Wednesday, 21st March 2018  

Vijayavani

ಮುಂದಿನ ಚುನಾವಣೆಯಲ್ಲಿ ಮೋದಿ ಸೋಲ್ತಾರೆ- ಇಂದಿರಾಗಾಂಧಿಯಂತೆ ನಮ್ಮನ್ನೂ ಗೆಲ್ಲಿಸಿ- ಚಿಕ್ಕಮಗಳೂರಿನಲ್ಲಿ ರಾಹುಲ್‌ ಟಾಕ್‌ವಾರ್‌        ಕುಡಿದು ಅಡ್ಡಾದಿಡ್ಡಿ ಬಸ್‌ ಚಲಾಯಿಸಿದ- ಕಾರು, ಬೈಕ್‌ ಮರಕ್ಕೆ ಡಿಕ್ಕಿ ಹೊಡೆಸಿದ- ಬೆಂಗಳೂರಿನಲ್ಲಿ ಬಿಎಂಟಿಸಿ ಚಾಲಕನ ಅವಾಂತರ        ಜೆಡಿಎಸ್ ಬಂಡಾಯ ಶಾಸಕರ ಅನರ್ಹತೆ ವಿಚಾರ- ಹೈಕೋರ್ಟ್​ಗೆ ಅಭಿಪ್ರಾಯ ತಿಳಿಸಿದ ಸ್ಪೀಕರ್​- ಮುಚ್ಚಿದ ಲಕೋಟೆಯಲ್ಲಿ ಎಜಿ ಮೂಲಕ ರವಾನೆ        5 ಕೋಟಿ ಫೇಸ್​ಬುಕ್‌ಗಳ ಮಾಹಿತಿ ಹ್ಯಾಕ್- ಕಾಂಗ್ರೆಸ್‌ ವಿರುದ್ಧ ಬಿಜೆಪಿ ಗಂಭೀರ ಆರೋಪ- ರವಿಶಂಕರ್‌ ಆರೋಪಕ್ಕೆ ಕೈತಿರುಗೇಟು        ಬೈಕ್ ಸವಾರನ ಮೇಲೆ ಬಿದ್ದ ಬೃಹತ್ ಮರ- ಹೆಲ್ಮೆಟ್ ಧರಿಸಿದ್ದರಿಂದ ಪ್ರಾಣಾಪಾಯದಿಂದ ಪಾರು- ಹೆಲ್ಮೆಟ್​ ಪುಡಿಪುಡಿ ತಲೆ ಸೇಫ್​       
Breaking News

ಶೃಂಗೇರಿಯಲ್ಲಿ ಅತಿರುದ್ರ ಮಹಾಯಾಗ

Thursday, 04.01.2018, 3:03 AM       No Comments

ಶೃಂಗೇರಿ: ಶ್ರೀ ಚಂದ್ರಶೇಖರ ಭಾರತೀ ಸಭಾಂಗಣದಲ್ಲಿ ಮಾಜಿ ಪ್ರಧಾನಿ ದೇವೇಗೌಡ ಕುಟುಂಬದವರು ನೆರವೇರಿಸಲಿರುವ ಅತಿರುದ್ರ ಮಹಾಯಾಗಕ್ಕೆ ಬುಧವಾರ ಚಾಲನೆ ನೀಡಲಾಯಿತು.

ಜಗದ್ಗುರುಗಳಾದ ಶ್ರೀ ಭಾರತೀ ತೀರ್ಥ ಸ್ವಾಮೀಜಿ ಮತ್ತು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಸಾನ್ನಿಧ್ಯದಲ್ಲಿ ಯಾಗದ ಸಂಕಲ್ಪ ನೆರವೇರಿತು. ದೇವೇಗೌಡ ಹಾಗೂ ಚನ್ನಮ್ಮ ಅವರು ಉಭಯ ಶ್ರೀಗಳಿಗೆ ಫಲತಾಂಬೂಲ ಸಮರ್ಪಿಸಿ ಆಶೀರ್ವಾದ ಪಡೆದ ಬಳಿಕ ಅತಿರುದ್ರ ಮಹಾಯಾಗ ಆರಂಭವಾಯಿತು.

ದೇವೇಗೌಡ ದಂಪತಿ ಹಾಗೂ ಶಾಸಕ ಎಚ್.ಡಿ.ರೇವಣ್ಣ ತೋರಣಗಣಪತಿ ಹಾಗೂ ಶಂಕರಾಚಾರ್ಯ ದೇವಾಲಯಗಳಿಗೆ ಭೇಟಿ ನೀಡಿದರು.

ವಿಧಾನಪರಿಷತ್ ಸದಸ್ಯ ಟಿ.ಶರವಣ ಸುದ್ದಿಗಾರರೊಂದಿಗೆ ಮಾತನಾಡಿ, ಧನುರ್ವಸ ಅತ್ಯಂತ ಶ್ರೇಷ್ಠವಾದದ್ದು. ದೇವೇಗೌಡ, ಕುಮಾರಸ್ವಾಮಿ ಅವರ ಆರೋಗ್ಯ ಸುಧಾರಣೆ ಹಾಗೂ ಅವರ ರಾಜಕೀಯ ಶ್ರೇಯಸ್ಸಿಗಾಗಿ ಯಾಗ ಹಮ್ಮಿಕೊಳ್ಳಲಾಗಿದೆ. ರಾಜ್ಯದ ಜನರ ಹಿತವನ್ನೂ ಬಯಸಲಾಗಿದೆ. 2018ರ ಚುನಾವಣೆಯಲ್ಲಿ ಹೋರಾಡಲು ತಾಯಿ ಜಗನ್ಮಾತೆ ಹಾಗೂ ಜಗದ್ಗುರುಗಳ ಆಶೀರ್ವಾದ ಬೇಕಿದೆ. ಜ.14ರ ಸಂಕ್ರಾತಿಯಂದು ಪೂರ್ಣಾಹುತಿ ನೆರವೇರಲಿದ್ದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

14,641 ಬಾರಿ ರುದ್ರ ಪಠಣ: 121 ಋತ್ವಿಜರು 11 ದಿನಗಳ ಕಾಲ 11 ಬಾರಿ ಶ್ರೀರುದ್ರ ಮಂತ್ರ ಪಠಿಸಲಿದ್ದಾರೆ. ಜ.14ರ ತನಕ ಒಟ್ಟು 14,641 ಬಾರಿ ಶ್ರೀ ರುದ್ರ ಮಂತ್ರ ಪಠಿಸಲಾಗುತ್ತದೆ.

Leave a Reply

Your email address will not be published. Required fields are marked *

Back To Top