Thursday, 21st June 2018  

Vijayavani

ಮೈತ್ರಿ ಸರ್ಕಾರದಲ್ಲಿ ಮತ್ತೆ ತಾರತಮ್ಯತೆ - ರೇವಣ್ಣ ಕಾರ್​​​ಗೆ ಗೇಟ್​​ ಓಪನ್​​, ದೇಶಪಾಂಡೆಗೆ ನಟರಾಜ ಸರ್ವಿಸ್​​        ಅಂದು ಹೇಳಿದ್ದೊಂದು.. ಇಂದು ಮಾಡಿದ್ದೊಂದು - ಸಂಡೂರಿನಲ್ಲಿ ಕೊಟ್ಟು ಮಾತು ಮರೆತ ಸಿಎಂ - ಮತ್ತೆ ಗಣಿಗಾರಿಕೆಗೆ ಅವಕಾಶ        ಡಿಕೆಶಿ ಡೈರಿಯಲ್ಲಿ ಕೆಜಿ ಕೋಡ್​ ವಿಚಾರ - ದೆಹಲಿಯಿಂದ ಆಗಮಿಸಿದ ಇಡಿ ತಂಡ - ಡಿಕೆಶಿ ಸೇರಿ ಐವರು ವಿರುದ್ಧ ಇಡಿ FIR ಸಾಧ್ಯತೆ        ಶಕ್ತಿ ಭವನದಲ್ಲಿ ಬಜೆಟ್​​​ ಪೂರ್ವಭಾಗಿ ಸಭೆ - ಸಣ್ಣ ನೀರಾವರಿ ಇಲಾಖೆ ಜತೆ ಸಿಎಂ ಚರ್ಚೆ - ಅನುದಾನ ಭರವಸೆ ನೀಡಿದ ಎಚ್​ಡಿಕೆ        ಬಿಜಿಎಸ್​ ಆಸ್ಪತ್ರೆಯಲ್ಲಿ ಶ್ರೀಗಳಿಗೆ ಚಿಕಿತ್ಸೆ - ನಡೆದಾಡುವ ದೇವರ ಕಾಣಲು ಗಣ್ಯರ ದಂಡು - ಶ್ರೀಗಳ ಆರೋಗ್ಯ ವಿಚಾರಿಸಿದ ಬಿಎಸ್​​ವೈ        ಜಿಲ್ಲಾಸ್ಪತ್ರೆಯಲ್ಲಿ ಅನಾಥವಾಯ್ತು ಕಂದಮ್ಮ - ಶಸ್ತ್ರಚಿಕಿತ್ಸೆಗೆ ಬಂದು ಮಗು ಬಿಟ್ಟೋದ ಹೆತ್ತಮ್ಮ - ರೋಧಿಸುತ್ತಿದೆ 3 ತಿಂಗಳ ಕೂಸು       
Breaking News

ಸಾಂಘಿಕವಾಗಿ ಅಭಿವೃದ್ಧಿಯತ್ತ ಹೆಜ್ಜೆಯಿಡಿ

Tuesday, 12.06.2018, 1:30 PM       No Comments

ಶಿಡ್ಲಘಟ್ಟ: ಗ್ರಾಮಗಳಲ್ಲಿ ರೈತ ಆಸಕ್ತ ಗುಂಪು ರಚಿಸುತ್ತಿರುವುದು ಸಂತೋಷದಾಯಕ ಸಂಗತಿ. ತಮ್ಮ ಅಭಿವೃದ್ಧಿಗಾಗಿ ತಾವುಗಳೇ ಒಗ್ಗೂಡುವ ಈ ಯೋಜನೆಯಲ್ಲಿ ರೈತರು ಸಾಂಘಿಕವಾಗಿ ಅಭಿವೃದ್ಧಿಯತ್ತ ದಾಪುಗಾಲಿಡಬೇಕೆಂದು ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ಮೈರಾಡ ಕಾರ್ಯಕ್ರಮದ ಅಧಿಕಾರಿ ಶಿವಶಂಕರ್ ಹೇಳಿದರು.

ಲಗಿನಾಯಕನಹಳ್ಳಿಯಲ್ಲಿ ಸೋಮವಾರ ಶಿಡ್ಲಘಟ್ಟ ರೇಷ್ಮೆ ರೈತ ಉತ್ಪಾದಕ ಕಂಪನಿಯಿಂದ ಆಯೋಜಿಸಿದ್ದ ವಿಶ್ವಪರಿಸರ ದಿನಾಚರಣೆ ಮತ್ತು ರೈತ ಆಸಕ್ತ ಗುಂಪುಗಳ ಆರಂಭೋತ್ಸವದಲ್ಲಿ ಮಾತನಾಡಿದರು. ಯಾವುದೋ ನೆರವು ನಂಬಿ ಕಾಯುವುದರ ಬದಲು ಸ್ವಂತ ಶಕ್ತಿ, ಸಾಮರ್ಥ್ಯ, ಬೆಳೆದ ಉತ್ಪನ್ನಕ್ಕೆ ಉತ್ತಮ ಬೆಲೆಯನ್ನು ಕಂಡುಕೊಂಡು ಅಭಿವೃದ್ಧಿಯತ್ತ ಮುನ್ನಡೆಯೋಣ. ಈ ನಿಟ್ಟಿನಲ್ಲಿ ಪ್ರತಿಯೊಂದು ರೈತ ಆಸಕ್ತ ಗುಂಪುಗಳು ಇತರರಿಗೆ ಮಾದರಿಯಾಗಲಿ ಎಂದರು.

