Wednesday, 24th October 2018  

Vijayavani

ರಂಗೇರಿದ ಉಪ ಚುನಾವಣಾ ಕಣ-ಜಮಖಂಡಿಯಲ್ಲಿಂದು ಬಿಎಸ್ ವೈ ಮತಬೇಟೆ-ಸಕ್ಕರೆ ನಾಡು ಮಂಡ್ಯದಲ್ಲಿಂದು ಸಿದ್ದರಾಮಯ್ಯ ಪ್ರಚಾರ        ದೀಪಾವಳಿಯಿಂದ ಲೋಡ್​ ಶೆಡ್ಡಿಂಗ್-ಇಂಧನ ಇಲಾಖೆ ಅಧಿಕಾರಿಗಳ ಜತೆ ಸಿಎಂ ಸಭೆ-ಕತ್ತಲಲ್ಲಿ ಮುಳುಗುತ್ತಾ ಕರ್ನಾಟಕ..?        ಸಾಲಮನ್ನಾವೂ ಇಲ್ಲ, ಬೆಲೆಯೂ ಇಲ್ಲ-ಬೆವರು ಸುರಿಸಿ ಬೆಳೆದ ಬೆಳೆ ಕೇಳೋರೂ ಇಲ್ಲ-ಅನ್ನದಾತನಿಗೆ ಕಣ್ಣೀರು ತರಿಸುತ್ತಿದೆ ಈರುಳ್ಳಿ        ಬೆಂಗಳೂರಲ್ಲಿ ಅನಧಿಕೃತ ಬಿಟ್ ಕಾಯಿನ್ ATM-ಆರೋಪಿ ಹರೀಶ್ ಬಂಧನ-ಕೆಂಪ್ ಫೋರ್ಟ್​ನಲ್ಲಿದ್ದ ಎಟಿಎಂ ಪೊಲೀಸರ ವಶಕ್ಕೆ        ಕೊಳ್ಳೆಗಾಲದಲ್ಲಿ 17 ವರ್ಷಗಳಿಂದ ಕಾಮಗಾರಿ ಅಪೂರ್ಣ-ಇನ್ನೂ ಆಗಿಲ್ಲ ವಾಲ್ಮೀಕಿ ಭವನ ನಿರ್ಮಾಣ-ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ        ವಿಜಯಪುರದಲ್ಲಿ ಗಂಗಾಕಲ್ಯಾಣ ಗೋಲ್ಮಾಲ್-ಫಲಾನುಭವಿಗಳಿಗೆ ಸಿಗದ ಬೋರ್ ವೇಲ್ ಸೌಲಭ್ಯ-ಯಾರದ್ದೋ ಹೆಸರಲ್ಲಿ ಅನುದಾನ ನೀಡಿದ ಅಧಿಕಾರಿಗಳು       
Breaking News

ರಕ್ಷಿತ್‌ ರಿಚ್ಚಿಗೆ ಹೊಸ ನಿರ್ದೇಶಕ

Saturday, 18.08.2018, 3:00 AM       No Comments

ಬೆಂಗಳೂರು: ನಟ ರಕ್ಷಿತ್ ಶೆಟ್ಟಿ ಇದುವರೆಗೂ ಮಾಡಿರುವ ಬಹುತೇಕ ಸಿನಿಮಾಗಳಲ್ಲಿ ಒಂದು ಅಂಶ ಸಾಮಾನ್ಯವಾಗಿರುತ್ತದೆ. ಏನದು? ರಕ್ಷಿತ್ ನಟಿಸಿದ್ದ ಮೊದಲ ಚಿತ್ರ ‘ನಮ್ ಏರಿಯಾಲ್ ಒಂದಿನಾ’ಕ್ಕೆ ಆಕ್ಷನ್-ಕಟ್ ಹೇಳಿದ್ದು ಅರವಿಂದ್ ಕೌಶಿಕ್. ಅದು ಅವರ ಚೊಚ್ಚಲ ಚಿತ್ರವಾಗಿತ್ತು. ನಂತರ ರಕ್ಷಿತ್ ಬಣ್ಣ ಹಚ್ಚಿದ ‘ಸಿಂಪಲ್ಲಾಗ್ ಒಂದ್ ಲವ್​ಸ್ಟೋರಿ’, ‘ರಿಕ್ಕಿ’, ‘ಗೋಧಿ ಬಣ್ಣ ಸಾಧಾರಣ ಮೈಕಟ್ಟು’ ‘ಅವನೇ ಶ್ರೀಮನ್ನಾರಾಯಣ’, ‘777 ಚಾರ್ಲಿ’ಗೆ ಆಕ್ಷನ್-ಕಟ್ ಹೇಳಿದ್ದ ಎಲ್ಲ ನಿರ್ದೇಶಕರಿಗೂ ಅವು ಮೊದಲ ಸಿನಿಮಾ. ಇದೀಗ ರಕ್ಷಿತ್ ಮತ್ತೊಮ್ಮೆ ಹೊಸ ಪ್ರತಿಭೆಯೊಂದಿಗೆ ಸಿನಿಮಾ ಮಾಡುವುದಕ್ಕೆ ಪ್ಲಾ್ಯನ್ ಮಾಡಿಕೊಂಡಿದ್ದಾರೆ. ಈ ಹಿಂದೆಯೇ ಸುದ್ದಿಯಾದಂತೆ, ‘ಉಳಿದವರು ಕಂಡಂತೆ’ ಚಿತ್ರದ ಜನಪ್ರಿಯ ‘ರಿಚ್ಚಿ’ ಪಾತ್ರವನ್ನೇ ಶೀರ್ಷಿಕೆಯನ್ನಾಗಿಸಿ ಸಿನಿಮಾ ಮಾಡಲಾಗುತ್ತಿದೆ. ಅದರ ನಿರ್ದೇಶನದ ಜವಾಬ್ದಾರಿಯನ್ನು ಪಿ.ಕೆ. ರಾಹುಲ್​ಗೆ ವಹಿಸಲಾಗಿದೆ. ‘ಉಳಿದವರು ಕಂಡಂತೆ’, ‘ಕಿರಿಕ್ ಪಾರ್ಟಿ’ ಚಿತ್ರಗಳಿಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ ಅನುಭವ ರಾಹುಲ್​ಗೆ ಇದೆ. ಸದ್ಯ ಅವರು ಸ್ಕ್ರಿಪ್ಟ್ ಬರೆಯುವಲ್ಲಿ ಬಿಜಿಯಾಗಿದ್ದಾರೆ. ‘ಅವನೇ ಶ್ರೀಮನ್ನಾರಾಯಣ’, ‘777 ಚಾರ್ಲಿ’ ಸಿನಿಮಾಗಳು ಮುಗಿದ ನಂತರವೇ ಈ ಸಿನಿಮಾ ಶುರುವಾಗಲಿದೆ. ‘ಉಳಿದವರು ಕಂಡಂತೆ’ ಚಿತ್ರದ ರಿಚ್ಚಿ ಪಾತ್ರವನ್ನೇ ಮುಖ್ಯವಾಗಿಟ್ಟುಕೊಂಡು ಈ ಸಿನಿಮಾ ಮಾಡಲಾಗುತ್ತಿದೆಯಂತೆ. ಎಲ್ಲವು ಸ್ಕ್ರಿಪ್ಟ್ ಹಂತದಲ್ಲೇ ಇದ್ದು, ಶೀರ್ಷಿಕೆಯಿನ್ನೂ ಅಂತಿಮಗೊಂಡಿಲ್ಲ.

Leave a Reply

Your email address will not be published. Required fields are marked *

Back To Top