Wednesday, 22nd November 2017  

Vijayavani

1. ಉಗ್ರನ ವಿರುದ್ಧ ಕೊಡಲಿಲ್ಲ ಪಾಕ್ ಸಾಕ್ಷ್ಯ – LET ಕ್ರಿಮಿ ಹಫೀಜ್ ಸಯೀದ್​ಗೆ ಕ್ಲೀನ್​ಚಿಟ್ – ಮನೆಯಿಂದ ಹೊರಬರ್ತಾನೆ ಮುಂಬೈ ದಾಳಿ ಮಾಸ್ಟರ್ ಮೈಂಡ್ 2. ಅಲೆಮಾರಿಗಳ ಮನೆ ತೆರವು ವೇಳೆ ಅಮಾನವೀಯ ವರ್ತನೆ – ನಡುರಸ್ತೆಯಲ್ಲಿ ಮಹಿಳೆಗೆ ಹೆರಿಗೆ – ದಿಗ್ವಿಜಯ ನ್ಯೂಸ್​ ವರದಿಗೆ ಡಿಸಿ ಸ್ಪಂದನೆ 3. ಹೆರಿಗೆ ವೇಳೆ ಮೃತಪಟ್ಟಿದ್ದಾಳೆ ಅಂದ್ರು ಡಾಕ್ಟರ್ಸ್​ – ಅಂತ್ಯ ಸಂಸ್ಕಾರದ ವೇಳೆ ಕಣ್ಣು ಬಿಟ್ಲಂತೆ ಬಾಣಂತಿ – ಮನೆಗೆ ತರೋವಷ್ಟರಲ್ಲಿ ಮತ್ತೆ ಸಾವಿನ ದರ್ಶನ 4. ಕೊಪ್ಪಳ ಜಿಲ್ಲಾಪ್ರವಾಸದಲ್ಲಿ ಎಚ್​ಡಿಡಿ – ಗವಿಮಠಕ್ಕೆ ಮಾಜಿ ಪ್ರಧಾನಿ ಭೇಟಿ – ಇಳಿವಯಸ್ಸಿನಲ್ಲೂ ಕಿಂಡಿಯಲ್ಲೆ ತೆರಳಿ ದರ್ಶನ 5. ಯೂರ್ಟನ್​ ವೇಳೆ ಕಾರಿಗೆ ಲಾರಿ ಡಿಕ್ಕಿ – ಡಿಕ್ಕಿ ಹೊಡೆದ ಲಾರಿಗೆ ಟ್ರಕ್ ಡ್ಯಾಶ್ – ಸೌದಿ ಹೈವೇಯಲ್ಲಿ ಹಾರಿಬಲ್ ಆಕ್ಸಿಡೆಂಟ್
Breaking News :

ಸಚಿವ ಡಿಕೆಶಿ ರಾಜೀನಾಮೆ ಸನ್ನಿಹಿತ

Wednesday, 15.11.2017, 3:00 AM       No Comments

ಕಾರವಾರ: ಸಚಿವ ಡಿ.ಕೆ. ಶಿವಕುಮಾರ್ ರಾಜೀನಾಮೆ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಭವಿಷ್ಯ ಹೇಳಿದರು.

ಬಿಜೆಪಿ ಪರಿವರ್ತನಾ ರ್ಯಾಲಿಯಲ್ಲಿ ಭಾಗ ವಹಿಸುವ ಸಲುವಾಗಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೆಶ್ವರಕ್ಕೆ ಬಂದು ವಾಸ್ತವ್ಯ ಹೂಡಿದ್ದ ಅವರು, ಮುರ್ಡೆಶ್ವರ ದೇವರ ದರ್ಶನ ಪಡೆದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಡಿ.ಕೆ. ಶಿವಕುಮಾರ್ ಅಕ್ರಮ ಆಸ್ತಿ ಹೊಂದಿರುವುದು ಸಾಬೀತಾಗಿದೆ. ವಾಣಿಜ್ಯ ತೆರಿಗೆ ಹಾಗೂ ಜಾರಿ ನಿರ್ದೇಶನಾಲಯಗಳು ಕಾನೂನು ಕ್ರಮ ಕೈಗೊಂಡ ನಂತರ ಅವರು ರಾಜೀನಾಮೆ ಕೊಡಬೇಕಾಗುತ್ತದೆ. ಹಾಗೊಮ್ಮೆ ನೀಡದಿದ್ದಲ್ಲಿ ನಾವು ಹೋರಾಟ ಮಾಡುತ್ತೇವೆ ಎಂದರು.

