Thursday, 18th January 2018  

Vijayavani

ಹಿರಿಯ ನಟ ನಿರ್ದೇಶಕ ಕಾಶಿನಾಥ್ ಇನ್ನಿಲ್ಲ - ಬೆಂಗಳೂರಿನ ಶಂಕರ ಕ್ಯಾನ್ಸರ್​ ಆಸ್ಪ್ರೆಯಲ್ಲಿ ಕೊನೆಯುಸಿರು- ಕಳಚಿದ ಅನುಭವದ ಕೊಂಡಿ        ಡೈರೆಕ್ಟರ್​ ಎಪಿ ಅರ್ಜುನ್​ ಕಚೇರಿಯಲ್ಲಿ ಕಳ್ಳತನ - ಯಶ್​ ಬರ್ತಡೇ ದಿನ ಕೃತ್ಯ - ಮಾಜಿ ಕಾರು ಡ್ರೈವರ್ ವಿರುದ್ಧ ಅನುಮಾನದ ಹುತ್ತ         ಒಂಟಿ ಮಹಿಳೆಗೆ ಜಡೆ ಹಿಡಿದು ಥಳಿತ - ಕೊಪ್ಪಳ ಬಸ್​ಸ್ಟಾಪ್​ನಲ್ಲಿ ಪುರುಷರ ಅಟ್ಟಹಾಸ - ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್         ನೈಂಟಿ ಕೊಡ್ತೇವೆ ಅಂತ ಹರಕೆ ಹೊರ್ತಾರೆ ಭಕ್ತರು - ದೇವರ ಹೆಸರಲ್ಲಿ ಸಾಮೂಹಿಕ ಮದ್ಯಾರಾಧನೆ - ಕುಣಿಗಲ್‍ನ ಒಡೇಭೈರವನಿಗೆ ಬ್ರಾಂದಿ ವಿಸ್ಕಿಯೇ ನೈವೇದ್ಯ        ಕೃಷ್ಣನಗರಿಯಲ್ಲಿ ಪರ್ಯಾಯ ಸಂಭ್ರಮ - ಕೃಷ್ಣಪೂಜೆ ನೆರವೇರಿಸಿದ ಪಲಿಮಾರು ಶ್ರೀಗಳು - ಅದ್ಧೂರಿಯಿಂದ ಸರ್ವಜ್ಞ ಪೀಠಾರೋಹಣ       
Breaking News :

ಸೌಲಭ್ಯ ಸದುಪಯೋಗಕ್ಕೆ ನೇಕಾರರು ಮುಂದಾಗಬೇಕು

Thursday, 17.11.2016, 8:35 AM       No Comments

ವಿಜಯಪುರ: ಕೈಮಗ್ಗ ಮತ್ತು ವಿದ್ಯುತ್ಚಾಲಿತ ಮಗ್ಗಗಳಲ್ಲಿ ದುಡಿದು ಜೀವನ ನಡೆಸುವ ನೇಕಾರರಿಗಾಗಿ ಸರ್ಕಾರವು ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಂಡು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಸದಸ್ಯ ಬಾಲೆಪುರ ಲಕ್ಷ್ಮೀನಾರಾಯಣಪ್ಪ ಸಲಹೆ ನೀಡಿದರು.

ಪಟ್ಟಣದ ಯಲ್ಲಮ್ಮ ದೇವಾಲ ಯದ ಬಳಿಯ ರಾಯಲ್ ಪಬ್ಲಿಕ್ ಶಾಲಾ ಆವರಣದಲ್ಲಿ ಚೌಡೇಶ್ವ್ಪ ರೇಷ್ಮೆ ಕೈಮಗ್ಗ ನೇಕಾರರ ಸಹಕಾರ ಸಂಘ, ವಿದ್ಯುತ್ಚಾಲಿತ ಮಗ್ಗಗಳ ಸಹಕಾರ ಸಂಘಗಳ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಸಹಾಯಧನ, ನೇಕಾರರಿಗೆ ಸಲಕರಣೆ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ನೇಕಾರರ ಆರ್ಥಿಕ ಪರಿಸ್ಥಿತಿಯು ಸುಧಾರಣೆಯಾಗಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗಬೇಕು. ಸರ್ಕಾರವು ಕಡಿಮೆ ಬಡ್ಡಿದರದಲ್ಲಿ ಸಾಲ ಒದಗಿಸುತ್ತಿದ್ದು, ಇದರ ಸದ್ಬಳಕೆ ಮಾಡಿಕೊಳ್ಳಬೆಕು ಎಂಸದು ಹೆಳಿದರು.

ಪ್ರಭಂಜನ ಏಜುಕೇಶನ್ ಟ್ರಸ್ಟ್ನ ಸಂಸ್ಥಾಪಕ ಅಧ್ಯಕ್ಷ ವಿ.ಎನ್.ರಮೇಶ್ ಮಾತನಾಡಿ, ನೇಕಾರರು ಕ್ರೆಡಿಟ್ ಕಾರ್ಡ್ ಯೋಜನೆಯಡಿ ಬ್ಯಾಂಕ ಸಾಲ ಪಡೆದು ಅಭಿವೃದ್ಧಿ ಪಥದಲ್ಲಿ ಸಾಗುವ ಅವಶ್ಯಕತೆ ಇದೆ. ವೃತ್ತಿ ಆಧರಿಸಿ ಬದುಕುತ್ತಿರುವ ಅನೇಕ ಕುಟುಂಬಗಳು ಅರ್ಥಿಕ ಸಂಕಷ್ಟ ಎದುರಿಸುತ್ತಿವೆ. ಈ ಕುಟುಂಬಗಳ ಆರ್ಥಿಕ ಪ್ರಗತಿಗೆ ಪೋ›ತ್ಸಾಹದಾಯಕ ಯೋಜನೆಗಳನ್ನು ಸರ್ಕಾರಗಳು ಅನುಷ್ಠಾನಗೊಳಿಸಬೇಕಿದೆ. ನೇಕಾರರು ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಬೇಕಿದೆ ಎಂದು ಹೇಳಿದರು.

ಜಿಪಂ ಸದಸ್ಯೆ ರಾಧಾಮುನಿರಾಜು, ಕೆಪಿಸಿಸಿ ಸದಸ್ಯ ಚೀಮಾಚನಹಳ್ಳಿ ಸಿ.ಕೆ.ರಾಮಚಂದ್ರಪ್ಪ, ಪುರಸಭಾ ಸದಸ್ಯ ಜೆ.ಎನ್.ಶ್ರೀನಿವಾಸ್, ಮೆಹಬೂಬ್ಪಾಶಾ, ಜವಳಿ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಗಂಗಯ್ಯ, ಶಿವಣ್ಣ, ಚಂದ್ರಪ್ಪ, ಬಾಬು, ಸೀನಪ್ಪ ಮತ್ತಿತರರು ಉಪಸ್ಥಿತರಿದ್ದರು.

ಬೆಂಗಳೂರು ಗ್ರಾಮಾಂತರ ಜಿ.ಪಂ ಅನುದಾನದಲ್ಲಿ 170 ಮಂದಿ ನೇಕಾರರ ಮಕ್ಕಳಿಗೆ ಸಹಾಯಧನದ ಚೆಕ್ ಮತ್ತು ನೇಕಾರರಿಗೆ ಕೈಮಗ್ಗದ ಸಲಕರಣೆಗಳನ್ನು ವಿತರಿಸಲಾಯಿತು.

Leave a Reply

Your email address will not be published. Required fields are marked *

Back To Top