Friday, 18th August 2017  

Vijayavani

1. ಕಾಂಗ್ರೆಸ್‌ನಲ್ಲಿ ಎಡಪಂಥಿಯರಿಗೆ ಮಾತ್ರ ಮಣೆ- ಚುನಾವಣಾ ತಂತ್ರಗಾರ ಕೈ ಗುಡ್‌ಬೈ- ಅಲ್ಪ ಸಂಖ್ಯಾತರರನ್ನ ಅತಿಯಾಗಿ ಓಲೈಸ್ತಿದ್ಯಾ ಕಾಂಗ್ರೆಸ್‌.? 2. ಜೆಡಿಎಸ್​ ಭಿನ್ನರಿಗೆಲ್ಲಾ ಇಲ್ಲಾ ಟಿಕೆಟ್​ – 3 ಕ್ಷೇತ್ರಗಳ ಟಿಕೆಟ್​​​​​​​​ಗೆ ಖಾತ್ರಿ ನೀಡದ ಖರ್ಗೆ- ತ್ರಿಶಂಕು ಸ್ಥಿತಿಯಲ್ಲಿ ಜೆಡಿಎಸ್​​​​​​ ಭಿನ್ನರ ಸ್ಥಿತಿ 3. ಸಿಲಿಕಾನ್ ಸಿಟಿಗೆ ಖತರ್ನಾಕ್​ ಗ್ಯಾಂಗ್​ ಎಂಟ್ರಿ- ಸೆಕ್ಯೂರಿಟಿ ಡ್ರೆಸ್​​​ನಲ್ಲಿ ಮಾಡ್ತಿದ್ದಾರೆ ಕಳ್ಳತನ- ಸಿಸಿ ಕ್ಯಾಮೆರಾದಲ್ಲಿ ಸೆರೆಯಾಯ್ತು ಕೃತ್ಯ 4. ರಾಜೀನಾಮೆ ಬಳಿಕ ವಿಶಾಲ್‌ ಸಿಕ್ಕಾ ಮೊದಲ ಮಾತು- ನನ್ನ ಜೀವನದ ದುಃಖದ ವಿಚಾರ ಅಂತಾ ಬೇಸರ- ಅತ್ತ ನಾನು ಕಾರಣನಲ್ಲ ಎಂದ ನಾರಾಯಣ ಮೂರ್ತಿ 5. ಯುಪಿ ಆಸ್ಪತ್ರೆಯಲ್ಲಿ ಮಕ್ಕಳ ಸಾವು ಪ್ರಕರಣ- ಹೈಕೋರ್ಟ್‌ನಿಂದ ಯೋಗಿ ಸರ್ಕಾರಕ್ಕೆ ತರಾಟೆಗೆ- ಕೂಡಲೇ ವರದಿ ನೀಡಲು ಸೂಚನೆ
Breaking News :

ರೈನಾ, ಮನೀಷ್, ರಾಹುಲ್ ವಾಪಸ್?

Sunday, 13.08.2017, 3:00 AM       No Comments

ಕೊಲಂಬೊ: ಆತಿಥೇಯ ಶ್ರೀಲಂಕಾ ವಿರುದ್ಧ ಐದು ಪಂದ್ಯಗಳ ಏಕದಿನ ಸರಣಿ ಮತ್ತು ಏಕೈಕ ಟಿ20 ಪಂದ್ಯಕ್ಕೆ ಭಾನುವಾರ ಭಾರತ ತಂಡದ ಆಯ್ಕೆ ನಡೆಯಲಿದೆ. ಸುರೇಶ್ ರೈನಾ, ಮನೀಷ್ ಪಾಂಡೆ ಹಾಗೂ ಟೆಸ್ಟ್ ತಂಡದಲ್ಲಿರುವ ಕೆಎಲ್ ರಾಹುಲ್ ತಂಡಕ್ಕೆ ಮರಳುವ ನಿರೀಕ್ಷೆ ಇದ್ದು, ಹಿರಿಯ ಆಟಗಾರರಾದ ಎಂಎಸ್ ಧೋನಿ ಹಾಗೂ ಯುವರಾಜ್ ಸಿಂಗ್​ರ ಭವಿಷ್ಯದ ಬಗ್ಗೆಯೂ ಚರ್ಚೆಯಾಗಲಿದೆ.