450 ಕೋಟಿ ರೂ. ಖರ್ಚು ಮಾಡಿದ ಸುವರ್ಣ ವಿಧಾನಸೌಧವನ್ನು ಸರ್ಕಾರ ಹಾಳು ಬಿಟ್ಟಿದೆ. ಸೌಧ ಪಶು, ಪಕ್ಷಿಗಳ ಗೂಡಾಗಿದೆ. ಸ್ವಚ್ಛತೆಗಾಗಿ ಪ್ರತಿ ವರ್ಷ 25 ಕೋಟಿ ಖರ್ಚು ಮಾಡುತ್ತಿದೆ. ಸರ್ಕಾರಿ ಸಂಘಗಳ ಸಾಲ ಮನ್ನಾದಿಂದ ರೈತರಿಗೆ ಪ್ರಯೋಜನವಾಗಿಲ್ಲ ಎಂದು ದೂರಿದರು.

ವರದಿ ಜಾರಿಗೆ ಕ್ರಮ: ಭಟ್ಕಳದ ಕೋಮು ಗಲಭೆಗಳ ಸಂಬಂಧ ರಚನೆಯಾಗಿದ್ದ ನ್ಯಾ.ಜಗನ್ನಾಥ ಶೆಟ್ಟಿ ಹಾಗೂ ನ್ಯಾ.ರಾಮಚಂದ್ರಯ್ಯ ಆಯೋಗದ ವರದಿಯಲ್ಲಿರುವ ಅಂಶಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಕತ್ತೆ ಕಾಯ್ತಿದ್ನಾ: ವಿದ್ಯುತ್ ಖರೀದಿ ವಿಷಯವನ್ನು ಸದನದಲ್ಲಿ ಮಂಡಿಸಲು ಸರ್ಕಾರ ಮುಂದಾಗಿದೆ ಎಂಬ ಪ್ರಶ್ನೆಗೆ ಖಾರವಾಗಿ ಉತ್ತರಿಸಿದ ಯಡಿಯೂರಪ್ಪ, ನಾಲ್ಕು ವರ್ಷ ಆತ ಏನು ಕತ್ತೆ ಕಾಯ್ತಿದ್ನ. ಯಾವುದೇ ವಿಷಯವನ್ನು ನಾವು ಎದುರಿಸಲು ಸಿದ್ಧ ಎಂದರು. ವಿದ್ಯಾರ್ಥಿಗಳಿಗೆ ಲ್ಯಾಪ್​ಟಾಪ್ ವಿತರಿಸುವಲ್ಲಿ ಸುಮಾರು 300 ಕೋಟಿ ಅವ್ಯವಹಾರ ನಡೆದಿದೆ. ಅದರ ಜವಾಬ್ದಾರಿ ಹೊತ್ತು ಉನ್ನತ ಶಿಕ್ಷಣ ಸಚಿವ ಬಸವರಾಯ ರಾಯರೆಡ್ಡಿ ರಾಜೀನಾಮೆ ನೀಡಬೇಕು ಎಂದು ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದರು.

ಉತ್ತರ ಕನ್ನಡದಲ್ಲಿ ಪರಿವರ್ತನಾ ರ‍್ಯಾಲಿ

ಕಾರವಾರ: ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಹಾಲಕ್ಕಿ ಜನಾಂಗವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದರು.

ಅಂಕೋಲಾ ಪಟ್ಟಣದ ಜೈಹಿಂದ್ ಹೈಸ್ಕೂಲ್ ಮೈದಾನದಲ್ಲಿ ಮಂಗಳವಾರ ನಡೆದ ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಅವರು ಮಾತನಾಡಿದರು. ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಜೆಪಿಯ ಅಲೆಯೆಬ್ಬಿಸಿರುವ ಯಡಿಯೂರಪ್ಪ ನೇತೃತ್ವದ ಪರಿವರ್ತನಾ ರ್ಯಾಲಿಗೆ ಕುಮಟಾದಲ್ಲಿ ಪಟಾಕಿ ಸಿಡಿಸಿ ಸ್ವಾಗತಿಸಲಾಯಿತು.

Leave a Reply

Your email address will not be published. Required fields are marked *

Back To Top