More

    ರೇಷ್ಮೆ ಕೃಷಿ ಅಭಿವೃದ್ಧಿಗೆ ಸಹಕಾರ

    ಕೋಲಾರ : ಜಿಲ್ಲೆಯ ರೈತರ ಜೀವನಾಡಿಯಾಗಿರುವ ರೇಷ್ಮೆ ಬೆಳೆಗಾರರ ಅಭಿವೃದ್ಧಿಗೆ ಸಹಕರಿಸಲಾಗುವುದು ಎಂದು ಜಿಲ್ಲಾಧಿಕಾರಿ ಅಕ್ರಂಪಾಷ ತಿಳಿಸಿದರು.
    ಜಿಲ್ಲಾಧಿಕಾರಿ ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ರೇಷ್ಮೆ ಇಲಾಖೆ ಹಾಗೂ ಜಿಲ್ಲಾ ರೇಷ್ಮೆ ಬೆಳೆಗಾರರು, ನೂಲು ಬಿಚ್ಚಣಿಕೆದಾರರ ಸಹಕಾರ ಸಂಘದವರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಗುಣಮಟ್ಟದ ರೇಷ್ಮೆಗೆ ಬೇಡಿಕೆ ಇದ್ದು, ಈ ನಿಟ್ಟಿನಲ್ಲಿ ರೇಷ್ಮೆ ಬೆಳೆಗಾರರು, ನೂಲು ಬಿಚ್ಚಣಿಕೆದಾರರು ಆದಾಯವನ್ನು ಹೆಚ್ಚಿಸಿಕೊಳ್ಳಬೇಕು ಎಂದು ಹೇಳಿದರು.
    ರೇಷ್ಮೆ ಇಲಾಖೆಯಲ್ಲಿ ಸಿಬ್ಬಂದಿ ಕೊರತೆಯಿದ್ದು, ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳ ಜತೆ ಮಾತನಾಡಿ ಸೂಕ್ತಕ್ರಮ ತೆಗೆದುಕೊಳ್ಳಲಾಗುವುದು. ಜಿಲ್ಲೆಯಲ್ಲಿ ಹಿಪ್ಪು ನೇರಳೆ ಸೊಪ್ಪಿಗೆ ಆವರಿಸುತ್ತಿರುವ ನುಸಿ ರೋಗ ತಡೆಗಟ್ಟಲು ಸಂಬಂಧಪಟ್ಟ ಅಧಿಕಾರಿಗಳ ಜತೆ ಚರ್ಚಿಸಿ ಸೂಕ್ತಕ್ರಮ ಕೈಗೊಳ್ಳಬೇಕಿದೆ ಎಂದರಲ್ಲದೆ, ಆಧುನೀಕತೆಯ ಯಂತ್ರಗಳನ್ನು ಬಳಕೆ ಮಾಡಿಕೊಳ್ಳಬೇಕು ಎಂದು ನೂಲು ಬಿಚ್ಚಣಿಕೆದಾರರಿಗೆ ತಿಳಿಸಿದರು.
    ರೇಷ್ಮೆ ಗೂಡಿಗೆ ಬೆಂಬಲ ಬೆಲೆ ನೀಡುವಂತೆ ರೇಷ್ಮೆ ಬೆಳೆಗಾರರು ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿದರು. ರೇಷ್ಮೆ ನೂಲು ಬಿಚ್ಚಣಿಕೆದಾರರು ನಮ್ಮ ಜಿಲ್ಲೆಯಲ್ಲಿ ಸಿಲ್ಕ್ ಟೆಕ್‌ಪಾರ್ಕ್ ಅನ್ನು ನಿರ್ಮಿಸುವಂತೆ ಮನವಿ ನೀಡಿದರು. ರೇಷ್ಮೆ ಬೆಳೆಗಾರರು, ನೂಲು ಬಿಚ್ಚಣಿಕೆದಾರರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿಕೊಂಡರು.
    ರೇಷ್ಮೆ ಇಲಾಖೆಯ ಉಪನಿರ್ದೇಶಕರಾದ ಶ್ರೀನಿವಾಸ್, ರೇಷ್ಮೆ ಬೆಳೆಗಾರರ ಸಂಘ, ನೂಲು ಬಿಚ್ಚಣಿಕೆದಾರರ ಅಧ್ಯಕ್ಷರು ಮತ್ತು ಸದಸ್ಯರು, ಮತ್ತಿತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts