Friday, 17th August 2018  

Vijayavani

Breaking News

ಸುತ್ತೂರು ಮಠಕ್ಕೆ ಶಾಸಕ, ಸಚಿವರ ಭೇಟಿ

Thursday, 14.06.2018, 5:07 AM       No Comments

ನಂಜನಗೂಡು: ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎನ್.ಮಹೇಶ್, ಪ್ರವಾಸೋದ್ಯಮ ಹಾಗೂ ಸಕ್ಕರೆ ಸಚಿವ ಸಾ.ರಾ.ಮಹೇಶ್ ಹಾಗೂ ವರುಣ ಶಾಸಕ ಡಾ.ಎಸ್.ಯತೀಂದ್ರ ಬುಧವಾರ ತಾಲೂಕಿನ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಆಶೀರ್ವಾದ ಪಡೆದರು.

ಮೂವರಿಗೂ ಶ್ರೀಗಳು ಫಲತಾಂಬೂಲ ನೀಡಿ ಸನ್ಮಾನಿಸಿದರು. ಮೊದಲಿಗೆ ಆಗಮಿಸಿದ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಶ್ರೀಗಳಿಗೆ ಮಾಲಾರ್ಪಣೆ ಮಾಡಿ ಆಶೀರ್ವಾದ ಪಡೆದರು. ನಂತರ ಮಾತನಾಡಿ, ಸುತ್ತೂರು ಸುಕ್ಷೇತ್ರವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದರು.

ಶಿಕ್ಷಣ ಸಚಿವ ಎನ್.ಮಹೇಶ್ ಶ್ರೀಗಳಿಂದ ಆಶೀರ್ವಾದ ಪಡೆದ ನಂತರ ಶಿಕ್ಷಣ ಕ್ಷೇತ್ರದಲ್ಲಿ ಆಗಬೇಕಾದ ಸುಧಾರಣೆಗಳ ಕುರಿತು ರ್ಚಚಿಸಿದರು. ಬಡ ಹಾಗೂ ಮಧ್ಯಮ ವರ್ಗದ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವ ಮೂಲಕ ಈ ಕ್ಷೇತ್ರದಲ್ಲಿ ಸಾಕಷ್ಟು ಕೃಷಿ ಮಾಡಿರುವ ಶ್ರೀಗಳೊಂದಿಗೆ ಸಾಕಷ್ಟು ವಿಷಯಗಳನ್ನು ಹಂಚಿಕೊಂಡಿದ್ದು, ಮುಂದಿನ ದಿನಗಳಲ್ಲಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುವುದಾಗಿ ತಿಳಿಸಿದರು.

ಶಾಸಕ ಡಾ.ಎಸ್.ಯತೀಂದ್ರ ಶ್ರೀಗಳ ಆಶೀರ್ವಾದ ಪಡೆದ ನಂತರ ಶಿವಯೋಗಿಗಳ ಗದ್ದುಗೆಯಲ್ಲಿ ಪೂಜೆ ಸಲ್ಲಿಸಿದರು.

Leave a Reply

Your email address will not be published. Required fields are marked *

Back To Top