More

    ರೈತರ ಸಂಪೂರ್ಣ ಸಾಲ ಮನ್ನಾ ಮಾಡಿ

    ಕಲಬುರಗಿ: ರೈತರ ಕೃಷಿ ಸಾಲ ಸಂಪೂರ್ಣ ಮನ್ನಾ ಮಾಡಲು ಒತ್ತಾಯಿಸಲು ಬೆಂಗಳೂರಿನಲ್ಲಿ ಡಿ.೨೩ ರಂದು ದಕ್ಷಿಣ ಭಾರತ ರಾಜ್ಯಗಳ ಬೃಹತ್ ಕಿಸಾನ್ ಮಹಾ ಪಂಚಾಯತ್ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘಟನೆಗಳ ಒಕ್ಕೂಟದ, ಕಬ್ಬು ಬೆಳೆಗಾರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ ತಿಳಿಸಿದರು.

    ರಾಜ್ಯದಲ್ಲಿ ೨೨೩ ತಾಲೂಕು ಬರ ಘೋಷಿಸಿದ್ದು, ಪರಿಹಾರ ನೀಡುತ್ತಿಲ್ಲ. ಸಮೀಕ್ಷೆ, ಅಂದಾಜು ಪಟ್ಟಿ ಸಿದ್ಧತೆ ವಿಳಂಬವಾಗುತ್ತಿದೆ. ರಾಜ್ಯ, ಕೇಂದ್ರ ಸರ್ಕಾರದ ರಾಜಕೀಯ ಚೆಲ್ಲಾಟಕ್ಕೆ ರೈತ ಬಲಿಯಾಗುತ್ತಿದ್ದು, ಕೂಡಲೇ ಪರಿಹಾರ ಒದಗಿಸಬೇಕು. ಟನ್ ಕಬ್ಬಿನ ಉತ್ಪಾದನಾ ವೆಚ್ಚ ೩೫೮೦ ರೂ. ಆಗಿದೆ. ಆದರೆ ಕೇಂದ್ರ ಸರ್ಕಾರ ೩೧೫೦ ರೂ. ನಿಗದಿ ಮಾಡಿದ್ದು, ನ್ಯಾಯಯುತವಾಗಿಲ್ಲ. ಕನಿಷ್ಠ ಟನ್ ಕಬ್ಬಿಗೆ ೪,೦೦೦ ರೂ. ನಿಗದಿ ಮಾಡಬೇಕು, ಕಳೆದ ವರ್ಷದ ಹೆಚ್ಚುವರಿ ೧೫೦ ರು. ಬಾಕಿ ಹಣ ನೀಡಬೇಕು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

    ಬರ ಪೀಡಿತ ರೈತರಿಗೆ ಎಕರೆಗೆ ೨೫ ಸಾವಿರ ರೂ. ನೀಡಬೇಕು, ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿ, ಕಾನೂನು ಜಾರಿ ಮಾಡಬೇಕು, ಸ್ವಾಮಿನಾಥನ್ ಆಯೋಗದಂತೆ ಕನಿಷ್ಠ ಬೆಂಬಲ ಬೆಲೆ ನಿಗದಿಯಾಗಬೇಕು, ಎಲ್ಲ ಕೃಷಿ ಉತ್ಪನ್ನಗಳಿಗೆ ಕಡ್ಡಾಯವಾಗಿ ಬೆಳೆ ವಿಮೆ ಜಾರಿಗೊಳಿಸಬೇಕು, ಅತಿವೃಷ್ಟಿ, ಬರ ಪರಿಹಾರ ಬೆಳೆ ವಿಮೆ ವ್ಯಾಪ್ತಿಯಲ್ಲಿ ನಷ್ಟ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

    ಸಾಲ ಮನ್ನಾ ಮಾಡಬೇಕು, ೬೦ ವರ್ಷ ಪೂರೈಸಿದ ರೈತರಿಗೆ ತಿಂಗಳಿಗೆ ಕನಿಷ್ಠ ೫೦೦೦ ಪಿಂಚಣಿ ನೀಡಬೇಕು, ವಿದ್ಯುತ್ ಖಾಸಗೀಕರಣ ಕೈಬಿಡಬೇಕು, ರಾಜ್ಯ ಸರ್ಕಾರದ ನೂತನ ನಿಯಮ ಎರಡು ಲಕ್ಷ ರೂ. ನೀಡುವುದು ಕೈ ಬಿಡಬೇಕು ಎಂಬುದು ಸೇರಿ ವಿವಿಧ ಬೇಡಿಕೆಗಳ ಕುರಿತು ಸಮಾವೇಶದಲ್ಲಿ ಹಕ್ಕೊತ್ತಾಯ ಮಾಡಲಾಗುವುದು ಎಂದು ಹೇಳಿದರು.

    ಜಿಲ್ಲಾಧ್ಯಕ್ಷ ರಮೇಶ ಹೂಗಾರ, ರಾಜ್ಯ ಉಪಾಧ್ಯಕ್ಷ ಬಸವರಾಜ್ ಪಾಟೀಲ್, ಸಂಘಟನಾ ಕಾರ್ಯದರ್ಶಿ ಹತ್ತಹಳ್ಳಿ ದೇವರಾಜ, ಧರ್ಮರಾಜï ಸಾವು, ಶರಣು ಬಿಲ್ಲದ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts