Sunday, 23rd September 2018  

Vijayavani

ಜಿಮ್​ ತರಬೇತುದಾರನ ಅಪಹರಣ ಮತ್ತು ಹಲ್ಲೆ ಪ್ರಕರಣದಲ್ಲಿ ನಟ ದುನಿಯಾ ವಿಜಯ್​ ಬಂಧನ.        ವಿಧಾನ ಪರಿಷತ್​​ 3 ಸ್ಥಾನಗಳಿಗೆ ಚುನಾವಣೆ: ನಾಮಪತ್ರ ಸಲ್ಲಿಕೆಗೆ ನಾಳೆ ಕೊನೆ ದಿನ, ಬಿಜೆಪಿ ಪಟ್ಟಿ ಇಂದು ಅಂತಿಮ        ಮೋದಿ ಕಳ್ಳ ಎಂದಿದ್ದ ರಾಹುಲ್​ ವಿರುದ್ಧ ನಿರ್ಮಲಾ ಗುಡುಗು: ರಾಹುಲ್​ ಅವರದ್ದು ಕಳ್ಳರ ಕುಟುಂಬ ಎಂದ ಸಚಿವೆ        ಹಾಸನದಲ್ಲಿ ಇಂದು ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಮುಖ್ಯಮಂತ್ರಿ ಎಚ್​ಡಿಕೆ       
Breaking News

ರಾಜತಾಂತ್ರಿಕರಿಗೆ ಅನಗತ್ಯ ಕಿರುಕುಳ

Tuesday, 13.03.2018, 3:03 AM       No Comments

ಇಸ್ಲಾಮಾಬಾದ್: ದೂತಾವಾಸದ ಅಧಿಕಾರಿಗಳಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಭಾರತ ಮತ್ತು ಪಾಕಿಸ್ತಾನಗಳ ರಾಯಭಾರ ಕಚೇರಿಗಳು ಪರಸ್ಪರ ಆರೋಪಿಸಿವೆ. ನವದೆಹಲಿಯಲ್ಲಿನ ರಾಯಭಾರ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ರಾಜತಾಂತ್ರಿಕರಿಗೆ ಅನಗತ್ಯವಾಗಿ ಕಿರುಕುಳ ನೀಡಲಾಗುತ್ತಿದೆ ಎಂದು ಪಾಕಿಸ್ತಾನ ಆರೋಪಿಸಿದೆ. ಭಾರತದ ವಿದೇಶಾಂಗ ಸಚಿವಾಲಯಕ್ಕೆ ಈ ಕುರಿತು ಆಕ್ಷೇಪ ಪತ್ರ ರವಾನಿಸಿದೆ. ತಮ್ಮ ರಾಷ್ಟ್ರದ ರಾಜತಾಂತ್ರಿಕರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸದಿದ್ದರೆ ಅವರೆಲ್ಲರನ್ನೂ ವಾಪಸು ಕರೆಯಿಸಿಕೊಳ್ಳುವುದಾಗಿ ಪತ್ರದಲ್ಲಿ ಪಾಕಿಸ್ತಾನ ಬೆದರಿಕೆ ಹಾಕಿದೆ ಎನ್ನಲಾಗಿದೆ. ಇದೇ ವೇಳೆ ಭಾರತ ಕೂಡ, ಇಸ್ಲಾಮಾಬಾದ್​ನಲ್ಲಿರುವ ಭಾರತದ ದೂತಾವಾಸಕ್ಕೆ ವಿದ್ಯುತ್ ಮತ್ತು ನೀರಿನ ಸಂಪರ್ಕವನ್ನು ಕಡಿದು ಹಾಕಿ, ಭಾರತೀಯ ದೂತಾವಾಸದ ಅಧಿಕಾರಿಗಳು ಮತ್ತು ಕುಟುಂಬ ವರ್ಗದವರಿಗೆ ಪಾಕಿಸ್ತಾನ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿದೆ.

Leave a Reply

Your email address will not be published. Required fields are marked *

Back To Top