Sunday, 21st October 2018  

Vijayavani

ಅರ್ಜುನ್‌ ಸರ್ಜಾಕಡೆಯಿಂದ ಬೆದರಿಕೆ ಕರೆ - ಕಾನೂನು ಹೋರಾಟದ ಬಗ್ಗೆ ದಾಖಲೆ ಸಂಗ್ರಹ - ಸುದ್ದಿಗೋಷ್ಠಿಯಲ್ಲಿ ಶ್ರುತಿ ಗಂಭೀರ ಆರೋಪ        ಭಾವೈಕ್ಯತೆ ಶ್ರೀಗಳಿಗೆ ಕಣ್ಣೀರ ವಿದಾಯ - ಕ್ರಿಯಾಸಮಾಧಿಯಲ್ಲಿ ಸಿದ್ದಲಿಂಗ ಶ್ರೀ ಲೀನ - ಭಕ್ತಸಾಗರದಿಂದ ತೋಂಟದಾರ್ಯರಿಗೆ ಅಂತಿಮ ನಮನ        ಡಿಕೆಶಿ ಶೋ ಮಾಡೋದು ಬಿಡ್ಬೇಕು - ಪಕ್ಷದ ಪರ ಕೆಲಸ ಮಾಡ್ಬೇಕು - ಬಳ್ಳಾರಿ ಪ್ರಚಾರದಲ್ಲಿ ಬಯಲಾಯ್ತು ಜಾರಕಿಹೊಳಿ ಸಿಟ್ಟು        ಸಿಎಂ ಎಚ್‌ಡಿಕೆ ಮತ್ತೆ ಟೆಂಪಲ್‌ರನ್‌ - ಶಕ್ತಿ ದೇವತೆ ಸನ್ನಿಧಿಗೆ ಕುಮಾರಸ್ವಾಮಿ - ಮಹಾರಾಷ್ಟ್ರದ ತುಳಜಾ ಭವಾನಿ ದೇಗುಲಕ್ಕೆ ಭೇಟಿ        ಶಿರಡಿ ಸಾಯಿ ಸಮಾಧಿ ಶತಮಾನೋತ್ಸವ ಹಿನ್ನೆಲೆ - ಸಾಯಿ ಸನ್ನಿಧಿಗೆ ಭಕ್ತ ಸಾಗರ - ನಾಲ್ಕು ದಿನದಲ್ಲಿ 5 ಕೋಟಿ ರೂಪಾಯಿ ಕಾಣಿಕೆ        ರೋಡ್ ರೋಲರ್​ನ್ನೂ ಬಿಡದ ಕಳ್ಳರು - ವರ್ತೂರು ಬಳಿ ನಿಲ್ಲಿಸಿ ಎಸ್ಕೇಪ್ ಆದ ಚೋರರು - ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ       
Breaking News

ಯಾರಿದು ನಕಲಿ ದರ್ಶನ್?

Thursday, 14.06.2018, 3:00 AM       No Comments

ಅಭಿಮಾನಿಗಳಿಗೆ ಮಾಹಿತಿ ನೀಡುವ ಸಲುವಾಗಿ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುತ್ತಾರೆ ದರ್ಶನ್. ಆದರೆ ಇತ್ತೀಚೆಗೆ ದರ್ಶನ್ ಫೇಸ್​ಬುಕ್ ಖಾತೆ ನೋಡಿದ ಅನೇಕರು ಹೌಹಾರುವಂತಾಗಿತ್ತು. ಅದಕ್ಕೆ ಕಾರಣ; ಕೆಲವು ಅವಹೇಳನಕಾರಿ ಪೋಸ್ಟ್ ಗಳು. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಮನಬಂದಂತೆ ಗೀಚಿದ ಬರಹಗಳು ಫೇಸ್​ಬುಕ್​ನಲ್ಲಿ ರಾರಾಜಿಸಿವೆ. ಸ್ವಲ್ಪ ಪರಿಶೀಲಿಸಿ ನೋಡಿದ ಬಳಿಕ ಗೊತ್ತಾಗಿದ್ದೇನೆಂದರೆ ಅದು ದರ್ಶನ್ ಹೆಸರಲ್ಲಿ ಸೃಷ್ಟಿಯಾಗಿರುವ ನಕಲಿ ಖಾತೆಯ ಕಿತಾಪತಿ! ಅದನ್ನು ಕಂಡು ಸ್ವತಃ ದರ್ಶನ್ ಕೋಪಗೊಂಡಿದ್ದಾರೆ. ‘ಇತ್ತೀಚೆಗೆ ತಿಳಿದುಬಂದಿರುವಂತೆ ನನ್ನ ಹೆಸರಿನಲ್ಲಿ ಕೆಲವು ಕಿಡಿಗೇಡಿಗಳ ಅನೇಕ ನಕಲಿ ಫೇಸ್​ಬುಕ್ ಖಾತೆಗಳಿವೆ. ಈ ಖಾತೆಗಳಿಂದ ಕೆಲವು ವ್ಯಕ್ತಿಗಳ ಮೇಲೆ ಅವಹೇಳನಕಾರಿ ಹೇಳಿಕೆಗಳು ನೀಡುವುದು ನಮ್ಮ ಗಮನಕ್ಕೆ ಬಂದಿದೆ. ಈ ರೀತಿ ಸೋಷಿಯಲ್ ಮೀಡಿಯಾ ದುರ್ಬಳಕೆ ಮಾಡಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸೈಬರ್ ಕ್ರೖೆಮ್ ಡಿಪಾರ್ಟ್ ಮೆಂಟ್​ನವರು ಹೇಳಿದ್ದಾರೆ. ದಯಮಾಡಿ ಯಾರೂ ಇಂಥ ಕೆಲಸಗಳಲ್ಲಿ ತೊಡಗಬೇಡಿ ಎಂಬುದು ನನ್ನ ಕಳಕಳಿಯ ವಿನಂತಿ’ ಎಂದು ದರ್ಶನ್ ಟ್ವೀಟ್ ಮಾಡಿದ್ದಾರೆ.

Leave a Reply

Your email address will not be published. Required fields are marked *

Back To Top