Monday, 24th September 2018  

Vijayavani

ದುನಿಯಾ ವಿಜಿಗೆ ಇನ್ನೂ ತಪ್ಪದ ಸಂಕಷ್ಟ- 2 ದಿನ ಜರಾಸಂಧನಿಗೆ ನ್ಯಾಯಾಂಗ ಬಂಧನ- ರೌಡಿ ಶೀಟ್​ ಓಪನ್​ಗೆ ಖಾಕಿ ಪ್ಲಾನ್.        ದರ್ಶನ್ ಕಾರ್ ಆಕ್ಸಿಡೆಂಟ್- ಬಲಗೈ ಮೂಳೆ ಮುರಿತ ಬೆನ್ನಲ್ಲೇ ವಾರ್ಡ್​ಗೆ ದಚ್ಚು ಶಿಫ್ಟ್- ಶೀಘ್ರ ಗುಣಮುಖ ಆಗುವಂತೆ ಸುದೀಪ್ ಟ್ವೀಟ್        ಪರಿಷತ್​ ಮೂರೂ ಸ್ಥಾನ ಮಿತ್ರಕೂಟಕ್ಕೆ- ಕಾಂಗ್ರೆಸ್​ನ ಇಬ್ಬರು, ಜೆಡಿಎಸ್​​ನ ಒಬ್ಬರು ಅವಿರೋಧ ಆಯ್ಕೆ- ರಮೇಶ್​ ಆಯ್ಕೆಗೆ ಅಪಸ್ವರ        ಉತ್ತರ ಭಾರತದಲ್ಲಿ ಅಬ್ಬರಿಸಿದ ವರುಣ- ಮೇಘಸ್ಫೋಟಕ್ಕೆ ಪಂಜಾಬ್, ಹಿಮಾಚಲ ತಲ್ಲಣ- ಕೇದಾರನಾಥದಲ್ಲಿ ಕನ್ನಡಿಗರಿಗೆ ಸಂಕಷ್ಟ        ಸಿಕ್ಕಿಂನಲ್ಲಿ ಏರ್​ಪೋರ್ಟ್​ಗೆ ಮೋದಿ ಚಾಲನೆ- ನಯನ ಮನೋಹರ ವಿಮಾನ ನಿಲ್ದಾಣ ಲೋಕಾರ್ಪಣೆ        ಅಂತೂ ರಜನಿ ಪಾರ್ಟಿಗೆ ಮುಹೂರ್ತ ಫಿಕ್ಸ್- ಡಿಸೆಂಬರ್​ನಲ್ಲಿ ಹೊಸ ಪಕ್ಷದ ಹೆಸರು ಅನೌನ್ಸ್- ಥ್ರಿಲ್ ಆಗಿದ್ದಾರೆ ಫ್ಯಾನ್ಸ್.!       
Breaking News

ವೀರಶೈವ ಧರ್ಮದ ತತ್ವ ಸಿದ್ಧಾಂತಗಳು ಸಾರ್ವಕಾಲಿಕ

Tuesday, 10.04.2018, 2:30 AM       No Comments

ಗುತ್ತಲ: ಆದಿ ಜಗದ್ಗುರು ಶ್ರೀ ರೇಣುಕಾಚಾರ್ಯರು ಸ್ಥಾಪಿಸಿದ ವೀರಶೈವ ಧರ್ಮದ ತತ್ವ ಸಿದ್ಧಾಂತಗಳು ಸಾರ್ವಕಾಲಿಕ ಎಂದು ನೆಗಳೂರು ಸಂಸ್ಥಾನ ಹಿರೇಮಠದ ಶ್ರೀ ಗುರುಶಾಂತೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಪಟ್ಟಣದ ಹೇಮಗಿರಿ ಚನ್ನಬಸವೇಶ್ವರ ಮಠದ ಆವರಣದಲ್ಲಿ ಆದಿ ಜಗದ್ಗುರು ಶ್ರೀ ರೇಣುಕಾಚಾರ್ಯರ ಯುಗಮಾನೋತ್ಸವ ಜಯಂತಿ ಅಂಗವಾಗಿ ನಡೆದ ಧರ್ಮ ಸಭೆಯಲ್ಲಿ ಅವರು ಆಶೀರ್ವಚನ ನೀಡಿದರು.

ದೇಶದಲ್ಲಿ ಅನೇಕ ಜಾತಿ, ಧರ್ಮ, ಪಂಥಗಳಿವೆ. ಹಿಂದು ಧರ್ಮದಲ್ಲಿ ಅನೇಕ ಪಂಗಡಗಳಿವೆ. ಇವೆಲ್ಲಕ್ಕೂ ಸಾವಿರಾರು ವರ್ಷಗಳ ಇತಿಹಾಸ ಇದೆ. ವೀರಶೈವ ಧರ್ಮ ಸಹ ಸಾವಿರಾರು ವರ್ಷಗಳ ಹಿಂದೆ ಆದಿ ಜಗದ್ಗುರು ಶ್ರೀ ರೇಣುಕಾಚಾರ್ಯರಿಂದ ಸ್ಥಾಪಿಸಲ್ಪಟ್ಟಿದ್ದು, ಇಂತಹ ಜಗದ್ಗುರುಗಳ ಯುಗಮಾನೋತ್ಸವ ಜಯಂತಿಯನ್ನು ಆಚರಣೆ ಮಾಡುತ್ತಿರುವುದು ಸಂತಸದ ವಿಷಯ ಎಂದರು.

