More

    ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ

    ಚಿಕ್ಕಬಳ್ಳಾಪುರ : ಸಹಕಾರಿ ಬ್ಯಾಂಕುಗಳ ಅವ್ಯವಹಾರ ಸಹಿಸುವುದಿಲ್ಲ. ಎಷ್ಟೇ ಪ್ರಭಾವ ಹೊಂದಿದ್ದರೂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ಎಚ್ಚರಿಕೆ ನೀಡಿದರು.

    ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಜಿಲ್ಲಾಡಳಿತ, ಸಹಕಾರ ಇಲಾಖೆ ಮಂಗಳವಾರ ಕೈಗೊಂಡಿದ್ದ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನದ ಚೆಕ್ ವಿತರಿಸಿ ಮಾತನಾಡಿದರು.ಪ್ರತಿಯೊಂದು ಸಹಕಾರಿ ಬ್ಯಾಂಕಿನ ಕೆಲಸಗಳ ಬಗ್ಗೆ ಕಾಲ ಕಾಲಕ್ಕೆ ನಿಖರ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಈ ಭಾಗದಲ್ಲಿ ಒಂದೇ ಪಹಣಿಗೆ ಬೇರೆ ಬೇರೆ ಹೆಸರಿನಲ್ಲಿ ಸಾಲ ನೀಡುತ್ತಿರುವುದೂ ಸೇರಿ ಹಲವು ದೂರುಗಳು ಬಂದಿವೆ ಎಂದರು.

    ಸಹಕಾರಿ ಬ್ಯಾಂಕುಗಳಲ್ಲಿ ಸಾಲ ಪಡೆದ ಸೀಶಕ್ತಿ ಸಂಘದ ಸದಸ್ಯರು, ರೈತರು, ಸಣ್ಣ ವ್ಯಾಪಾರಸ್ಥರು ಸ್ವಾಭಿಮಾನದಿಂದ ಸಕಾಲಕ್ಕೆ ಪಾವತಿಸುತ್ತಿದ್ದಾರೆ. ಆದರೆ, ಕೋಟ್ಯಂತರ ರೂ. ಹಣ ಬಾಕಿ ಉಳಿಸಿಕೊಂಡಿರುವ ಕಾರ್ಖಾನೆಗಳಿಗೆ ಹಲವು ಬಾರಿ ನೋಟಿಸ್ ನೀಡಿದರೂ ಕ್ಯಾರೆ ಎನ್ನುವುದಿಲ್ಲ. ಇದರಿಂದ ಕೈಗಾರಿಕೆಗಳ ಬದಲಿಗೆ ಸಾಲ ಮರುಪಾವತಿಸುವ ಸದಸ್ಯರಿಗೆ ಹೆಚ್ಚಿನ ನೆರವು ನೀಡಲಾಗುವುದು ಎಂದು ತಿಳಿಸಿದರು.

    ರಾಜ್ಯದಲ್ಲಿ ಅಂದಾಜು 40,250 ಆಶಾ ಕಾರ್ಯಕರ್ತೆಯರಿಗೆ ತಲಾ 3 ಸಾವಿರ ಪ್ರೋತ್ಸಾಹಧನ ನೀಡಲು 12.07 ಕೋಟಿ ರೂ.ಖರ್ಚಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ಸೀಶಕ್ತಿ ಸಂಘಕ್ಕೆ ಸಾಲ ನೀಡಲು 80 ಕೋಟಿ ರೂ. ನಿಗದಿಪಡಿಸಿದ್ದು ಇದೇ ಮಾದರಿಯಲ್ಲಿ ಆಶಾ ಕಾರ್ಯಕರ್ತೆಯರಿಗಾಗಿ ಸೂಕ್ತ ಅನುದಾನ ಮೀಸಲಿರಿಸಲಾಗುವುದು ಎಂದು ಭರವಸೆ ನೀಡಿದರು.ವೈದ್ಯಕೀಯ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ ಕೆ.ಸುಧಾಕರ್ ಮಾತನಾಡಿ, ಕರೊನಾ ಆತಂಕದ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರು ಹಗಲು ರಾತ್ರಿ ಎನ್ನದೇ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

    ಜಿಪಂ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ, ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಉಪವಿಭಾಗಾಧಿಕಾರಿ ಎ.ಎನ್.ರಘುನಂದನ್, ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಬ್ಯಾಂಕಿನ ನಿರ್ದೇಶಕ ರವಿಕುಮಾರ್ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts