Saturday, 17th March 2018  

Vijayavani

ರಾಜ್ಯದಲ್ಲಿ ಮತ್ತೆ ರಾಹುಲ್​ ಟೆಂಪಲ್​ರನ್​ - ಉಡುಪಿಗೆ ವಿಸಿಟ್ಟು​​​.. ಕೃಷ್ಣಮಠಕ್ಕೆ ಡೌಟು - ಕಾಂಗ್ರೆಸ್​​ನಲ್ಲಿ ಹೈಕಮಾಂಡ್​ ಆದ್ರಾ ಸಿಎಂ..        ಧರ್ಮ ಸಂಕಷ್ಟಕ್ಕೆ ಹೈಕಮಾಂಡ್​ ಎಂಟ್ರಿ - ಚುನಾವಣೆಗಾಗಿ ವಿಷ್ಯ ಸೈಡ್​ಗಿಡೋಕೆ ತಾಕೀತು - ಅತ್ತ ದಿಲ್ಲೀಲಿ ಮೊಯ್ಲಿಗೆ ವರಿಷ್ಠರ ಎಚ್ಚರಿಕೆ        ಕಾಂಗ್ರೆಸ್ ಕೋಟೆಯಲ್ಲಿ ಕೇಸರಿ ಮಾಸ್ಟರ್​ಪ್ಲಾನ್​ - ನಾಲ್ಕೂ ದಿಕ್ಕಿನಲ್ಲಿ ಚಾಣಕ್ಯನ ತಂಡ - ಸಿಎಂ ತವರಲ್ಲಿ ರಾಜೇಂದ್ರ ಅಗರ್​ವಾಲ್​​ ತಂತ್ರಗಾರಿಕೆ        ಮಾರ್ಚ್​ 21ಕ್ಕೆ ಎಲೆಕ್ಷನ್​ಗೆ ಮುಹೂರ್ತ ಸಾಧ್ಯತೆ - ಇವಿಎಂ ಬೇಡ ಅಂತ ಕೈ ನಿರ್ಣಯ - ಬ್ಯಾಲೆಟ್ ಪೇಪರ್​​ಗೆ ಎಚ್​​​ಡಿಡಿ ಅಭಿಮತ        ಭಾರತದ ಬ್ಯಾಂಕ್​​ಗಳಿಂದಲೇ ನಡೆದಿದೆ ಪ್ರಮಾದ - ಸಾಲ ವಾಪಸ್​​ ಕಟ್ಟೋದಾಗಿ ಮಲ್ಯ ವಾದ - ಮದ್ಯದ ದೊರೆ ದೇಶಕ್ಕೆ ಬರೋದೇ ಅನುಮಾನ        ನಾಡಿನೆಲ್ಲೆಡೆ ನಾಳೆ ಯುಗಾದಿ ಸಂಭ್ರಮ - ಶ್ರೀಶೈಲದಲ್ಲಿ ಜನಜಾಗೃತಿ ಸಮಾವೇಶ - ಪ್ರಧಾನಿ ಮೋದಿಯಿಂದ ಹಬ್ಬದ ಶುಭಾಶಯ       
Breaking News

ವಿಜಯನಗರ-ಹೈದರಾಬಾದ್ ವಿಮಾನಯಾನ ಶುರು

Friday, 22.09.2017, 3:00 AM       No Comments

ಬಳ್ಳಾರಿ: ದೇಶದ ಬಹಳಷ್ಟು ನಗರಗಳಿಗೆ ವಿಮಾನಯಾನದ ಅಗತ್ಯ ಇದೆ. ಈ ಪೈಕಿ ಕೆಲ ನಗರಗಳಿಗೆ ಉಡಾನ್ ಯೋಜನೆ ಮೂಲಕ ವಿಮಾನ ಸಂಪರ್ಕ ಕಲ್ಪಿಸಲಾಗುತ್ತಿದೆ ಎಂದು ವಿಮಾನಯಾನ ಸಚಿವ ಜಯಂತ್ ಸಿನ್ಹಾ ಹೇಳಿದರು.

