Wednesday, 18th July 2018  

Vijayavani

ಸಾಲದ ಸುಳಿಯಲ್ಲಿದ್ರೂ ಐ ಫೋನ್​ ಗಿಫ್ಟ್​ - ಹತ್ತಾರು ಸಮಸ್ಯೆ ಮಧ್ಯೆ ಬೇಕಿತ್ತಾ ದುಬಾರಿ ಉಡುಗೊರೆ​ - ಇಟ್ಕೊಂಡೋರಾರು..? ವಾಪಸ್ ಕೊಟ್ಟವರಾರು.?        ದೆಹಲಿಯಲ್ಲಿದ್ರೂ ರೇವಣ್ಣಗೆ ತವರಿನ ಜಪ - ಹಾಸನದ ಅಭಿವೃದ್ಧಿ ಬಗ್ಗೆ ಕೇಂದ್ರ ಸಚಿವರ ಜತೆ ಚರ್ಚೆ - ಸಿಎಂ ಎಚ್​ಡಿಕೆಯನ್ನೇ ಓವರ್​​ಟೇಕ್​ ಮಾಡಿದ PWD ಮಿನಿಸ್ಟರ್​​​        ಜಾರಕಿಹೊಳಿ ಬ್ರದರ್ಸ್​​​​ ನಡುವೆ ಸಮರ - ದೆಹಲಿಗೆ ಶಾಸಕರನ್ನ ಕರೆದೊಯ್ದ ರಮೇಶ್​​​​​​​ ಜಾರಕಿಹೊಳಿ - ಸತೀಶ್​​ಗೆ ಮಂತ್ರಿಗಿರಿ ತಪ್ಪಿಸಲು ಶಕ್ತಿ ಪ್ರದರ್ಶನ        ಇಂದಿನಿಂದ ಸಂಸತ್ ಅಧಿವೇಶನ - ಮಹಿಳಾ ಮೀಸಲಾತಿ, ತ್ರಿಪಲ್ ತಲಾಖ್​​​​​ ಮಸೂದೆ ಅಂಗೀಕಾರ ಸಾಧ್ಯತೆ - ಸಂಜೆ ರಾಜ್ಯ ಸಂಸದರ ಜತೆ ಸಿಎಂ ಮೀಟಿಂಗ್​​        ವಸತಿ ಯೋಜನೆಯ ಹಣವನ್ನೇ ನುಂಗಿದ್ರು - 140 ಅನರ್ಹರಿಂದ 8 ಕೋಟಿ ಗುಳುಂ ಸ್ವಾಹ - ಗದಗ ನಗರಸಭೆಯಲ್ಲಿ ಬಯಲಾಯ್ತು ಗೋಲ್​ಮಾಲ್​​​​        ದೀಪಾಲಂಕಾರದಿಂದ ಕಂಗೊಳಿಸಿದ ಕೆಆರ್​ಎಸ್​ - ಗಗನ ಚುಕ್ಕಿ ಜಲಪಾತ ನಯನ ಮನೋಹರ - ಡ್ರೋಣ್​​ ಕಣ್ಣಲ್ಲಿ ಸೆರೆಯಾಯ್ತು ಜಲಧಾರೆಯ ದೃಶ್ಯ ವೈಭವ       
Breaking News

ಮಕ್ಕಳ ಬಗ್ಗೆ ಲಕ್ಷ್ಯವೇ ಇರೋಲ್ಲ: ಕಾರಡಿಗೆ ಸಿಲುಕಿ ಮಗು ಸಾವು!

Wednesday, 16.08.2017, 4:28 PM       No Comments

ನವದೆಹಲಿ: ಮಕ್ಕಳ ಬಗೆಗಿನ ನಿರ್ಲಕ್ಷ್ಯಕ್ಕೆ ಸ್ಪಷ್ಟ ಉದಾಹರಣೆ ಎಂಬಂತೆ ಒಂದು ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳಲು ಒಂದೇ ದಿನ ಬಾಕಿ ಇರುವಾಗಲೇ ವಿಧಿ ಬೇರೆಯೇ ಬರೆದಿತ್ತು ಆ ಕಂದನಿಗೆ. ಆಡಿಕೊಳ್ಳುತ್ತ ಹೊರಗಡೆ ಬಂದಿದ್ದ ಮಗು ನೆರೆ ಮನೆಯ ಕಾರಿನ ಕೆಳಗೆ ಸಿಲುಕಿ ಸಾವನ್ನಪ್ಪಿದೆ.

ಹೌದು, ದೆಹಲಿಯ ರನ್ಹೋಲಾ ಏರಿಯಾದಲ್ಲಿ ಚಾಲಕನ ನಿರ್ಲಕ್ಷ್ಯಕ್ಕೆ ಕಾರಿನಡಿ ಸಿಲುಕಿ 11 ತಿಂಗಳ ಹಸುಗೂಸು ಲಕ್ಷ್ಯಾ ಎಂಬ ಮಗು ಮೃತಪಟ್ಟಿದೆ.

ನಿನ್ನೆ ಮಂಗಳವಾರ ಸಂಜೆ ಆಟವಾಡುತ್ತ ಮನೆಯಿಂದ ಹೊರಗೆ ಬಂದ ಮಗು ಕಾರಿನ ಕೆಳಗಡೆ ನುಗ್ಗಿದೆ. ಇದೇ ವೇಳೆ ಕಾರನ್ನು ಹಿಂದಕ್ಕೆ ತೆಗೆದುಕೊಳ್ಳುವಾಗ ಮಗು ಕಾರಿನಡಿ ಸಿಲುಕಿರುವುದನ್ನು ಗಮನಿಸಿದ ತಾಯಿ ಕಾರನ್ನು ನಿಲ್ಲಿಸುವಂತೆ ಸೂಚಿಸಿದರೂ ಚಾಲಕನಿಗೆ ಕೇಳಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಕೂಡಲೇ ಮಗುವನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಷ್ಟೊತ್ತಿಗಾಗಲೇ ಮಗು ಮೃತಪಟ್ಟಿರುವುದನ್ನು ವೈದ್ಯರೂ ದೃಢೀಕರಿಸಿದ್ದಾರೆ. ಪ್ರಕರಣ ಸಂಬಂಧ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. (ಏಜೆನ್ಸೀಸ್‌)

Leave a Reply

Your email address will not be published. Required fields are marked *

Back To Top