Monday, 16th July 2018  

Vijayavani

ಕಾಂಗ್ರೆಸ್‌ ಕಿರುಕುಳದಿಂದಲೇ ಸಿಎಂ ಕಣ್ಣೀರು - ಕಾಂಗ್ರೆಸ್‌ ನೆಚ್ಚಿಕೊಂಡು ಹೋದ್ರೆ ಇದೇ ಸ್ಥಿತಿ - ಎಚ್​ಡಿಕೆ  ಕಣ್ಣೀರಿಗೆ ಜೇಟ್ಲಿ ಟಾಂಗ್‌        ವಾಣಿಜ್ಯ ಬ್ಯಾಂಕ್‌ನಲ್ಲಿನ ಚಾಲ್ತಿ ಸಾಲವೂ ಮನ್ನಾ - ಸಿಎಂ ನಿರ್ಧಾರ - ರೈತರಿಗೆ ಮತ್ತೊಂದು ಕೊಡುಗೆ ನೀಡಿದ ಮುಖ್ಯಮಂತ್ರಿ        ಟ್ರಾಫಿಕ್ ನಿಯಮ ಉಲ್ಲಂಘಿಸಿದ್ದ ಶಾಸಕರ ಪುತ್ರ - ಪ್ರಶ್ನಿಸಿದ ಪೇದೆಗೆ ಅವಾಚ್ಯ ಶಬ್ದಗಳಿಂದ ನಿಂದನೆ        ಬಂಗಾಳದಲ್ಲಿ ಮೋದಿ ರ್ಯಾಲಿ ವೇಳೆ ಅವಗಢ - ಪೆಂಡಾಲ್ ಕುಸಿದು 22 ಜನರಿಗೆ ಗಾಯ - ಆರೋಗ್ಯ ವಿಚಾರಿಸಿದ ಪ್ರಧಾನಿ ನಮೋ        ಕರಾವಳಿಯಲ್ಲಿ ಭಾರಿ ಮಳೆಯ ಅವಾಂತರ - ಕುಸಿದುಬಿತ್ತು ಭಟ್ಕಳದ ಬಸ್ ನಿಲ್ದಾಣ - ಹೊರ ಓಡಿದ ಪ್ರಯಾಣಿಕರು        ಕೆಆರ್​​ಎಸ್​​​ನಿಂದ ಭಾರಿ ಪ್ರಮಾಣದ ನೀರು - ರಂಗನತಿಟ್ಟು ಪಕ್ಷಿಧಾಮ ಸಂಪೂರ್ಣ ಮುಳುಗಡೆ - ಧುಮ್ಮಿಕ್ಕುತ್ತಿದೆ ಹೊಗೇನಕಲ್ ಫಾಲ್ಸ್       
Breaking News

ಸಂಘಟನೆ ಮಾಡದಿದ್ದರೆ ಜಾಗ ಖಾಲಿ ಮಾಡಿ

Wednesday, 13.09.2017, 3:03 AM       No Comments

ಬೆಂಗಳೂರು ನಾಯಕರು ಮೈ ಕೊಡವಿಕೊಂಡು ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

ಜೆಡಿಎಸ್ ಪದಾಧಿಕಾರಿಗಳ ಸಭೆಯಲ್ಲಿ ಮಂಗಳವಾರ ಮಾತನಾಡಿದ ಅವರು, ಪಕ್ಷದ ಹಿರಿಯ ಮುಖಂಡರ ನೇತೃತ್ವದಲ್ಲಿ 5 ತಂಡ ಮಾಡಲಾಗಿದೆ. ತಂಡದಿಂದ ಜಿಲ್ಲೆಯ ಪ್ರಗತಿಯ ಅವಲೋಕನ ನಡೆಯುತ್ತಿದೆ. ಬೂತ್​ವುಟ್ಟದ ಸಮಿತಿ ಗಳು ಕ್ರಿಯಾಶೀಲವಾಗಿರಬೇಕು ಎಂದು ಸಲಹೆ ಮಾಡಿದರು.

ಕೆಲಸ ಮಾಡದೆ ವಿಸಿಟಿಂಗ್ ಕಾರ್ಡ್ ಇಟ್ಟುಕೊಂಡು ಓಡಾಡುವವರನ್ನು ಮುಲಾಜಿಲ್ಲದೆ ತೆಗೆದು ಹಾಕುತ್ತೇನೆ. ಪಕ್ಷಕ್ಕಾಗಿ ದುಡಿಯುವವರಿಗೆ ಮನ್ನಣೆ ನೀಡುತ್ತೇನೆ. ನಮ್ಮಲ್ಲಿ ದೊಡ್ಡ ಮಟ್ಟದ ನಾಯಕರು ಇಲ್ಲದೇ ಇರಬಹುದು. ಇದ್ದವರನ್ನೇ ನಾಯಕರನ್ನಾಗಿಸಿ ಪ್ರಯೋಗ ಮಾಡುತ್ತೇನೆ ಎಂದರು.