ತೋರಣಗಲ್​ನ ಜೆಎಸ್​ಡಬ್ಲ್ಯು ಸಂಸ್ಥೆಯ ಜೆ ಮ್ಯಾಕ್ಸ್ ಸಭಾಂಗಣದಲ್ಲಿ ಗುರುವಾರ ವಿಜಯನಗರ ಮತ್ತು ಹೈದರಾಬಾದ್ ನಡುವಣ ನೂತನ ವಿಮಾನ ಹಾರಾಟ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ದೇಶದ ವಿವಿಧ ಭಾಗಗಳ ಜನರ ಸುಲಭ ಸಂಪರ್ಕ ಹಾಗೂ ಸಾಮಾನ್ಯ ಜನರೂ ವಿಮಾನದಲ್ಲಿ ಹಾರಾಟ ನಡೆಸಬೇಕೆಂಬ ಉದ್ದೇಶದಿಂದ ಉಡಾನ್ ಯೋಜನೆ ಜಾರಿಗೊಳಿಸಲಾಗಿದೆ. ಈ ಯೋಜನೆ ಯಡಿ ಶೀಘ್ರ ವಿಜಯನಗರದಿಂದ ಬೆಂಗಳೂರಿಗೆ ಸಂಪರ್ಕ ಕಲ್ಪಿಸಲಾಗುತ್ತದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಮಾತನಾಡಿ, ಜೆಎಸ್​ಡಬ್ಲ್ಯು ಸಂಸ್ಥೆಯಿಂದ ಉತ್ತರ ಕರ್ನಾಟಕದಲ್ಲಿ ಬಡವರಿಗೆ ಹೆಚ್ಚಿನ ಅನುಕೂಲವಾಗಿದೆ. ಸ್ಥಳೀಯರಿಗೆ ಸಾಕಷ್ಟು ಉದ್ಯೋಗ ಸಿಕ್ಕಿವೆ. ಸಂಸ್ಥೆ ಇನ್ನೂ ಬೆಳವಣಿಗೆ ಕಾಣಲಿ ಎಂದು ಹಾರೈಸಿದರು.

ಮೊದಲ ದಿನ ಹೈದರಾಬಾದ್​ನಿಂದ 26 ಪ್ರಯಾಣಿಕರು ವಿಜಯನಗರ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ವಿಜಯನಗರ ವಿಮಾನ ನಿಲ್ದಾಣದಿಂದ 46 ಮಂದಿ ಹೈದರಾಬಾದ್​ಗೆ ತೆರಳಿದರು.

 

ಜಿಂದಾಲ್ ವಿಜಯನಗರ ವಿಮಾನ ನಿಲ್ದಾಣದಿಂದ ಶೀಘ್ರ ಬೆಂಗಳೂರು ಹಾಗೂ ಗೋವಾಕ್ಕೆ ಸಂಪರ್ಕ ಕಲ್ಪಿಸಲಾಗುವುದು. ಬೇಡಿಕೆ ಗಮನಿಸಿ ಹೆಚ್ಚುವರಿ ವಿಮಾನ ಸೇವೆ ಆರಂಭಿಸುವುದರ ಜತೆಗೆ ಈ ಭಾಗದ ವಿಮಾನ ನಿಲ್ದಾಣಗಳನ್ನು ಅಭಿವೃದ್ಧಿ ಪಡಿಸಲಾಗುವುದು. ಶೀಘ್ರದಲ್ಲೇ ಹುಬ್ಬಳ್ಳಿಯಿಂದ ಮುಂಬೈಗೆ ಸೇವೆ ಆರಂಭಿಸಲಾಗುವುದು.

| ಜಯಂತ್ ಸಿನ್ಹಾ ವಿಮಾನಯಾನ ಸಚಿವ

 

Leave a Reply

Your email address will not be published. Required fields are marked *

Back To Top