Sunday, 23rd September 2018  

Vijayavani

ಜಿಮ್​ ತರಬೇತುದಾರನ ಅಪಹರಣ ಮತ್ತು ಹಲ್ಲೆ ಪ್ರಕರಣದಲ್ಲಿ ನಟ ದುನಿಯಾ ವಿಜಯ್​ ಬಂಧನ.        ವಿಧಾನ ಪರಿಷತ್​​ 3 ಸ್ಥಾನಗಳಿಗೆ ಚುನಾವಣೆ: ನಾಮಪತ್ರ ಸಲ್ಲಿಕೆಗೆ ನಾಳೆ ಕೊನೆ ದಿನ, ಬಿಜೆಪಿ ಪಟ್ಟಿ ಇಂದು ಅಂತಿಮ        ಮೋದಿ ಕಳ್ಳ ಎಂದಿದ್ದ ರಾಹುಲ್​ ವಿರುದ್ಧ ನಿರ್ಮಲಾ ಗುಡುಗು: ರಾಹುಲ್​ ಅವರದ್ದು ಕಳ್ಳರ ಕುಟುಂಬ ಎಂದ ಸಚಿವೆ        ಹಾಸನದಲ್ಲಿ ಇಂದು ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಮುಖ್ಯಮಂತ್ರಿ ಎಚ್​ಡಿಕೆ       
Breaking News

ಕಾಬೂಲ್​ನಲ್ಲಿ ಆತ್ಮಾಹುತಿ ಬಾಂಬ್ ದಾಳಿ: 12 ಜನರ ಸಾವು

Monday, 11.06.2018, 4:35 PM       No Comments

ಕಾಬುಲ್‌: ಆತ್ಮಾಹುತಿ ಬಾಂಬ್‌ ದಾಳಿಯಿಂದಾಗಿ ಕಾಬುಲ್‌ನಲ್ಲಿ 12 ಜನ ಮೃತಪಟ್ಟು 30ಕ್ಕೂ ಅಧಿಕ ಜನ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ.

ಅಫ್ಘಾನಿಸ್ತಾನದ ಗ್ರಾಮೀಣ ಪುನರ್ವಸತಿ ಮತ್ತು ಅಭಿವೃದ್ಧಿ ಇಲಾಖೆಯ ಪ್ರವೇಶದ್ವಾರದಲ್ಲಿ ಆತ್ಮಾಹುತಿ ಬಾಂಬರ್ ಸ್ಫೋಟಿಸಿಕೊಂಡು ಅಪಾರ ಸಾವು ನೋವಿಗೆ ಕಾರಣವಾಗಿದೆ ಎಂದು ಸರ್ಕಾರಿ ವಕ್ತಾರರು ತಿಳಿಸಿದ್ದಾರೆ.

ಸದ್ಯಕ್ಕೆ ಯಾವುದೇ ಸಂಘಟನೆ ದಾಳಿಯ ಹೊಣೆ ಹೊತ್ತುಕೊಂಡಿಲ್ಲ.

ಮಹಿಳೆಯರು, ಮಕ್ಕಳು ಮತ್ತು ಸಚಿವಾಲಯದ ಉದ್ಯೋಗಿಗಳು ದಾಳಿಯಲ್ಲಿ ಬಲಿಯಾಗಿದ್ದಾರೆ ಎಂದು ಆಂತರಿಕ ಸಚಿವಾಲಯದ ವಕ್ತಾರ ನಜೀಬ್‌ ಡೇನಿಷ್‌ ತಿಳಿಸಿದ್ದಾರೆ.

ಶನಿವಾರವಷ್ಟೇ ರಂಜಾನ್‌ ಹಿನ್ನೆಲೆಯಲ್ಲಿ ಆಫ್ಘನ್‌ ತಾಲಿಬಾನ್‌ ಉಗ್ರರು ವಾರಾಂತ್ಯದಲ್ಲಿ ಮೂರು ದಿನಗಳ ಕದನ ವಿರಾಮ ಘೋಷಿಸಿದ ಬೆನ್ನಲ್ಲೇ ಸರ್ಕಾರವೂ ಕೂಡ ಉಗ್ರರ ವಿರುದ್ಧ ಬೇಷರತ್‌ ಕದನ ವಿರಾಮ ಘೋಷಿಸಿತ್ತು. ಇದಾದ ಬಳಿಕ ದಾಳಿ ನಡೆದಿರುವುದು ಆತಂಕ ಸೃಷ್ಟಿಸಿದೆ. (ಏಜೆನ್ಸೀಸ್)

Leave a Reply

Your email address will not be published. Required fields are marked *

Back To Top