Sunday, 24th June 2018  

Vijayavani

ಆಪ್ತರ ಜತೆ ಮಾಜಿ ಸಿಎಂ ಸಭೆ ಹಿನ್ನೆಲೆ - ಸಿದ್ದರಾಮಯ್ಯ ಭೇಟಿಗೆ ತೆರಳಿದ ಪರಂ - ರಾಜಕೀಯ ವಿಚಾರಗಳ ಬಗ್ಗೆ ನಾಯಕರ ಚರ್ಚೆ ಸಾಧ್ಯತೆ        ಪ್ರಕೃತಿ ಚಿಕಿತ್ಸಾಲಯದಿಂದ ಹೊರ ಬಂದ ಸಿದ್ದು - ಅಭಿಮಾನಿಗಳ ಜತೆ ಮಾಜಿ ಸಿಎಂ ಚರ್ಚೆ - ಕೈ ಕಾರ್ಯಕರ್ತರ ಜತೆ ಸೆಲ್ಫಿಗೆ ಫೋಸ್​​        ಶಿವಮೊಗ್ಗದಲ್ಲಿ ಮತ್ತೆ ಝಳಪಿಸಿದ ಮಾರಕಾಸ್ತ್ರ - ರೌಡಿ ಶೀಟರ್​​​ ಹಬೀಬ್​ ಬರ್ಬರ ಹತ್ಯೆ - ತುಂಗಾನಗರ ಠಾಣೆಯಲ್ಲಿ ಪ್ರಕರಣ        ಖಾತೆ ಹಂಚಿಕೆಯಾಯ್ತು, ಈಗ ಬಂಗಲೆ ಸರದಿ - ಒಂದೊಂದು ಬಂಗಲೆಗೆ ಮೂವರ ಪೈಪೋಟಿ - ಸಿಎಂ ಕುಮಾರಸ್ವಾಮಿಗೆ ಬಂಗಲೆ ಕೊಡೋದೇ ಚಿಂತೆ        ಹಿಟ್​​ಲಿಸ್ಟ್​​ನಲ್ಲಿದ್ದ 20 ಉಗ್ರರ ಪೈಕಿ ಇಬ್ಬರು ಫಿನಿಶ್ - ಕುಲ್ಗಾಮದಲ್ಲಿ ಇಬ್ಬರು ಎಲ್​​ಇಟಿ ಉಗ್ರರು ಉಡೀಸ್​ - ಶಸ್ತ್ರ ಸಹಿತ ಒಬ್ಬ ಟೆರರ್​ ಸರೆಂಡರ್        ಮನೆಗಾಗಿ ಕಣ್ಣೀರಿಟ್ಟ ವೃದ್ಧೆಗೆ ಶಾಸಕರ ಸಹಾಯ - 20 ಸಾವಿರ ಹಣ ನೀಡಿದ ಡಾ.ರಂಗನಾಥ - ದಿಗ್ವಿಜಯ ನ್ಯೂಸ್​ ವರದಿಗೆ ಸ್ಪಂದಿಸಿದ ಕುಣಿಗಲ್​ ಶಾಸಕ       
Breaking News

ಸಣ್ಣ ಕೈಗಾರಿಕೆ ಪುನಶ್ಚೇತನಕ್ಕೆ ವಾಗ್ದಾನ

Tuesday, 12.06.2018, 3:00 PM       No Comments

ಪಟ್ಟನಾಯಕನಹಳ್ಳಿ:ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸರ್ಕಾರ ಸಣ್ಣ ಕೈಗಾರಿಕೆಗಳ ಪುನಶ್ಚೇತನಕ್ಕೆ ಹೆಚ್ಚಿನ ಒತ್ತು ನೀಡಲಿದ್ದು, ಮಧ್ಯಮ ವರ್ಗದ ಕುಟುಂಬಗಳ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಸಹಕಾರಿಯಾಗಲಿದೆ ಸಣ್ಣ ಕೈಗಾರಿಕೆ ಸಚಿವ ಎಸ್.ಆರ್.ಶ್ರೀನಿವಾಸ್ ತಿಳಿಸಿದರು.

ಶಿರಾ ತಾಲೂಕು ಪಟ್ಟನಾಯಕನಹಳ್ಳಿಯಲ್ಲಿ ಭಾನುವಾರ ಸ್ಪಟಿಕಪುರಿ ಮಹಾಸಂಸ್ಥಾನ ಮಠಕ್ಕೆ ಭೇಟಿ ನೀಡಿ ಪೀಠಾಧ್ಯಕ್ಷ ಶ್ರೀ ನಂಜಾವಧೂತ ಸ್ವಾಮೀಜಿ ಆಶೀರ್ವಾದ ಪಡೆದ ನಂತರ ಮಾತನಾಡಿದರು.

