Thursday, 18th January 2018  

Vijayavani

ಹಿರಿಯ ನಟ ನಿರ್ದೇಶಕ ಕಾಶಿನಾಥ್ ಇನ್ನಿಲ್ಲ - ಬೆಂಗಳೂರಿನ ಶಂಕರ ಕ್ಯಾನ್ಸರ್​ ಆಸ್ಪ್ರೆಯಲ್ಲಿ ಕೊನೆಯುಸಿರು- ಕಳಚಿದ ಅನುಭವದ ಕೊಂಡಿ        ಡೈರೆಕ್ಟರ್​ ಎಪಿ ಅರ್ಜುನ್​ ಕಚೇರಿಯಲ್ಲಿ ಕಳ್ಳತನ - ಯಶ್​ ಬರ್ತಡೇ ದಿನ ಕೃತ್ಯ - ಮಾಜಿ ಕಾರು ಡ್ರೈವರ್ ವಿರುದ್ಧ ಅನುಮಾನದ ಹುತ್ತ         ಒಂಟಿ ಮಹಿಳೆಗೆ ಜಡೆ ಹಿಡಿದು ಥಳಿತ - ಕೊಪ್ಪಳ ಬಸ್​ಸ್ಟಾಪ್​ನಲ್ಲಿ ಪುರುಷರ ಅಟ್ಟಹಾಸ - ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್         ನೈಂಟಿ ಕೊಡ್ತೇವೆ ಅಂತ ಹರಕೆ ಹೊರ್ತಾರೆ ಭಕ್ತರು - ದೇವರ ಹೆಸರಲ್ಲಿ ಸಾಮೂಹಿಕ ಮದ್ಯಾರಾಧನೆ - ಕುಣಿಗಲ್‍ನ ಒಡೇಭೈರವನಿಗೆ ಬ್ರಾಂದಿ ವಿಸ್ಕಿಯೇ ನೈವೇದ್ಯ        ಕೃಷ್ಣನಗರಿಯಲ್ಲಿ ಪರ್ಯಾಯ ಸಂಭ್ರಮ - ಕೃಷ್ಣಪೂಜೆ ನೆರವೇರಿಸಿದ ಪಲಿಮಾರು ಶ್ರೀಗಳು - ಅದ್ಧೂರಿಯಿಂದ ಸರ್ವಜ್ಞ ಪೀಠಾರೋಹಣ       
Breaking News :

ಸದ್ಭಾವನಾ ಸಮಾವೇಶಕ್ಕೆ ಕ್ಷಣಗಣನೆ

Monday, 04.09.2017, 3:00 AM       No Comments

ಬಾಗಲಕೋಟೆ: ವೀರಶೈವ- ಲಿಂಗಾಯತ ಪ್ರತ್ಯೇಕ ಅಲ್ಲ ಎನ್ನುವ ಸಂದೇಶ ಸಾರಲು ನಾಡಿನ ವಟುಗಳ ವಿಶ್ವವಿದ್ಯಾಲಯ ಎಂದು ಪ್ರಖ್ಯಾತವಾದ ಬಾದಾಮಿಯ ಶ್ರೀಮದ್ವೀರಶೈವ ಶಿವಯೋಗ ಮಂದಿರದಲ್ಲಿ ಸೋಮವಾರ ಹಮ್ಮಿಕೊಂಡಿರುವ ಸದ್ಭಾವನಾ ಸಮಾವೇಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಪಂಚಪೀಠಗಳ ಪೈಕಿ ನಾಲ್ವರು ಜಗದ್ಗುರುಗಳು, ಒಂದು ಸಾವಿರ ಗುರು- ವಿರಕ್ತ ಮಠಾಧೀಶರು, ಉಪಾ ಚಾರ್ಯರು ಹಾಗೂ ಒಂದು ಲಕ್ಷಕ್ಕೂ ಅಧಿಕ ಭಕ್ತರು ಸಮಾವೇಶದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಲ್ಲಿ ಸಂಘಟಕರು ಇದ್ದಾರೆ. ಸಮಾವೇಶಕ್ಕೆ 24045 ಅಡಿಯ ಮುಖ್ಯ ವೇದಿಕೆ ನಿರ್ವಣಗೊಂಡಿದೆ. ಗಣ್ಯರಿಗಾಗಿ ಮೂರು ಸಾವಿರಕ್ಕೂ ಅಧಿಕ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಐದು ಎಕರೆ ವಿಶಾಲ ಪ್ರದೇಶದಲ್ಲಿ ಕುಳಿತುಕೊಂಡು ಕಾರ್ಯಕ್ರಮ ವೀಕ್ಷಿಸಲು ಜನರಿಗೆ ಅವಕಾಶ ಕಲ್ಪಿಸಲಾಗಿದೆ.

