Friday, 22nd September 2017  

Vijayavani

1. ಸಮಾವೇಶಕ್ಕೆ ಲಕ್ಷ ಮಂದಿ ಸೇರಿಸೋ ಟಾರ್ಗೆಟ್​- ಬರದಿದ್ರೆ ಅಕ್ಕಿ ಕಟ್​​, ಬ್ಯಾಂಕ್​ ಸಬ್ಸಿಡಿಗೆ ಬ್ರೇಕ್​- ಫಲಾನುಭವಿಗಳಿಗೆ ಕೈ ಕಾರ್ಯಕರ್ತರ ಬೆದರಿಕೆ 2. ಕೊಟ್ಟ ಮಾತು ಮರೆತ ಸಿಎಂ ಸಿದ್ದರಾಮಯ್ಯ- 8 ತಿಂಗಳಾದ್ರೂ ಕುಟುಂಬಸ್ಥರಿಗೆ ಸಿಗದ ಪರಿಹಾರ- ಇದೇನಾ ನುಡಿದಂತೆ ನಡೆಯುವ ಸರ್ಕಾರ..? 3. ಎಸ್​​.ಎಂ.ಕೃಷ್ಣ ಅಳಿಯನ ಮನೆ ಕಚೇರಿ ತಲಾಷ್​​- ಎರಡನೇ ದಿನವೂ ಮುಂದುವರಿದ ಪರಿಶೀಲನೆ- ಹುಡುಕಿದಷ್ಟು ಪತ್ತೆಯಾಗ್ತಿದೆ ದಾಖಲೆ ಪತ್ರ 4. ಗದಗದಲ್ಲಿ ಹನಿ ನೀರಿಗಾಗಿ ಹೋರಾಟ- 6 ಸಾವಿರ ಜನಕ್ಕೆ ಟ್ಯಾಂಕರ್​ ನೀರೇ ಆಧಾರ- ಜನರ ಸಮಸ್ಯೆಗೆ ಸ್ಪಂದಿಸಬೇಕಿದೆ ಸರ್ಕಾರ 5. ಮೈಸೂರು ದಸರಾಗೆ ಜನವೋ ಜನ- ಅತ್ತೆ, ಸೊಸೆ ಜೊತೆ ಜೊತೆ ಮಾಡಿದ್ರು ನಳಪಾಕ- ಕೆಲವೇ ಕ್ಷಣಗಳಲ್ಲಿ ಯುವ ದಸರಾಗೆ ಚಾಲನೆ
Breaking News :

ಸ್ವಾತಂತ್ರ್ಯದ ದಿನ ಶಾಲಾ ಬಾಲಕಿಯನ್ನೂ ಬಿಡಲಿಲ್ಲ ಕಾಮಾಂಧರು

Tuesday, 15.08.2017, 4:52 PM       No Comments

ಚಂಡೀಗಢ: ಸ್ವಾತಂತ್ರ್ಯದ ದಿನ ಇಂತಹ ಅಪವ್ಯಸನಗಳ ಬಗ್ಗೆ ಹೇಳಲು/ ಬರೆಯಲು ಅಸಹ್ಯವಾಗುತ್ತದೆ. ಆದರೂ … ಏನಾಯಿತೆಂದರೆ 40 ವರ್ಷದ ಕಾಮುಕನೊಬ್ಬ 12 ವರ್ಷದ ಅಪ್ರಾಪ್ತೆ ಶಾಲಾ ಬಾಲಕಿಯ ಮೇಲೆ ಸ್ವಾತಂತ್ರ್ಯೋತ್ಸವ ದಿನದಂದೆ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಚಂಡೀಗಢದಲ್ಲಿ ನಡೆದಿದೆ.

71ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಇಂದು ಎಲ್ಲೆಡೆ ಸಂಭ್ರಮಾಚರಣೆ ನಡೆಯುತ್ತಿರುವ ಸಮಯದಲ್ಲೇ ಈ ದುಷ್ಕೃತ್ಯ ನಡೆದಿದೆ. 8 ನೇ ತರಗತಿ ಓದುತ್ತಿದ್ದ ಅಪ್ರಾಪ್ತ ಶಾಲಾ ಬಾಲಕಿ ತನ್ನ ಶಾಲೆಯಲ್ಲಿ ನಡೆದ ಸ್ವಾತಂತ್ರ್ಯ ಸಂಭ್ರಮಾಚರಣೆಯನ್ನು ಮುಗಿಸಿ ವಾಪಸ್ಸು ಮನೆಗೆ ಬರುವಾಗ ದಾರಿ ಮಧ್ಯದ ಪಾರ್ಕಿನ ಬಳಿ ಅಪರಿಚತನೊಬ್ಬ ಹೊಂಚು ಹಾಕಿ ಬಾಲಕಿಯನ್ನ ಎಳೆದೊಯ್ದು ಪಾರ್ಕಿನಲ್ಲಿಯೇ ಅತ್ಯಾಚಾರ ನಡೆಸಿ ಪರಾರಿಯಾಗಿದ್ದಾನೆ.

ಬಳಿಕ ಅಪ್ರಾಪ್ತೆ ಬಾಲಕಿ ಹತ್ತಿರದಲ್ಲೇ ಇದ್ದ ತನ್ನ ಮನೆಗೆ ಹೋಗಿ ವಿಷಯ ತಿಳಿಸಿದ್ದಾಳೆ. ಗಾಬರಿಗೊಂಡ ಮನೆಯವರು ತಕ್ಷಣ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ವಿಷಯ ತಿಳಿದ ಪೊಲೀಸರು ಅತ್ಯಾಚಾರ ನಡೆದ ಪಾರ್ಕಿನ ಬಳಿ ಹೋಗಿ ಪರಿಶೀಲನೆ ನಡೆಸಿ, ನಂತರ ಬಾಲಕಿಯನ್ನು ಮೆಡಿಕಲ್ ತಪಾಸಣೆಗೆ ಒಳಪಡಿಸಿದ್ದಾರೆ.

ಅತ್ಯಾಚಾರ ಎಸಗಿರುವುದು ಧೃಡಪಟ್ಟ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪಾರ್ಕಿನ ಸುತ್ತಮುತ್ತ ಇರುವ ಸಿಸಿಟಿವಿಗಳನ್ನು ಪರಿಶೀಲಿಸಿದ್ದು, ಆರೋಪಿಗಾಗಿ ಬಲೆ ಬೀಸಿದ್ದಾರೆ. (ಏಜೆನ್ಸೀಸ್​)

Leave a Reply

Your email address will not be published. Required fields are marked *

Back To Top