Saturday, 22nd September 2018  

Vijayavani

‘ದಂಗೆ’ ಬಿಸಿ ತಟ್ಟುತ್ತಿದ್ದಂತೆ ದೇವರ ಸ್ತುತಿ - ಶಾರದಂಬೆ ಸನ್ನಿಧಿಯಲ್ಲಿ ಎಚ್​​ಡಿಕೆ - ಸಿಎಂಗೆ ಅಣ್ಣ ರೇವಣ್ಣ ಸಾಥ್​        ರಾಜ್ಯ ರಾಜಕೀಯ ಹಾಸನಕ್ಕೆ ಶಿಫ್ಟ್​ - ಇಂದು ಹಾಸನದಲ್ಲಿ ಜೆಡಿಎಲ್​​ಪಿ ಮೀಟಿಂಗ್​ - ದಳನಾಯಕರಿಂದ ರಣತಂತ್ರದ ಚರ್ಚೆ        ಸಿಎಂ ದಂಗೆ ಹೇಳಿಕೆ ವಿರುದ್ಧ ಬಿಜೆಪಿ ಆಕ್ರೋಶ - ಇಂದು ಕೂಡ ಹಲವೆಡೆ ಹೋರಾಟ ಸಂಭವ        ಇಂದು ಚಿಕ್ಕಮಗಳೂರಲ್ಲಿ ಸಿಎಂ ಮೀಟಿಂಗ್​ - ಅತಿವೃಷ್ಟಿ, ಅನಾವೃಷ್ಟಿ ಕುರಿತು ಚರ್ಚೆ - ಸಿಎಂಗೆ ವರದಿ ನೀಡಲಿರುವ ಡಿಸಿ        ರಾಫೆಲ್​​ ವಿಮಾನ​​​​ ಖರೀದಿ ಹಗರಣ - ಭಾರತವೇ ಅನಿಲ್​ ಅಂಬಾನಿ ಹೆಸರು ಸೂಚಿಸಿತ್ತು - ವಿವಾದಕ್ಕೆ ತುಪ್ಪ ಸುರಿದ ಹೊಲೆಂಡೆ ಹೇಳಿಕೆ        ಭುಗಿಲೆದ್ದಿರುವ ರಫೇಲ್​​ ಡೀಲ್​ ಹಗರಣ - ಪ್ರಕಟಣೆ ಹೊರಡಿಸಿದ ಫ್ರಾನ್ಸ್​​ ಸರ್ಕಾರ - ಕಂಪನಿಗಳ ಮೇಲೆ ಹಸ್ತಕ್ಷೇಪ ಇಲ್ಲವೆಂದು ಸ್ಪಷ್ಟನೆ       
Breaking News

ರೈತರ ಕಷ್ಟಗಳಿಗೆ ಸ್ಪಂದಿಸುವೆ

Monday, 11.06.2018, 1:01 PM       No Comments

ಚಿಕ್ಕಬಳ್ಳಾಪುರ: ಸಚಿವ ಸ್ಥಾನ ಸಿಗುವಂತೆ ಮಾಡಿದ ಕ್ಷೇತ್ರದ ಮತದಾರರಿಗೆ ನಾನು ಆಭಾರಿಯಾಗಿದ್ದೇನೆ ಎಂದು ಕೃಷಿ ಸಚಿವ ಎನ್.ಎಚ್.ಶಿವಶಂಕರರೆಡ್ಡಿ ಹೇಳಿದರು.

ಗೌರಿಬಿದನೂರಿನ ಆಚಾರ್ಯ ಮೈದಾನದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಭಾನುವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಎಲ್ಲ ವರ್ಗದ ಜನರ ಹಿತ ಕಾಪಾಡಿಕೊಂಡು ಮುಂದಿನ 5 ವರ್ಷಗಳಲ್ಲಿ ಉತ್ತಮ ಆಡಳಿತವನ್ನು ಸಮ್ಮಿಶ್ರ ಸರ್ಕಾರ ನೀಡಲಿದೆ ಎಂದರು.

ಕೃಷಿ ಸಾಲ ಮನ್ನಾ ಕುರಿತು ಚರ್ಚೆ ನಡೆಯುತ್ತಿದ್ದು, ರೂಪುರೇಷೆ ಸಿದ್ಧಪಡಿಸಿ ಮನ್ನಾ ಮಾಡಲಾಗುವುದು. ಮೂಲತಃ ನಾನು ಕೃಷಿಕ ಕುಟುಂಬ ಹಾಗೂ ಕೃಷಿ ಪದವೀಧರನಾದ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆ ನಡೆಸಲು ಇರುವ ಸಮಸ್ಯೆಗಳ ಅರಿವಿದೆ. ಕೃಷಿಗೆ ಸಂಬಂಧಿಸಿದಂತೆ ಕೇಂದ್ರದಿಂದ ಎಲ್ಲ ರಾಜ್ಯಗಳಿಗೆ ಅನ್ವಯವಾಗುವಂತೆ ಕೃಷಿ ನೀತಿ ಅನುಷ್ಠಾನಕ್ಕೆ ತರಬೇಕು. ಕೃಷಿಗೆ ಪೂರಕವಾದ ನೀತಿ, ಮಾರುಕಟ್ಟೆ ಸೌಲಭ್ಯ, ಬೀಜ, ರಸಗೊಬ್ಬರ ಒಳಗೊಂಡಂತೆ ಸಮಗ್ರ ನೀತಿಗಳನ್ನು ಅನುಷ್ಠಾನಕ್ಕೆ ತಂದಾಗ ರೈತರ ಭವಿಷ್ಯ ಹಸನಾಗಲು ಸಾಧ್ಯ. ಈ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತೇನೆ ಎಂದರು.

