Friday, 20th April 2018  

Vijayavani

ಬಿಜೆಪಿ ಅಭ್ಯರ್ಥಿಗಳ 3 ನೇ ಪಟ್ಟಿ ರಿಲೀಸ್​- 59 ಅಭ್ಯರ್ಥಿಗಳ ಹೆಸರು ಪ್ರಕಟ- ವರುಣಾ, ಬಾದಾಮಿ ಇನ್ನೂ ನಿಗೂಢ        ಜೆಡಿಎಸ್​ನಿಂದ ಸೆಕೆಂಡ್​ ಲಿಸ್ಟ್​ ರಿಲೀಸ್​- ಕೈ, ಕಮಲ ರೇಬಲ್​ಗಳಿಗೆ ಮಣೆ- 57 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ        ಎಚ್​ಡಿಕೆ ಆಸ್ತಿ ವಿವರ ಘೋಷಣೆ- ಕುಮಾರಸ್ವಾಮಿ 12 ಕೋಟಿ ಒಡೆಯ- ಗುತ್ತೇದಾರ್​ಗಿಂತ ಪತ್ನಿ ಶ್ರೀಮಂತೆ        ನಟಿ ಉಮಾಶ್ರೀ ಆಸ್ತಿ ವಿವರ ಘೋಷಣೆ- ಸಾಕವ್ವ 1 ಕೆ.ಜಿ ಚಿನ್ನಾಭರಣದ ಒಡತಿ- ಅವಲಂಬಿತರು ಯಾರು ಇಲ್ಲವೆಂದು ಪ್ರಮಾಣಪತ್ರ        ಚಾಮುಂಡೇಶ್ವರಿಯಲ್ಲಿ ಸಿಎಂ, ವರುಣಾದಲ್ಲಿ ಯತೀಂದ್ರ- ಅಪ್ಪ-ಮಗ ನಾಮಪತ್ರ ಸಲ್ಲಿಕೆ- ಭಾರಿ ಬೆಂಬಲಿಗರ ಜತೆ ತೆರಳಿ ನಾಮಿನೇಷನ್​​​​​​        ಬೆಂಗಳೂರಿನಲ್ಲಿ ಗಾಳಿ ಸಹಿತ ಮಳೆ- ಮನೆಗೆ ಹೋಗಲು ವರುಣನ ಅಡ್ಡಿ- ಸಂಜೆಯ ಮಳೆಗೆ ವಾಹನ ಸವಾರರು ಕಂಗಾಲು       
Breaking News

