Sunday, 24th September 2017  

Vijayavani

1. 3ನೇ ಮ್ಯಾಚ್‌ನಲ್ಲೂ ಆಸೀಸ್‌ ಉಡೀಸ್‌- ರೋಹಿತ್,ರಹಾನೆ,ಪಾಂಡ್ಯ ಬೊಂಬಾಟ್‌ ಆಟ- ಭಾರತಕ್ಕೆ ಸರಣಿ ವಶ 2. ದೆಹಲಿಯಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ- ಜಾವ್ಡೇಕರ್ ನೇತೃತ್ವದಲ್ಲಿ ಮೀಟಿಂಗ್‌- ತಡವಾಗಿ ದೆಹಲಿ ವಿಮಾನ ಏರಿದ ಈಶ್ವರಪ್ಪ 3. ಸಿದ್ದಾರ್ಥ್​ ಮನೆ ಮೇಲೆ ಐಟಿ ದಾಳಿ ಪ್ರಕರಣ- 650 ಕೋಟಿ ಮೌಲ್ಯದ ಅಕ್ರಮ ಆದಾಯ ಪತ್ತೆ- ದಿಗ್ವಿಜಯ ನ್ಯೂಸ್​ಗೆ ಐಟಿ‌ ಮೂಲಗಳ ಮಾಹಿತಿ 4. ವಿಶ್ವಸಂಸ್ಥೆಯಲ್ಲಿ ಮತ್ತೆ ಬಾಲ ಬಿಚ್ಚಿದ ಪಾಕಿಸ್ತಾನ- ಮಡಿಲಲ್ಲಿ ಕೆಂಡ ಇಟ್ಕೊಂಡು ಭಾರತದತ್ತ ವಾಗ್ಬಾಣ- ಇಂಡಿಯಾ ಉಗ್ರವಾದದ ತಾಯಿ ಅಂತಾ ಪಾಕ್ ಉದ್ಧಟತನ 5. ಕೋಕ್ ಸ್ಟುಡಿಯೋದಿಂದ ಸಂಗೀತ ಸಂಜೆ- ಪೆಪೋನ್ ಗಾಯನಕ್ಕೆ ಮನಸೋತ ಯುವಜನ- ಹುಚ್ಚಿದ್ದು ಕುಣಿಸಿದ ಯುವದಸರಾ
Breaking News :

ಹಾಜರಿಗೆ ಯೆಸ್ ಸಾರ್ ಬೇಡ, ಜೈ ಹಿಂದ್ ಎನ್ನಿ!

Thursday, 14.09.2017, 3:00 AM       No Comments

 

ನವದೆಹಲಿ: ಶಾಲೆಯಲ್ಲಿ ಹಾಜರಾತಿ ಸಂದರ್ಭ ಹೆಸರು ಕೂಗಿದಾಗ ‘ಯಸ್ ಸಾರ್/ಮೇಡಂ‘ ಬದಲು ‘ಜೈಹಿಂದ್‘ ಎನ್ನಬೇಕು! ಇನ್ಮುಂದೆ ಮಧ್ಯಪ್ರದೇಶದ ಸತ್ನಾ ನಗರದ ಎಲ್ಲ ಶಾಲೆಗಳಲ್ಲಿ ಜೈಹಿಂದ್ ಘೋಷ ಕೇಳಿ ಬರಲಿದೆ. ಮಧ್ಯಪ್ರದೇಶದ ಶಿಕ್ಷಣ ಸಚಿವ ವಿಜಯ್ ಷಾ ಈ ಆದೇಶ ಹೊರಡಿಸಿದ್ದಾರೆ. ‘ಸತ್ನಾದ ಖಾಸಗಿ ಶಾಲೆಗಳಲ್ಲಿ ಇದನ್ನು ಪ್ರಾಯೋಗಿಕವಾಗಿ ಆರಂಭಿಸಿದ್ದೇವೆ. ಒಂದು ವೇಳೆ ವಿದ್ಯಾರ್ಥಿಗಳು ಹಾಗೂ ಪೋಷಕರು ಇದನ್ನು ಮೆಚ್ಚಿಕೊಂಡು ಪ್ರಯೋಗ ಯಶಸ್ವಿಯಾದರೆ, ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅನುಮತಿ ಪಡೆದು ರಾಜ್ಯಾದ್ಯಂತ ಎಲ್ಲ ಶಾಲೆಗಳಲ್ಲಿ ಕಡ್ಡಾಯಗೊಳಿಸಲಿದ್ದೇವೆ‘ ಎಂದು ಷಾ ಪ್ರತಿಕ್ರಿಯಿಸಿದ್ದಾರೆ. ಕಳೆದ ಡಿಸೆಂಬರ್​ನಲ್ಲಿ ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿದಿನ ಕಡ್ಡಾಯವಾಗಿ ವಿದ್ಯಾರ್ಥಿಗಳಿಂದ ರಾಷ್ಟ್ರಗೀತೆ ಗಾಯನದ ಜತೆಗೆ ರಾಷ್ಟ್ರಧ್ವಜ ಹಾರಿಸಬೇಕು ಎಂದು ಸಚಿವ ಷಾ ಆದೇಶಿಸಿದ್ದರು. ತಪ್ಪಿದಲ್ಲಿ ಶಾಲೆಯ ಮಾನ್ಯತೆ ರದ್ದುಗೊಳಿಸುವುದಾಗಿ ಎಚ್ಚರಿಸಿದ್ದರು.

Leave a Reply

Your email address will not be published. Required fields are marked *

Back To Top