ಶಿಡ್ಲಘಟ್ಟ ರೇಷ್ಮೆ ರೈತ ಉತ್ಪಾದಕ ಕಂಪನಿ ಅಧ್ಯಕ್ಷ ಬೋದಗೂರು ವೆಂಕಟಸ್ವಾಮಿರೆಡ್ಡಿ ಮಾತನಾಡಿ, ನಮ್ಮ ಪೂರ್ವಜರು ರೂಢಿಸಿಕೊಂಡಿದ್ದ ಪದ್ಧತಿಗಳನ್ನು ಕೈಬಿಟ್ಟು ಪರಿಸರ ಹಾಳಾಗಲು ಕಾರಣರಾಗಿದ್ದೇವೆ. ಪ್ರತಿಯೊಬ್ಬರೂ ಗಿಡ ನೆಡುವ ಹವ್ಯಾಸ ರೂಢಿಸಿಕೊಳ್ಳಬೇಕು. ಅರಳಿ ಮರವೊಂದು ಹಳ್ಳಿಯಲ್ಲಿದ್ದರೆ ಆಮ್ಲಜನಕದ ಕಾರ್ಖಾನೆಯಿದ್ದಂತೆ. ಅರಳಿ ಮರವೊಂದು ಗಂಟೆಗೆ 2,252ಕಿ.ಲೋ. ಇಂಗಾಲದ ಡೈಆಕ್ಸೆ ೖಡ್ ಹೀರಿಕೊಂಡು 1,712ಕಿ.ಲೋ. ಆಮ್ಲಜನಕ ಬಿಡುಗಡೆ ಮಾಡುತ್ತದೆ ಎಂದರು.

ರೇಷ್ಮೆ ಇಲಾಖೆ ಸಹಾಯಕ ನಿರ್ದೇಶಕ ಬೋಜಣ್ಣ ಮಾತನಾಡಿ, ರೇಷ್ಮೆ ಇಲಾಖೆ ರೈತರಲ್ಲಿ ಜಾಗೃತಿ ಮೂಡಿಸಿ, ಸಹಾಯಧನ ನೀಡಿ, ತಾಂತ್ರಿಕತೆ ಒದಗಿಸುತ್ತಿದೆ. ಇದೀಗ ಮೈರಾಡ ಸಂಸ್ಥೆಯ ಸಹಕಾರದಿಂದ ರೈತ ಆಸಕ್ತ ಗುಂಪುಗಳ ಮೂಲಕ ರೇಷ್ಮೆ ಬೆಳೆಗಾರರನ್ನು ಒಗ್ಗೂಡಿಸಿ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವ ಶಕ್ತಿ ಪಡೆಯುವಂತೆ ಮಾಡಲು ಶ್ರಮಿಸುತ್ತಿದೆ ಎಂದರು.

ಶಿಡ್ಲಘಟ್ಟ ರೇಷ್ಮೆ ರೈತ ಉತ್ಪಾದಕ ಕಂಪನಿಯ ಸಿಇಒ ಕೆ.ಎನ್.ಜನಾರ್ದನಮೂರ್ತಿ ರೈತರಿಗೆ ಗಿಡ ವಿತರಿಸಿದರು.

ಹೆಬ್ಬೇವು, ಬಾದಾಮಿ, ಸಿಲ್ವರ್​ಓಕ್, ಹುಣಸೆ, ಗುಲ್​ವೊಹರ್, ಬೆಟ್ಟದ ನೆಲ್ಲಿ ಮುಂತಾದ ಜಾತಿಗಳ 150ಗಿಡಗಳನ್ನು ರೈತರಿಗೆ ಅರಣ್ಯ ಇಲಾಖೆ ಸಹಕಾರದಿಂದ ಉಚಿತವಾಗಿ ನೀಡಲಾಯಿತು.

ಶಿಡ್ಲಘಟ್ಟ ರೇಷ್ಮೆ ರೈತ ಉತ್ಪಾದಕ ಕಂಪನಿ ಖಜಾಂಚಿ ಆರ್.ದೇವರಾಜ್, ರೇಷ್ಮೆ ನಿರೀಕ್ಷಕ ಜಗದೇವಪ್ಪ ಗುಗ್ಗರಿ, ಸಿಬ್ಬಂದಿ ಮುನಿರಾಜು, ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳಾದ ಮಹೇಶ್, ಪ್ರಕಾಶ್, ನಿರ್ದೇಶಕ ನರಸಿಂಹಮೂರ್ತಿ ಮತ್ತಿತರರಿದ್ದರು.

Leave a Reply

Your email address will not be published. Required fields are marked *

Back To Top