ರೈತರ ಹಿತಕಾಯಲು ಸರ್ಕಾರ ಬದ್ಧವಾಗಿದೆ. ಹೇಮಾವತಿ ಕೊಳ್ಳದಲ್ಲಿ ಉತ್ತಮ ಮಳೆಯಾಗುತ್ತಿರುವುದು ಜಿಲ್ಲೆಗೆ ವರದಾನವಾಗಿದೆ. ಹೇಮಾವತಿ ನೀರನ್ನು ಸೂಕ್ತವಾಗಿ ಹಂಚಲು ಕ್ರಮ ಕೈಗೊಳ್ಳಲಾಗುವುದು. ಶಿರಾ ಶಾಸಕ ಸತ್ಯನಾರಾಯಣರಂತಹ ಹಿರಿಯರ ಮಾರ್ಗದರ್ಶನ, ಸಲಹೆ ಪಡೆದು ಜಿಲ್ಲೆಯ ಅಭಿವೃದ್ಧಿಗೆ ಕ್ರಮಕೈಗೊಳ್ಳುವುದಾಗಿ ತಿಳಿಸಿದರು.

ರೈತ ಮತ್ತು ಜನಸಾಮಾನ್ಯರ ಕಷ್ಟಗಳಿಗೆ ತಕ್ಷಣ ಸ್ಪಂದಿಸುವ ಮೂಲಕ ಜನಪರ ಆಡಳಿತ ನೀಡಿ, ನೀರಾವರಿ ಯೋಜನೆ ಬಗ್ಗೆ ಹೆಚ್ಚು ಆಸಕ್ತಿ ವಹಿಸಿ ನೀರಿನ ಸಮಸ್ಯೆ ಬಾರದಂತೆ ನೋಡಿಕೊಳ್ಳಬೇಕು. ಮತದಾರನಿಗೆ ಕೊಟ್ಟ ಮಾತು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹೆಚ್ಚು ಕಾರ್ಯಪ್ರವೃತ್ತರಾದಾಗ ಜನರ ವಿಶ್ವಾಸ ಮತ್ತೆ ಸಿಗಲಿದೆ ಎಂದು ಶ್ರೀಗಳು ಸಚಿವರಿಗೆ ಸಲಹೆ ನೀಡಿದರು.

ಜೆಡಿಎಸ್ ಮುಖಂಡರಾದ ಶಶಿಧರ್, ವಿಜಯಕುಮಾರ್, ಹನುಮಂತೇಗೌಡ, ಚಿನ್ನೇಗೌಡ, ಕಾಕಿಮಲಯ್ಯ, ರಂಗನಾಥಪ್ಪ ಇತರರಿದ್ದರು.

ಉಸ್ತುವಾರಿ ಸ್ಥಾನಕ್ಕೆ ಸಿಎಂ ಬಳಿ ಮನವಿ:ಉಪಮುಖ್ಯಮಂತ್ರಿ ಜತೆಗೆ ಗೃಹ, ಬೆಂಗಳೂರು ನಗರಾಭಿವೃದ್ಧಿ ಖಾತೆ ನಿರ್ವಹಿಸುತ್ತಿರುವ ಡಾ.ಜಿ.ಪರಮೇಶ್ವರ ಅವರಿಗೆ ಹೆಚ್ಚಿನ ಒತ್ತಡ ಇರುತ್ತದೆ. ಜಿಲ್ಲೆಯ ಸಮಸ್ಯೆಗಳ ಬಗ್ಗೆ ಹೆಚ್ಚು ಗಮನಹರಿಸಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಜಿಲ್ಲಾ ಉಸ್ತವಾರಿ ನನಗೆ ನೀಡುವಂತೆ ಸಿಎಂ ಬಳಿ ಮನವಿ ಮಾಡುತ್ತೇನೆ ಎಂದು ಸಣ್ಣ ಕೈಗಾರಿಕೆ ಸಚಿವ ಎಸ್.ಆರ್.ಶ್ರೀನಿವಾಸ್ ಹೇಳಿದರು.

Leave a Reply

Your email address will not be published. Required fields are marked *

Back To Top