Saturday, 23rd June 2018  

Vijayavani

ಬಜೆಟ್ ಪೂರ್ವಭಾವಿ ಸಭೆ ಆರಂಭ - ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಇಲಾಖೆ ಸಭೆ -ಸಿಎಂ ನೇತೃತ್ವದಲ್ಲಿ ಮೀಟಿಂಗ್​​        ಟ್ರಾನ್ಸ್​​​ಫರ್​ಗೆ ನೋ ಬ್ರೋಕರ್ ಸಿಸ್ಟಂ - ಸಿಎಂ, ಡಿಸಿಎಂ ಹೆಸ್ರು ಬಳಸಿದ್ರೆ ದೂರವಿಡಿ - ಪೊಲೀಸ್​​​​ ಅಧಿಕಾರಿಗಳಿಗೆ ಸಿಎಂ ಆರ್ಡರ್​​​​        ಲಾರಿಗೆ ಸಿಲುಕಿ ಆತ್ಮಹತ್ಯೆಗೆ ಯುವಕನ ಯತ್ನ - ಚಕ್ರ ಹರಿದು ಎರಡೂ ಕಾಲು ಕಟ್​ - ಕೊಪ್ಪಳದ ಕುಕನೂರು ಪಟ್ಟಣದಲ್ಲಿ ಘಟನೆ        ಗಂಗಾಧರ ಚಡಚಣ ನಿಗೂಢ ಹತ್ಯ ಪ್ರಕರಣ - 6 ಮಂದಿ ಆರೋಪಿಗಳ ಸಿಐಡಿ ತನಿಖೆ ಪೂರ್ಣ        ಇಂದಿನಿಂದ ಮೆಟ್ರೋದ 6 ಬೋಗಿ ರೈಲು ಓಡಾಟ - ಬೈಯಪ್ಪನ ಹಳ್ಳಿಯಿಂದ ಮೈಸೂರು ರಸ್ತೆ ವರೆಗೆ ಸಂಚಾರ        ಹಜ್​ ಭವನಕ್ಕೆ ಟಿಪ್ಪು ಹೆಸರಿಡಲು ಪ್ರಸ್ತಾಪ- ವಕ್ಫ್​ ಸಚಿವ ಜಮೀರ್​ ವಿರುದ್ಧ ಆಕ್ರೋಶ- ಟಿಪ್ಪು ಹೆಸರಿಟ್ರೆ ಉಗ್ರ ಹೋರಾಟ ಎಂದ ಬಿಜೆಪಿ       
Breaking News

ಸಿಟಿ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷರಾಗಿ ಕಮಲ್​ಕುಮಾರ್

Wednesday, 13.06.2018, 5:00 AM       No Comments

ಹಾಸನ: ನಾಲ್ಕು ದಶಕಗಳ ಇತಿಹಾಸ ಹೊಂದಿರುವ ನಗರದ ಸಿಟಿ ಕೋ ಆಪರೇಟಿವ್ ಬ್ಯಾಂಕ್​ನ ನೂತನ ಅಧ್ಯಕ್ಷರಾಗಿ ಬಿಜೆಪಿ ಮುಖಂಡ ಎಂ.ಕೆ.ಕಮಲ್​ಕುಮಾರ್ ಅವಿರೋಧವಾಗಿ ಆಯ್ಕೆಯಾದರು.

ಹನ್ನೊಂದು ನಿರ್ದೇಶಕರನ್ನು ಹೊಂದಿರುವ ಬ್ಯಾಂಕ್ ಆಡಳಿತ ಮಂಡಳಿಯಲ್ಲಿ ಚುನಾವಣೆ ಪ್ರಕ್ರಿಯೆಯಲ್ಲಿ ಒಂದೇ ನಾಮಪತ್ರ ಸಲ್ಲಿಕೆಯಾದ್ದರಿಂದ ಚುನಾವಣಾಧಿಕಾರಿಗಳು ಅವಿರೋಧ ಆಯ್ಕೆಯನ್ನು ಪ್ರಕಟಿಸಿದರು. ನಗರಸಭೆ ಸದಸ್ಯರಾಗಿ, ಬ್ಯಾಂಕ್ ನಿರ್ದೇಶಕರಾಗಿ, ಸೇವಾದಳ ಸೇರಿದಂತೆ ಹಲವು ಸಂಘ, ಸಂಸ್ಥೆಗಳ ಮೂಲಕ ಸಾಮಾಜಿಕ ಚಟುವಟಿಕೆಗಳಲ್ಲಿ ಕಮಲ್​ಕುಮಾರ್ ತೊಡಗಿಸಿಕೊಂಡಿದ್ದಾರೆ.

ಅಧ್ಯಕ್ಷ ಕಮಲ್​ಕುಮಾರ್ ಮಾತನಾಡಿ, 40 ವರ್ಷದ ಹಿಂದೆ ಸಿಟಿ ಕೋ ಆಪರೇಟಿವ್ ಬ್ಯಾಂಕ್​ನ್ನು ಮಾಜಿ ಶಾಸಕ ಜ್ವಾಲನಯ್ಯ, ಎಚ್.ಎಸ್.ಕೃಷ್ಣಮೂರ್ತಿ, ನಲ್ಲೂರೇಗೌಡ, ನಗರಸಭೆ ಮಾಜಿ ಅಧ್ಯಕ್ಷ ಚನ್ನವೀರಪ್ಪ ಅವರಂತಹ ಮಹಾನ್ ನಾಯಕರು ಶ್ರಮಪಟ್ಟು ಈ ಮಟ್ಟಕ್ಕೆ ತಂದು ನಿಲ್ಲಿಸಿದ್ದಾರೆ. ಬ್ಯಾಂಕ್ ಆರ್ಥಿಕ ಸ್ಥಿತಿ ಮತ್ತಷ್ಟು ಉತ್ತಮಗೊಳಿಸಿ, ಜನರಿಗೆ ಸೌಲಭ್ಯ ಒದಗಿಸಲು ಆದ್ಯತೆ ನೀಡುತ್ತೇನೆ ಎಂದರು.

ಬ್ಯಾಂಕ್ 15 ಸಾವಿರ ಷೇರುದಾರರನ್ನು ಹೊಂದಿದ್ದು, 2 ಕೋಟಿ ರೂ.ಚಿನ್ನಾಭರಣ ಸಾಲ, 6 ಕೋಟಿ ರೂ. ಅಡಮಾನ ಸಾಲ ನೀಡಲಾಗಿದೆ ಎಂದರು.

ಎಚ್​ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಗಿರೀಶ್ ಚನ್ನವೀರಪ್ಪ, ಸಿಟಿ-ಕೋ ಆಪರೇಟಿವ್ ಬ್ಯಾಂಕ್ ಉಪಾಧ್ಯಕ್ಷ ಶಾಂತಶೆಟ್ಟಿ, ಮಾಜಿ ಅಧ್ಯಕ್ಷ ಯಶವಂತ್, ನಿರ್ದೇಶಕ ಶ್ರೀನಿವಾಸ್, ಚಂದ್ರಶೇಖರ್, ಹೇಮಲತಾ ಇತರರು ನೂತನ ಅಧ್ಯಕ್ಷರಿಗೆ ಶುಭಾಶಯ ಕೋರಿದರು.

Leave a Reply

Your email address will not be published. Required fields are marked *

Back To Top