Sunday, 19th August 2018  

Vijayavani

ರಣಚಂಡಿ ಮಳೆಗೆ ಕುಸಿಯುತ್ತಿದೆ ಕೊಡಗು - ಮತ್ತೆ ಜೋರಾಯ್ತು ಮಳೆ ಅಬ್ಬರ - ಮುಕ್ಕೋಡ್ಲು ಗ್ರಾಮದಲ್ಲಿ 80 ಜನರ ರಕ್ಷಣೆ        ಕ್ಷಣ ಕ್ಷಣಕ್ಕೂ ಆತಂಕ, ಬಿರುಕು ಬಿಟ್ಟ ಧರೆ - ಪ್ರವಾಹದಲ್ಲಿ ಕೊಚ್ಚಿ ಹೋಗ್ತಿದೆ ಬೆಟ್ಟ,ಗುಡ್ಡ - ಕಣ್ಮುಂದೆಯೇ ನೆಲಸಮ ವಾಗ್ತಿದೆ ಬದುಕು        ಕೊಡಗಲ್ಲಿ ಇಂದು ಸಿಎಂ ಎಚ್​ಡಿಕೆ ಪ್ರವಾಸ - ಸಂತ್ರಸ್ಥರ ನೋವು ಆಲಿಸಲಿರುವ ಬಿಎಸ್​ವೈ - ನಿರಾಶ್ರಿತರಿಗೆ ನೆರವು ಅಂದ್ರು ರೇವಣ್ಣ        ಸಂತ್ರಸ್ಥರಿಗೆ ಸ್ಯಾಂಡಲ್​ವುಡ್​​​​​​​​​ ನೆರವಿನ ಹಸ್ತ - ಅಗತ್ಯವಸ್ತುಗಳ ಪೂರೈಸಿದ ಸ್ಟಾರ್ಸ್​​​​​​​​​​​ - ಕೈಲಾದ ಸಹಾಯ ಮಾಡ್ತಿದ್ದಾರೆ ಕರುನಾಡ ಜನರು        ಕೇರಳದಲ್ಲಿ ಕಡಿಮೆಯಾಗ್ತಿಲ್ಲ ನೆರೆ ಅಬ್ಬರ - ಸಾವಿನ ಸಂಖ್ಯೆ 357ಕ್ಕೇ ಏರಿಕೆ - ದೇವರನಾಡಿಗೆ ಹರಿದು ಬರ್ತಿದೆ ನೆರವಿನ ಮಹಾಪೂರ        ಭಾರತ - ಇಂಗ್ಲೆಂಡ್​ ನಡುವಿನ 3ನೇ ಟೆಸ್ಟ್​​​​ ಪಂದ್ಯ - ಬೃಹತ್ ಮೊತ್ತದತ್ತ ಟೀಂ ಇಂಡಿಯಾ - ಶತಕದ ಗಡಿಯಲ್ಲಿ ಎಡವಿದ ಕೊಹ್ಲಿ       
Breaking News

ಅಣ್ಣನ ಮೂವರು ಸ್ನೇಹಿತರಿಂದಲೇ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ

Tuesday, 03.07.2018, 7:35 PM       No Comments

ಜಬಲ್​ಪುರ (ಮಧ್ಯಪ್ರದೇಶ): ಹದಿನೈದು ವರ್ಷದ ಬಾಲಕಿಯೊಬ್ಬಳು ಹಿರಿಯ ಸಹೋದರನ ಮೂವರು ಸ್ನೇಹಿತರಿಂದ ಅತ್ಯಾಚಾರಕ್ಕೆ ಒಳಗಾಗಿರುವ ಘಟನೆ ಜಬಲ್​ಪುರ ಜಿಲ್ಲೆಯ ಬಡಾ ಪತ್ತಾರ್​ ಪ್ರದೇಶದಲ್ಲಿರುವ ಬಾಲಕಿಯ ಮನೆಯಲ್ಲಿ ನಡೆದಿದೆ. ಆರೋಪಿಗಳಲ್ಲಿ ಇಬ್ಬರು ಅಪ್ರಾಪ್ತರಾಗಿದ್ದಾರೆ.

ಜೂನ್​ 28ರ ಮಧ್ಯಾಹ್ನ ಬಾಲಕಿ ಒಬ್ಬಳೇ ಮನೆಯಲ್ಲಿರುವಾಗ ಮೂವರು ಆರೋಪಿಗಳು ಅವಳನ್ನು ಭೇಟಿಯಾಗಿದ್ದರು. ಅಂದು ಬಾಲಕಿಯೂ ಅಣ್ಣನ ಸ್ನೇಹಿತರ ಮೇಲೆ ಸಂದೇಹ ಪಡದೆ ಅವರನ್ನು ಮನೆಯೊಳಗೆ ಬರ ಮಾಡಿಕೊಂಡಿದ್ದಳು ಎಂದು ಪೊಲೀಸ್​ ವರಿಷ್ಠಾಧಿಕಾರಿ ಅಕಿಲ್​ ವರ್ಮಾ ಅವರು ತಿಳಿಸಿದ್ದಾರೆ.

ಮನೆಯೊಳಗೆ ಪ್ರವೇಶಿಸುತ್ತಿದ್ದಂತೆ ಬಾಗಿಲನ್ನು ಲಾಕ್​ ಮಾಡಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಅಲ್ಲದೆ, ಈ ಬಗ್ಗೆ ಕುಟುಂಬದವರ ಬಳಿ ಹೇಳಿದರೆ ಕೊಲ್ಲುವುದಾಗಿ ಬೆದರಿಕೆಯನ್ನು ಹಾಕಿದ್ದರು.

ಎರಡು ದಿನ ಸುಮ್ಮನಿದ್ದ ಬಾಲಕಿ ಕೊನೆಗೆ ಸೋಮವಾರ ಈ ಘಟನೆ ಬಗ್ಗೆ ಕುಟುಂಬದವರ ಬಳಿ ಹೇಳಿಕೊಂಡಿದ್ದಾಳೆ. ಆನಂತರ ಕುಟುಂಬದವರು ದೂರು ದಾಖಲಿಸಿದ್ದಾರೆ.

18 ವರ್ಷದ ಆರೋಪಿಯನ್ನುಪೊಲೀಸರು ಸೋಮವಾರ ಸಂಜೆ ಬಂಧಿಸಿದ್ದು, ಉಳಿದ ಇಬ್ಬರು ಅಪ್ರಾಪ್ತ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಪೊಕ್ಸೊ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ. (ಏಜೆನ್ಸೀಸ್​)

Leave a Reply

Your email address will not be published. Required fields are marked *

Back To Top