ಜಿಪಂ ಅಧ್ಯಕ್ಷ ಎಚ್.ವಿ.ಮಂಜುನಾಥ್, ಸದಸ್ಯರಾದ ಎಂ.ನರಸಿಂಹಮೂರ್ತಿ, ಪ್ರಮೀಳಾ ಪ್ರಕಾಶ್​ರೆಡ್ಡಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ಲಾ, ನಗರಸಭೆ ಅಧ್ಯಕ್ಷ ಖಲೀಂಉಲ್ಲಾ, ಉಪಾಧ್ಯಕ್ಷ ಆರ್.ಪಿ.ಗೋಪಿನಾಥ್, ಸದಸ್ಯರಾದ ಜಿ.ಬಾಲಾಜಿ, ವಿ.ರಮೇಶ್, ತಾಪಂ ಅಧ್ಯಕ್ಷ ಚಿಕ್ಕೇಗೌಡ ಮತ್ತಿತರರಿದ್ದರು. ಕಾರ್ಯಕ್ರಮಕ್ಕೂ ಮುನ್ನ ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಲಾಯಿತು.

ಶಾಸಕ ಸುಧಾಕರ್ ಆತ್ಮಾವಲೋಕನ ಮಾಡಿಕೊಳ್ಳಲಿ: ಪಿಯುಸಿ ಮಾಡಿ ಡಿಗ್ರಿ ಪ್ರಮಾಣಪತ್ರ ಕೇಳಿದರೆ ಹೇಗೆ ಎಂದು ಕೃಷಿ ಸಚಿವ ಎನ್.ಎಚ್.ಶಿವಶಂಕರರೆಡ್ಡಿ ಪರೋಕ್ಷವಾಗಿ ಚಿಕ್ಕಬಳ್ಳಾಪುರ ಶಾಸಕ ಡಾ.ಕೆ.ಸುಧಾಕರ್​ಗೆ ತಿರುಗೇಟು ನೀಡಿದರು.

ಗೌರಿಬಿದನೂರಿನ ಆಚಾರ್ಯ ಮೈದಾನದಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಭಾನುವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಮಾತನಾಡಿದ ಅವರು, ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ಶಾಸಕ ಸುಧಾಕರ್ ಮಾಡಿರುವ ಆರೋಪ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು. ನಿನ್ನೆ, ಮೊನ್ನೆ ಪಕ್ಷಕ್ಕೆ ಬಂದವರಿಂದ ನೈತಿಕತೆ ಕಲಿಯುವ ಅಗತ್ಯವಿಲ್ಲ. ಆರೋಪ ಮಾಡುವ ಮೊದಲು ಅವರು ಎಲ್ಲಿದ್ದರು, ಎಲ್ಲಿಂದ ಬಂದವರು ಎಂದು ಆತ್ಮಾಲೋಕನ ಮಾಡಿಕೊಳ್ಳಲಿ ಎಂದು ಟೀಕಿಸಿದರು.

ರಾಜಕಾರಣದಲ್ಲಿ ದುರಾಸೆ ಇರಬಾರದು. ಹಣ ಬಲದಿಂದ ರಾಜಕಾರಣ ಮಾಡಿದರೆ ಏನಾಗುತ್ತದೆ ಎಂಬುದು ಗೊತ್ತಿರುವ ವಿಷಯ. ಢೋಂಗಿ ರಾಜಕಾರಣ ಬಹಳ ಕಾಲ ಉಳಿಯಲ್ಲ. ನಾನು 1999ರಿಂದ ಸತತ 5 ಬಾರಿ ಶಾಸಕನಾಗಿ ಆಯ್ಕೆಯಾಗುತ್ತಿದ್ದೇನೆ. ಜಿಲ್ಲೆಯ ಇತಿಹಾಸದಲ್ಲಿ ಸತತವಾಗಿ ವಿಧಾನಸಭೆಗೆ ಆಯ್ಕೆಯಾಗಿರುವ ನಿದರ್ಶನ ಬೇರೆ ಇಲ್ಲ, ನನ್ನ ಶ್ರಮವನ್ನು ಪಕ್ಷ ಗುರುತಿಸಿ ಸಚಿವ ಸ್ಥಾನ ನೀಡಿದೆ ಎಂದು ತಿಳಿಸಿದರು.

 ಶಿವಶಂಕರರೆಡ್ಡಿ ಸತತ ಐದು ಬಾರಿ ಗೆಲುವು ಸಾಧಿಸುವ ಜತೆಗೆ ಕಾಂಗ್ರೆಸ್ ಕಟ್ಟಿ ಬೆಳೆಸಿದ್ದಾರೆ. ಅವರಿಗೆ ಸಚಿವ ಸ್ಥಾನ ದೊರೆತಿರುವುದು ಅವರ ಶ್ರಮಕ್ಕೆ ಸಿಕ್ಕ ಫಲವಾಗಿದೆ.

| ಕೆ.ಎನ್.ಕೇಶವರೆಡ್ಡಿ

ಅಧ್ಯಕ್ಷ, ಕಾಂಗ್ರೆಸ್ ಜಿಲ್ಲಾ ಘಟಕ 

Leave a Reply

Your email address will not be published. Required fields are marked *

Back To Top