ಕುಮಾರಸ್ವಾಮಿಗೆ ಒಂದು ಅವಕಾಶ ನೀಡಬೇಕು ಎಂಬ ಅಪೇಕ್ಷೆ ಎಲ್ಲ ಜಿಲ್ಲೆಗಳಲ್ಲಿಯೂ ಕೇಳಿ ಬರುತ್ತಿದೆ. ಅದಕ್ಕಾಗಿ ವಿವಿಧ ಜಿಲ್ಲೆಗಳಿಗೆ ಹಿರಿಯ ಮುಖಂಡರನ್ನು ಒಳಗೊಂಡ ತಂಡಗಳನ್ನು ಕಳುಹಿಸುತ್ತೇನೆ. ಇದಕ್ಕಾಗಿ ಒಟ್ಟು 7 ತಂಡ ರಚಿಸಲಾಗಿದೆ. ಪ್ರತಿಯೊಂದು ತಂಡವು ಮೂರು ಜಿಲ್ಲೆಗಳಿಗೆ ಭೇಟಿ ನೀಡಿ ಪಕ್ಷದ ಸ್ಥಿತಿಗತಿ ಬಗ್ಗೆ ಅಧ್ಯಯನ ನಡೆಸಿ ಮಾಹಿತಿ ನೀಡಲಿದೆ ಎಂದರು.

ಎಲ್ಲ ಜಿಲ್ಲಾ ಘಟಕಗಳು ಮತ್ತು ತಾಲೂಕು ಘಟಕಗಳಿಗೆ ಪದಾಧಿಕಾರಿಗಳನ್ನು ನೇಮಕ ಮಾಡಬೇಕು. ಇವರಿಗೆ ಶಾಸಕರು, ಮಾಜಿ ಶಾಸಕರು ನೆರವು ನೀಡಬೇಕು. ಅನೇಕ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಪಕ್ಷಕ್ಕೆ ಕಚೇರಿಗಳಿಲ್ಲ. ಎಲ್ಲಿ ಇಲ್ಲವೋ ಅಲ್ಲಿ ಪಕ್ಷದ ಕಚೇರಿಗಳನ್ನು ಆರಂಭಿಸಿ. ಹಣ ಇಲ್ಲದಿದ್ದರೆ ನಾನು ಕಳುಹಿಸುತ್ತೇನೆ. ಪಕ್ಷದ ಕಚೇರಿಗೆ ಜಾಗ ಸಿಗದೇ ಇದ್ದರೆ ಹೋಟೆಲಿನಲ್ಲಿ ಕೊಠಡಿ ಬಾಡಿಗೆ ಪಡೆದು ನಡೆಸಿ ಎಂದು ದೇವೇಗೌಡರು ಸೂಚಿಸಿದರು.

ಭಾವುಕರಾದ ಅಪ್ಪ-ಮಗ

ಪಕ್ಷಕ್ಕಾಗಿ ದೇವೇಗೌಡರನ್ನು ಈ ಇಳಿ ವಯಸ್ಸಿನಲ್ಲೂ ದುಡಿಯುವಂತೆ ಮಾಡಿದ್ದೇವೆ. ಒಂದು ಕ್ಷಣವೂ ಸುಮ್ಮನಿರದೆ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಓಡಾಡುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ಡಿ. ಕುಮಾರಸ್ವಾಮಿ ಕಣ್ಣಲ್ಲಿ ನೀರು ತುಂಬಿಕೊಂಡು ಭಾವುಕರಾದರು. ಇದಕ್ಕೆ ಪ್ರತಿಯಾಗಿ ದೇವೇಗೌಡರು, ರಾಜ್ಯದ ಜನರಿಗೆ ಒಳ್ಳೆಯದಾಗಬೇಕು. ಜೆಡಿಎಸ್ ಯಾರ ಬೆಂಬಲವೂ ಇಲ್ಲದೆ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು. ಕುಮಾರಸ್ವಾಮಿ ಮತ್ತೆ ಮುಖ್ಯಮಂತ್ರಿಯಾಗಬೇಕು ಎಂದು ಭಾವುಕರಾದರು.

Leave a Reply

Your email address will not be published. Required fields are marked *

Back To Top