ಐದು ಪಂದ್ಯಗಳ ಸರಣಿ ಆಗಸ್ಟ್ 20 ರಂದು ಡಂಬುಲಾದಲ್ಲಿ ಆರಂಭವಾಗಲಿದೆ. ವಿರಾಟ್ ಕೊಹ್ಲಿ, ಸೀಮಿತ ಓವರ್​ಗಳ ಸರಣಿಗೆ ವಿಶ್ರಾಂತಿ ಪಡೆಯಲಿದ್ದಾರೆ ಎಂದು ಸುದ್ದಿಯಾಗಿತ್ತು. ಆದರೆ, 3ನೇ ಟೆಸ್ಟ್ ಆರಂಭಕ್ಕೂ ಮುನ್ನ ಕೊಹ್ಲಿ ಈ ಊಹಾಪೋಹಗಳಿಗೆ ತೆರೆ ಎಳೆದಿದ್ದು ಸರಣಿಗೆ ಲಭ್ಯವಿರುವುದಾಗಿ ತಿಳಿಸಿದ್ದಾರೆ.

ಧೋನಿ, ಯುವರಾಜ್ ಸಿಂಗ್, ಕೇದಾರ್ ಜಾಧವ್ ಹಾಗೂ ಸುರೇಶ್ ರೈನಾ ಈಗಾಗಲೇ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಫಿಟ್​ನೆಸ್ ಪರೀಕ್ಷೆಗೆ ಒಳಗಾಗುವುದರೊಂದಿಗೆ, ಏಕದಿನ ಸರಣಿಗೆ ಅಭ್ಯಾಸ ವನ್ನೂ ಆರಂಭಿಸಿದ್ದಾರೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಕಳಪೆ ಫಾಮರ್್​ನಲ್ಲಿದ್ದ ಕೇದಾರ್ ಜಾಧವ್​ಗೆ ಸ್ಥಾನ ಗಟ್ಟಿ ಮಾಡಿಕೊಳ್ಳಲು ಇನ್ನೊಂದು ಅವಕಾಶ ಸಿಗುವ ಸಾಧ್ಯತೆ ಇದೆ. ಮನೀಷ್ ಪಾಂಡೆ, ಶ್ರೇಯಸ್ ಅಯ್ಯರ್ ಹಾಗೂ ರಿಷಭ್ ಪಂತ್ ಇತ್ತೀಚೆಗೆ ಎ ತಂಡಗಳ ಏಕದಿನ ಸರಣಿಯಲ್ಲಿ ಅತ್ಯುತ್ತಮ ನಿರ್ವಹಣೆ ತೋರಿದ್ದಾರೆ. ಇವರ ಪೈಕಿ ಮನೀಷ್, ರಿಷಭ್​ಗೆ ರಾಷ್ಟ್ರೀಯ ತಂಡದ ಕರೆ ನಿರೀಕ್ಷೆ ಇದೆ.

***

ಸ್ಪರ್ಧೆಯಲ್ಲಿರುವವರು

ಆರಂಭಿಕ ಸ್ಥಾನ: ಶಿಖರ್ ಧವನ್, ರೋಹಿತ್ ಶರ್ಮ, ಆರಂಭಿಕ/ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ಸ್: ಕೆಎಲ್ ರಾಹುಲ್, ಅಜಿಂಕ್ಯ ರಹಾನೆ .3: ವಿರಾಟ್ ಕೊಹ್ಲಿ ಮಧ್ಯಮ ಕ್ರಮಾಂಕ: ಎಂಎಸ್ ಧೋನಿ, ಯುವರಾಜ್ ಸಿಂಗ್, ಕೇದಾರ್ ಜಾಧವ್, ಮನೀಷ್ ಪಾಂಡೆ, ಸುರೇಶ್ ರೈನಾ, ರಿಷಭ್ ಪಂತ್, ದಿನೇಶ್ ಕಾರ್ತಿಕ್, ಅಚ್ಚರಿಯ ಆಯ್ಕೆಯಾಗಿ ಶ್ರೇಯಸ್ ಅಯ್ಯರ್. ಆಲ್ರೌಂಡರ್: ಹಾರ್ದಿಕ್ ಪಾಂಡ್ಯ ಸ್ಪಿನ್ನರ್ಸ್: ಆರ್. ಅಶ್ವಿನ್, ರವೀಂದ್ರ ಜಡೇಜಾ, ಕುಲದೀಪ್, ಅಚ್ಚರಿಯ ಆಯ್ಕೆಯಾಗಿ ಅಕ್ಷರ್ ಪಟೇಲ್ ಮತ್ತು ಕೃನಾಲ್ ಪಾಂಡ್ಯ. ವೇಗಿಗಳು: ಭುವನೇಶ್ವರ್, ಉಮೇಶ್ ಯಾದವ್, ಮೊಹಮದ್ ಶಮಿ, ಜಸ್​ಪ್ರೀತ್ ಬುಮ್ರಾ, ಅಚ್ಚರಿಯ ಆಯ್ಕೆಯಾಗಿ ಜೈದೇವ್ ಉನಾದ್ಕತ್ ಮತ್ತು ಶಾರ್ದೂಲ್ ಠಾಕೂರ್.

Leave a Reply

Your email address will not be published. Required fields are marked *

Back To Top