Saturday, 23rd June 2018  

Vijayavani

ಬಜೆಟ್ ಪೂರ್ವಭಾವಿ ಸಭೆ ಆರಂಭ - ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಇಲಾಖೆ ಸಭೆ -ಸಿಎಂ ನೇತೃತ್ವದಲ್ಲಿ ಮೀಟಿಂಗ್​​        ಟ್ರಾನ್ಸ್​​​ಫರ್​ಗೆ ನೋ ಬ್ರೋಕರ್ ಸಿಸ್ಟಂ - ಸಿಎಂ, ಡಿಸಿಎಂ ಹೆಸ್ರು ಬಳಸಿದ್ರೆ ದೂರವಿಡಿ - ಪೊಲೀಸ್​​​​ ಅಧಿಕಾರಿಗಳಿಗೆ ಸಿಎಂ ಆರ್ಡರ್​​​​        ಲಾರಿಗೆ ಸಿಲುಕಿ ಆತ್ಮಹತ್ಯೆಗೆ ಯುವಕನ ಯತ್ನ - ಚಕ್ರ ಹರಿದು ಎರಡೂ ಕಾಲು ಕಟ್​ - ಕೊಪ್ಪಳದ ಕುಕನೂರು ಪಟ್ಟಣದಲ್ಲಿ ಘಟನೆ        ಗಂಗಾಧರ ಚಡಚಣ ನಿಗೂಢ ಹತ್ಯ ಪ್ರಕರಣ - 6 ಮಂದಿ ಆರೋಪಿಗಳ ಸಿಐಡಿ ತನಿಖೆ ಪೂರ್ಣ        ಇಂದಿನಿಂದ ಮೆಟ್ರೋದ 6 ಬೋಗಿ ರೈಲು ಓಡಾಟ - ಬೈಯಪ್ಪನ ಹಳ್ಳಿಯಿಂದ ಮೈಸೂರು ರಸ್ತೆ ವರೆಗೆ ಸಂಚಾರ        ಹಜ್​ ಭವನಕ್ಕೆ ಟಿಪ್ಪು ಹೆಸರಿಡಲು ಪ್ರಸ್ತಾಪ- ವಕ್ಫ್​ ಸಚಿವ ಜಮೀರ್​ ವಿರುದ್ಧ ಆಕ್ರೋಶ- ಟಿಪ್ಪು ಹೆಸರಿಟ್ರೆ ಉಗ್ರ ಹೋರಾಟ ಎಂದ ಬಿಜೆಪಿ       
Breaking News

ಸೋನಾಕ್ಷಿ ಪಾಲಾದ ಕರೀನಾ ಅವಕಾಶ

Thursday, 14.06.2018, 3:00 AM       No Comments

ಮರಾಠಿಯಲ್ಲಿ ತೆರೆಕಂಡಿದ್ದ ‘ಆಲ್ಪ ಮನುಸ್’ ಚಿತ್ರವನ್ನು ಹಿಂದಿಗೆ ರಿಮೇಕ್ ಮಾಡಲು ಮುಂದಾಗಿದ್ದಾರೆ ನಿರ್ದೇಶಕ ಅಶುತೋಷ್ ಗೊವಾರಿಕರ್. ಈ ಚಿತ್ರ ಘೋಷಣೆಯಾದಾಗಿನಿಂದಲೂ ನಾಯಕಿಯ ವಿಚಾರದಲ್ಲಿ ಸುದ್ದಿಯಾಗುತ್ತಿದೆ. ಇತ್ತೀಚೆಗೆ ಕರೀನಾ ಕಪೂರ್ ಖಾನ್ ಚಿತ್ರಕ್ಕೆ ನಾಯಕಿಯಾಗುತ್ತಾರೆ ಎನ್ನಲಾಗಿತ್ತಾದರೂ, ಅಧಿಕೃತ ಮಾಹಿತಿ ಹೊರ ಬಿದ್ದಿರಲಿಲ್ಲ. ಆದರೆ ಈಗ ಕೇಳಿ ಬರುತ್ತಿರುವ ಮಾತೇನೆಂದರೆ, ಸೋನಾಕ್ಷಿ ಸಿನ್ಹಾ ಈ ಚಿತ್ರಕ್ಕೆ ಹೀರೋಯಿನ್ ಆಗಿ ಫೈನಲ್ ಆಗಿದ್ದಾರಂತೆ.

