Sunday, 23rd September 2018  

Vijayavani

ಜಿಮ್​ ತರಬೇತುದಾರನ ಅಪಹರಣ ಮತ್ತು ಹಲ್ಲೆ ಪ್ರಕರಣದಲ್ಲಿ ನಟ ದುನಿಯಾ ವಿಜಯ್​ ಬಂಧನ.        ವಿಧಾನ ಪರಿಷತ್​​ 3 ಸ್ಥಾನಗಳಿಗೆ ಚುನಾವಣೆ: ನಾಮಪತ್ರ ಸಲ್ಲಿಕೆಗೆ ನಾಳೆ ಕೊನೆ ದಿನ, ಬಿಜೆಪಿ ಪಟ್ಟಿ ಇಂದು ಅಂತಿಮ        ಮೋದಿ ಕಳ್ಳ ಎಂದಿದ್ದ ರಾಹುಲ್​ ವಿರುದ್ಧ ನಿರ್ಮಲಾ ಗುಡುಗು: ರಾಹುಲ್​ ಅವರದ್ದು ಕಳ್ಳರ ಕುಟುಂಬ ಎಂದ ಸಚಿವೆ        ಹಾಸನದಲ್ಲಿ ಇಂದು ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಮುಖ್ಯಮಂತ್ರಿ ಎಚ್​ಡಿಕೆ       
Breaking News

ಶಹಾಪುರದಲ್ಲಿ ಮಹಿಳೆಯರಿಂದ ಪ್ರತಿಭಟನೆ

Thursday, 14.06.2018, 6:34 PM       No Comments

ಶಹಾಪುರ: ವಾಡರ್್ 4ರ ದ್ಯಾವಮ್ಮನ ಓಣಿಗೆ ಒಂದು ವಾರದಿಂದ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ ಎಂದು ಆರೋಪಿಸಿ ಬಡಾವಣೆ ಮಹಿಳೆಯರು ಗುರುವಾರ ನಗರಸಭೆ ಕಚೇರಿಗೆ ಮುತ್ತಿಗೆ ಹಾಕಿದರು.
ಒಂದು ವಾರದಿಂದ ಬಡಾವಣೆಗೆ ಶುದ್ಧ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ. ಸದ್ಯ ಮಳೆಗಾಲ ಇದ್ದುದರಿಂದ ನಿತ್ಯದ ಬಳಕೆಗೆ ನೀರು ಅಗತ್ಯವಾಗಿದ್ದು, ಬೋರ್ವೆಲ್ ಮೇಲೆ ಅವಲಂಬಿಸುವಂತಾಗಿದೆ. ನಗರಸಭೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗುತ್ತಿಲ್ಲ ಎಂದು ಆರೋಪಿಸಿದರು.
ದಿನಕ್ಕೆ ಒಂದು ಗಂಟೆಯೂ ಸರಿಯಾಗಿ ನೀರು ಪೂರೈಸುತ್ತಿಲ್ಲ. ಇದರಿಂದ ಕೌಟುಂಬಿಕ ಸ್ಥಿತಿ ಅಧೋಗತಿ ಆಗಿದೆ. ನಗರಸಭೆ ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಪ್ರತಿನಿತ್ಯ ತೊಂದರೆ ಅನುಭವಿಸಬೇಕಾಗಿದೆ. ಕೂಡಲೇ ಸಮರ್ಪಕ ಕುಡಿಯುವ ನೀರು ಪೂರೈಸದಿದ್ದರೆ ಉಗ್ರ ಹೋರಾಟ ನಡೆಸಬೇಕಾದೀತು ಎಂದು ಎಚ್ಚರಿಸಿದರು.
ಪ್ರತಿಭಟನೆಗಿಳಿದ ವಾಡರ್್ ಮಹಿಳೆಯರಿಗೆ ನಗರಸಭೆ ಸದಸ್ಯ ವಸಂತ ಸುರಪುರಕರ್ ಸಾಥ್ ನೀಡಿದರು.

Leave a Reply

Your email address will not be published. Required fields are marked *

Back To Top