ಪ್ರತ್ಯೇಕ ಧರ್ಮ ಸ್ಥಾನಮಾನದ ಬದಲು ಸಮುದಾಯಕ್ಕೆ ನ್ಯಾಯಯುತವಾಗಿ ಸಿಗಬೇಕಾದ ಸೌಲಭ್ಯ ಪಡೆಯಲು ಹೋರಾಟ ನಡೆಸ ಬೇಕಾಗಿದೆ. ಸಿಎಂಗೆ ಅವರಿಗೆ ಕಾಳಜಿ ಯಿದ್ದರೆ ವೀರಶೈವ, ಲಿಂಗಾಯತ ಧರ್ಮಕ್ಕೆ ರಾಜ್ಯ ಸರ್ಕಾರ 2ಎ ಸ್ಥಾನಮಾನ ನೀಡಬೇಕು.

| ಬಾಳೆಹೊನ್ನೂರು ಶ್ರೀ ರಂಭಾಪುರಿ


ವೀರಸೋಮೇಶ್ವರ ಜಗದ್ಗುರುಗಳು ಮಹಾಸಭಾ ಬೆಂಬಲ

ದಾವಣಗೆರೆ: ಪಂಚಪೀಠಗಳು ಬಾದಾಮಿ ಯಲ್ಲಿ ಆಯೋಜಿಸಿರುವ ಗುರು ವಿರಕ್ತರ ಸಮಾವೇಶಕ್ಕೆ ಅಖಿಲ ಭಾರತ ವೀರಶೈವ ಮಹಾಸಭಾದ ಸಂಪೂರ್ಣ ಬೆಂಬಲ ಇದೆ ಎಂದು ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ, ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದರು. ಪಂಚಾಚಾರ್ಯ ಮಂದಿರದಲ್ಲಿ ಭಾನುವಾರ ನಡೆದ ಜನಜಾಗೃತಿ ಧರ್ಮ ಸಮ್ಮೇಳನದ ಸಮಾ

ರೋಪದಲ್ಲಿ ಮಾತನಾಡಿ ದರು. ಗುರು ವಿರಕ್ತರ ಸಮಾವೇಶ ಅಥವಾ ಲಿಂಗಾಯತ ಧರ್ಮ ಕ್ಕಾಗಿ ಹೋರಾಟ ನಡೆಸುತ್ತಿರುವ ಪ್ರತ್ಯೇಕ ಕಾರ್ಯಕ್ರಮಗಳಲ್ಲೂ ವೀರಶೈವ ಮಹಾಸಭಾದ ಎಲ್ಲ ಪದಾಧಿಕಾರಿಗಳು ಭಾಗವಹಿಸದಿರಲು ಮಹಾಸಭಾ ನಿರ್ಣಯ ಕೈಗೊಂಡಿದೆ. ಹೀಗಾಗಿ ಸಮಾವೇಶದಲ್ಲಿ ತಾವು ಭಾಗವಹಿಸುತ್ತಿಲ್ಲ ಎಂದರು.

Leave a Reply

Your email address will not be published. Required fields are marked *

Back To Top