ಅಮ್ಮಿನಬಾವಿ ಪಂಚಗ್ರಹ ಹಿರೇಮಠದ ಶ್ರೀ ಅಭಿನವ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದರು. ಇದಕ್ಕೂ ಮುನ್ನ ನೆಗಳೂರು ಸಂಸ್ಥಾನ ಹಿರೇಮಠದ ಶ್ರೀ ಗುರುಶಾಂತೇಶ್ವರ ಶಿವಾಚಾರ್ಯ ಸ್ವಾಮೀಜಿ ಜಂಗಮ ವಟುಗಳಿಗೆ ಶಿವದೀಕ್ಷೆ ನೀಡಿದರು. ಜಗದ್ಗುರು ಶ್ರೀ ರೇಣುಕಾಚಾರ್ಯರ ಭಾವಚಿತ್ರದ ಮೆರವಣಿಗೆಗೆ ಜಂಗಮ ಕ್ಷೇತ್ರ ಲಿಂಗನಾಯಕನಹಳ್ಳಿಮಠದ ಶ್ರೀಚನ್ನವೀರ ಸ್ವಾಮೀಜಿ ಚಾಲನೆ ನೀಡಿದರು. ನೂರಾರು ಮಹಿಳೆಯರಿಂದ ಪೂರ್ಣ ಕುಂಭ, ಪುರವಂತರ ಕುಣಿತ ಹಾಗೂ ಸಮ್ಮಾಳಗಳು ಮೆರವಣಿಗೆಗೆ ಮೆರುಗು ತಂದವು.

ಕಲ್ಮಠದ ಶ್ರೀ ಗುರುಸಿದ್ಧ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು. ಸಿದ್ರಾಮಯ್ಯ ಸಂಗಯ್ಯ ಹಿರೇಮಠ, ರೇಣುಕಾಚಾರ್ಯ ಜಯಂತಿ ಸಮಿತಿ ಅಧ್ಯಕ್ಷ ಕೊಟ್ರಯ್ಯಸ್ವಾಮಿ ಕೋವಳ್ಳಿಮಠ, ಜಿಪಂ ಮಾಜಿ ಸದಸ್ಯ ಸಿ.ಬಿ. ಕುರುವತ್ತಿಗೌಡರ, ಸಮಿತಿ ಸದಸ್ಯರಾದ ಬಸವರಾಜಯ್ಯ ಭೂಸನೂರಮಠ, ಶಿವಣ್ಣ ನಂದಿಗೊಣ್ಣ, ಪಾಲಾಕ್ಷಯ್ಯ ನೆಗಳೂರಮಠ, ಅಜ್ಜಪ್ಪ ತರ್ಲಿ, ಅಜ್ಜಪ್ಪ ಕುರವತ್ತಿ, ಮೃತ್ಯುಂಜಯ ರಿತ್ತಿಮಠ, ಪಿ.ಎನ್. ಹೇಮಗಿರಿಮಠ, ವಿಶ್ವನಾಥ ಮಾಗಡಿಮಠ, ವೀರಯ್ಯ ಪ್ರಸಾಧಿಮಠ, ಪ್ರಶಾಂತ ರಿತ್ತಿಮಠ ಮತ್ತಿತರರಿದ್ದರು. ಮಂಜುನಾಥ ಎರವಿನತಲೆ ಸ್ವಾಗತಿಸಿದರು. ನಾಗರತ್ನಾ ಅಂಗಡಿ ಪ್ರಾರ್ಥಿಸಿದರು. ವೀರೇಶ ಗಡ್ಡದ್ದೇವರಮಠ ನಿರೂಪಿಸಿದರು.

ದಿ ಜಗದ್ಗುರು ಶ್ರೀ ರೇಣುಕಾಚಾರ್ಯರು ಸ್ಥಾಪಿಸಿದ ವೀರಶೈವ ಧರ್ಮವು ಬೃಹತ್ ಆಲದ ಮರವಿದ್ದಂತೆ. ಇದರಲ್ಲಿ ನೂರಾರು ಜಾತಿಗಳು ಬರುತ್ತಿದ್ದು, ಅವೆಲ್ಲವೂ ಸಹ ಈ ವೀರಶೈವ ಧರ್ಮದ ಅಡಿಯಲ್ಲಿಯೇ ಬರುತ್ತವೆ ಎಂದು ಗಮನಾರ್ಹ.

| ಶ್ರೀ ಗುರುಸಿದ್ಧ ಸ್ವಾಮೀಜಿ, ಕಲ್ಮಠ

Leave a Reply

Your email address will not be published. Required fields are marked *

Back To Top