ಶಿವಸೇನೆ-ಬಿಜೆಪಿ ಮೈತ್ರಿ ಬಿಕ್ಕಟ್ಟು

Friday, 27.01.2017, 3:23 AM       No Comments

ಮುಂಬೈ: ಮಹಾರಾಷ್ಟ್ರದಲ್ಲಿ ಮೈತ್ರಿ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದು ಪದೇ ಪದೆ ಬಿಜೆಪಿ ವಿರುದ್ಧ ಆರೋಪ ಮಾಡುತ್ತಿರುವ ಶಿವಸೇನೆ ಈಗ ಮುಂಬೈ ಮಹಾನಗರ ಪಾಲಿಕೆ ಚುನಾವಣೆಗೆ ಪ್ರತ್ಯೇಕವಾಗಿ ಸ್ಪರ್ಧಿಸಲು ನಿರ್ಧರಿಸಿದೆ. ಹೀಗಾಗಿ ಬಿಜೆಪಿ ಜತೆಗಿನ ಮೈತ್ರಿ ಭವಿಷ್ಯ ಮತ್ತೆ ಡೋಲಾಯಮಾನವಾಗಿದೆ. ಗುರುವಾರ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ವಿರುದ್ಧ ಹರಿಹಾಯ್ದ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ, ಚುನಾವಣೆಗೆ ಸ್ವತಂತ್ರವಾಗಿ ಸ್ಪರ್ಧಿಸಿ ಗೆಲುವು ಸಾಧಿಸುವ ವಿಶ್ವಾಸ ವ್ಯಕ್ತಪಡಿಸಿದರು. ಮುಂದೆ ಬಿಜೆಪಿ ಜತೆ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದರು. ಬಿಜೆಪಿಯಲ್ಲಿ ಹಲವು ಗೂಂಡಾಗಳಿದ್ದಾರೆ. ಆದರೆ ನಮ್ಮ ಪಕ್ಷದಲ್ಲಿ ಯಾರೂ ಗೂಂಡಾಗಳಿಲ್ಲ. ನಾವು ಸೈನಿಕರಂತೆ ಕೆಲಸ ಮಾಡುತ್ತಿದ್ದೇವೆ. ಈ ಸೈನಿಕರನ್ನು ಎದುರಿಸಲಾಗದೇ ಬಿಜೆಪಿ ಗೂಂಡಾಗಳನ್ನು ಬಾಡಿಗೆಗೆ ಪಡೆದುಕೊಂಡಿದೆ ಎಂದರು. ಮುಂಬೈ ಪಾಲಿಕೆ ಚುನಾವಣೆಗೆ ಫೆ. 21ರಂದು ಮತದಾನ ನಡೆಯಲಿದ್ದು, 23ಕ್ಕೆ ಫಲಿತಾಂಶ ಹೊರಬೀಳಲಿದೆ.

ಬಿಜೆಪಿ ತಿರುಗೇಟು: ಶಿವಸೇನೆ ನಿರ್ಧಾರ ಪ್ರಕಟಿಸಿದ ಬೆನ್ನಲ್ಲೇ ಬಿಜೆಪಿ ಕೂಡ ಕಠಿಣ ನಿಲುವು ತಳಿದಿದೆ. ಇಂಥ ಸ್ಥಿತಿಗೆ ಬರಲು ಶಿವಸೇನೆಯೇ ಕಾರಣ ಎಂದು ಆರೋಪಿಸಿರುವ ಬಿಜೆಪಿ, ತಾನಾಗಿಯೇ ಮೈತ್ರಿಗೆ ಮುಂದಾಗುವುದಿಲ್ಲ ಎಂದು ತಿಳಿಸಿದೆ.

-ಏಜೆನ್ಸೀಸ್

  • 1989-90 ಲೋಕಸಭೆ, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ-ಶಿವಸೇನೆ ಮೊದಲ ಬಾರಿಗೆ ಮೈತ್ರಿ. 1995 ಬಿಜೆಪಿ, ಶಿವಸೇನೆ ಮೈತ್ರಿಕೂಟ ಮಹಾರಾಷ್ಟ್ರದಲ್ಲಿ ಮೊದಲ ಬಾರಿ ಅಧಿಕಾರಕ್ಕೆ. ಮನೋಹರ ಜೋಶಿ ಸಿಎಂ
  • 1999 – ಎನ್​ಸಿಪಿ, ಕಾಂಗ್ರೆಸ್ ಎದುರು ಸೋಲು ಕಂಡ ಮೈತ್ರಿಕೂಟ
  • 2012 – ಬಾಳಾ ಠಾಕ್ರೆ ನಿಧನ, ಉದ್ಧವ್ ಠಾಕ್ರೆ ಪಕ್ಷದ ಮುಖ್ಯಸ್ಥರಾಗಿ ಆಯ್ಕೆ
  • 2014 – ಬಿಜೆಪಿಯಿಂದ ಬೇರ್ಪಟ್ಟು ಸ್ವತಂತ್ರವಾಗಿ ಸ್ಪರ್ಧಿಸಿದ ಶಿವಸೇನೆ. ಫಲಿತಾಂಶ ಬಳಿಕ ಬಿಜೆಪಿಗೆ ಬೆಂಬಲ ನೀಡಿ ಮೈತ್ರಿ ಸರ್ಕಾರ ರಚನೆ

Leave a Reply

Your email address will not be published. Required fields are marked *

Back To Top