಣೆ ಸೋಲಿನಿಂದ ಕಾರ್ಯಕರ್ತರಲ್ಲಿ ಕುಗ್ಗಿರುವ ಉತ್ಸಾಹವನ್ನು ಹೆಚ್ಚಿಸುವ ಸಲುವಾಗಿ ಮೇ 6 ಮತ್ತು 7ರಂದು ಮೈಸೂರಿನಲ್ಲಿ ಪಕ್ಷದ ರಾಜ್ಯ ಕಾರ್ಯಕಾರಿಣಿ ನಡೆಸಲು ಬಿಜೆಪಿ ನಿರ್ಧರಿಸಿದೆ.

ಉಪ ಚುನಾವಣೆ ಗೆದ್ದು ಬೀಗುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಲವಾದ ಹೋರಾಟ ನಡೆಸುವ ಉದ್ದೇಶದಿಂದ ಹಲವು ಕಾರ್ಯಕ್ರಮಗಳನ್ನು ಕಾರ್ಯ ಕಾರಿಣಿಯಲ್ಲಿ ನಿರ್ಧರಿಸಲಾಗುತ್ತದೆ ಎಂದು ಪಕ್ಷದ ಉನ್ನತ ಮೂಲಗಳು ಹೇಳಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಾದ ಮೈಸೂರಿ ನಲ್ಲಿಯೇ ಕಾರ್ಯಕಾರಿಣಿ ನಡೆಸಿ ಸರ್ಕಾರದ ವಿರುದ್ಧ ಕಾರ್ಯತಂತ್ರ ರೂಪಿಸಿ ಮುಂದಿನ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ಸಂದೇಶ ನೀಡುವುದು ಬಿಜೆಪಿ ನಾಯಕರ ಉದ್ದೇಶವಾಗಿದೆ.

ಉಪ ಚುನಾವಣೆಗಳು ಎಂದಿಗೂ ಆಳುವ ಸರ್ಕಾರದ ಪರವಾಗಿಯೇ ಇರುತ್ತವೆ. ಆದರೆ, ಸಾರ್ವತ್ರಿಕ ಚುನಾವಣೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲವೆಂಬ ಉತ್ಸಾಹದ ಮಾತುಗಳ ಮೂಲಕ ಕಾರ್ಯಕರ್ತರನ್ನು ಹುರಿದುಂಬಿಸುವುದು ಬಿಜೆಪಿ ಮುಖಂಡರ ಕಾರ್ಯತಂತ್ರವಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರು ರಾಜ್ಯ ಪ್ರವಾಸಕ್ಕೆ ಬರುವ ಮುನ್ನ ಪಕ್ಷವನ್ನು ಬಲಗೊಳಿಸುವ ಕಾರ್ಯಕ್ರಮಗಳಿಗೆ

ಚಾಲನೆ ನೀಡುವ ಬಗ್ಗೆಯೂ ಚರ್ಚೆ ನಡೆಯಲಿದೆ. ಮುಂದಿನ ಚುನಾವಣೆಯಲ್ಲಿ ಸ್ವಯಂಬಲದ ಮೇಲೆ ಅಧಿಕಾರ ಹಿಡಿಯುತ್ತೇವೆ.ಹೀಗಾಗಿ ಧೈರ್ಯಗೆಡಬೇಡಿ, ಮುನ್ನುಗ್ಗಿ ಎಂದು ಕಾರ್ಯಕಾರಿಣಿಯಲ್ಲಿ ಕಾರ್ಯಕರ್ತರಿಗೆ ಬಿಜೆಪಿ ಕರೆ ನೀಡಲಿದೆ. ಜು.16 ಹಾಗೂ 17ರಂದು ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ವಿಶಾಖಪಟ್ಟಣದಲ್ಲಿ ನಡೆಯಲಿದ್ದು, ಅದಕ್ಕೂ ಮುನ್ನ ರಾಜ್ಯ ಬಿಜೆಪಿಯಲ್ಲಿ ಆತ್ಮವಿಶ್ವಾಸ ಮರುಕಳಿಸಿದೆ ಎಂಬ ಸಂದೇಶ ಹೈಕಮಾಂಡ್ ನಾಯಕರಿಗೆ ರವಾನೆಯಾಗಬೇಕು ಎಂಬುದು ಪಕ್ಷದ ಹಿರಿಯ ನಾಯಕರ ಉದ್ದೇಶ ಎನ್ನಲಾಗಿದೆ. ಅದಕ್ಕೆ ಪೂರಕವಾಗಿ ರಾಜ್ಯ ಕಾರ್ಯಕಾರಿಣಿಯಲ್ಲಿ ಚರ್ಚೆ ನಡೆಯಲಿದೆ.

ಒಗ್ಗಟ್ಟು ತರುವ ಯತ್ನ: ಪಕ್ಷದಲ್ಲಿ ಎಷ್ಟೇ ಪ್ರಯತ್ನ ನಡೆಸಿದರೂ ಒಮ್ಮತ ಮೂಡುತ್ತಿಲ್ಲ. ಮುಖಂಡರ ನಡುವೆ ಭಿನ್ನಮತ ತೊಡೆದು ಹಾಕಲು ಸಾಧ್ಯವಾಗುತ್ತಿಲ್ಲ. ನಾಯಕರ ನಡುವಿನ ಒಡಕನ್ನು ತೊಡೆದು ಹಾಕುವ ಬಗ್ಗೆಯೂ ಕಾರ್ಯಕಾರಿಣಿಯಲ್ಲಿ ಚರ್ಚೆ ನಡೆಸುವ ಸಾಧ್ಯತೆಗಳಿವೆ ಎಂದು ಬಿಜೆಪಿ ಮೂಲಗಳು ಖಚಿತಪಡಿಸಿವೆ.

Leave a Reply

Your email address will not be published. Required fields are marked *

Back To Top