ನಿರ್ದೇಶಕರು ಈ ಮೊದಲು ಕರೀನಾರನ್ನು ಹೀರೋಯಿನ್ ಪಾತ್ರಕ್ಕೆ ಆಯ್ಕೆ ಮಾಡಿಕೊಳ್ಳುವ ಯೋಚನೆ ಇಟ್ಟುಕೊಂಡಿದ್ದರು. ಆದರೆ, ರಾಜ್ ಮೆಹ್ತಾ ನಿರ್ದೇಶನದ ಚಿತ್ರದಲ್ಲಿ ಕರೀನಾ ನಟಿಸುತ್ತಿದ್ದಾರೆ. ಹಾಗಾಗಿ ಅವರು ಕಾಲ್​ಶೀಟ್ ನೀಡಲು ಹಿಂದೇಟು ಹಾಕಿದ್ದಾರೆ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸೋನಾಕ್ಷಿ ಅವರನ್ನು ಚಿತ್ರಕ್ಕೆ ಆಯ್ಕೆ ಮಾಡಿಕೊಳ್ಳಲು ನಿರ್ದೇಶಕರು ನಿರ್ಧರಿಸಿದ್ದಾರೆ. ಈಗಾಗಲೇ ಸೋನಾಕ್ಷಿ ಜತೆ ಮಾತುಕತೆ ನಡೆಸಿರುವ ಅಶುತೋಷ್, ಅವರ ಕಾಲ್​ಶೀಟ್ ಪಡೆಯಲು ಯಶಸ್ವಿಯಾಗಿದ್ದಾರಂತೆ. ಮೂಲ ಚಿತ್ರವನ್ನು ನೋಡಿದ್ದ ಸೋನಾಕ್ಷಿಗೆ ಚಿತ್ರದ ಕಥೆ ಇಷ್ಟವಾಗಿದೆ. ಹಾಗಾಗಿ ಅವರು ಈ ಚಿತ್ರ ಮಾಡಲು ಒಪ್ಪಿಕೊಂಡಿದ್ದಾರೆ ಎನ್ನಲಾಗುತ್ತಿದೆ. ‘ಹ್ಯಾಪಿ ಫಿರ್ ಬಾಗ್ ಜಾಯೇಗಿ’, ‘ಕಳಂಕ್’ ಚಿತ್ರಗಳು ಸೋನಾಕ್ಷಿ ಕೈಯಲ್ಲಿವೆ. ಬುಧವಾರದಿಂದ ‘ಕಳಂಕ್’ ಚಿತ್ರದ ಶೂಟಿಂಗ್​ನಲ್ಲೂ ಸೋನಾಕ್ಷಿ ಪಾಲ್ಗೊಳ್ಳುತ್ತಿದ್ದಾರೆ. ಈ ಬಗ್ಗೆ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ ಕೂಡ. ‘ಯಮಲಾ ಪಗಲಾ ದಿವಾನಾ: ಫಿರ್ ಸೆ’, ‘ರೇಸ್ 3’ ಚಿತ್ರಗಳಲ್ಲಿ ಸೋನಾಕ್ಷಿ ಅತಿಥಿ ಪಾತ್ರ ಮಾಡುತ್ತಿದ್ದಾರೆ. -ಏಜೆನ್ಸೀಸ್

Leave a Reply

Your email address will not be published. Required fields are marked *

Back To Top