Friday, 21st September 2018  

Vijayavani

ಸಿಎಂ ‘ದಂಗೆ’ ಹೇಳಿಕೆ ವಿರುದ್ಧ ಕೇಸರಿ ಗುಟುರು - ಡಿಜಿಪಿ ನೀಲಮಣಿ ರಾಜುಗೆ ಬಿಜೆಪಿ ದೂರು - ಸಂಜೆ 4.30ಕ್ಕೆ ಗವರ್ನರ್ ಭೇಟಿ​​​​        ರಾಜ್ಯಾದ್ಯಂತ ಭುಗಿಲೆದ್ದ ‘ದಂಗೆ’ ಉರಿ - ಕಲಬುರಗಿ, ಮಂಡ್ಯ, ಧಾರವಾಡ, ಕೊಡಗಿನಲ್ಲಿ ದಳ್ಳುರಿ        ಬ್ರದರ್ಸ್​​ ತಂಟೆಗೆ ಹೋಗ್ಬೇಡಿ, ವಿವಾದಾತ್ಮಕ ಹೇಳಿಕೆ ಕೊಡ್ಬೇಡಿ - ಸಾಫ್ಟ್​ ಪಾಲಿಟಿಕ್ಸ್ ಬಗ್ಗೆ ಡಿಕೆಶಿಗೆ ಸಿದ್ದು ಕ್ಲಾಸ್        ಕರ್ನಾಟಕದಲ್ಲಿ ನಮಗೆ ಅಧಿಕಾರ ಬೇಕು - ಇಲ್ದಿದ್ರೆ ಲೋಕಸಭೆ ಚುನಾವಣೆಯಲ್ಲಿ ಕಷ್ಟ ಕಷ್ಟ - ಪರಿಸ್ಥಿತಿ ನಿಭಾಯಿಸಲು ಸಿದ್ದುಗೆ ಸೂಚನೆ        ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ - ಅಪಹರಿಸಿದ್ದ ಮೂವರು ಪೊಲೀಸರ ಹತ್ಯೆಗೈದ ಕಿರಾತಕರು        ಓಡಿಶಾದಲ್ಲಿ ಡೆಯ್ ಚಂಡಮಾರುತದ ಅಬ್ಬರ - ಕಾಲಾಪುರಕ್ಕೆ ನುಗ್ಗಿದ ಡ್ಯಾಮ್ ನೀರು ನುಗ್ಗಿ ಪ್ರವಾಹ - ಬಿರುಗಾಳಿಗೆ ಜನರು ಕಂಗಾಲ್       
Breaking News

16ರಿಂದ ವಿಷ್ಣುವರ್ಧನ ರಾಷ್ಟ್ರೀಯ ಉತ್ಸವ

Thursday, 13.09.2018, 2:03 AM       No Comments

ಬೆಂಗಳೂರು: ಡಾ.ವಿಷ್ಣು ಸೇನಾ ಸಮಿತಿ ನಗರದ ಕುವೆಂಪು ಕಲಾ ಕ್ಷೇತ್ರದಲ್ಲಿ ಸೆ.16 ರಿಂದ 3 ದಿನಗಳ ‘ಡಾ.ವಿಷ್ಣುವರ್ಧನ ರಾಷ್ಟ್ರೀಯ ಉತ್ಸವ-2018’ ಹಮ್ಮಿಕೊಂಡಿದೆ.

ಈ ಹಿಂದೆ ನವದೆಹಲಿಯಲ್ಲಿ ಮೊದಲ ಬಾರಿಗೆ ಆಯೋಜಿಸಲಾಗಿದ್ದ ವಿಷ್ಣುವರ್ಧನ್ ರಾಷ್ಟ್ರಿಯ ಉತ್ಸವಕ್ಕೆ ಉತ್ತಮ ಪ್ರಶಂಸೆ ವ್ಯಕ್ತವಾಗಿದ್ದು, ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಒಂದು ಮೈಲಿಗಲ್ಲು ಸೃಷ್ಟಿಸಿತ್ತು. ನಾಡು-ನುಡಿ, ನೆಲ, ಜಲಕ್ಕೆ ಅಪಾರ ಕೊಡುಗೆ ನೀಡಿದ ಕನ್ನಡದ ಮೇರುನಟ ವಿಷ್ಣುವರ್ಧನ್ ಹೆಸರು ಶಾಶ್ವತವಾಗಿ ಉಳಿಸಿ ಬೆಳೆಸುವ ಉದ್ದೇಶದಿಂದ ಡಾ.ವಿಷ್ಣು ಸೇನಾ ಸಮಿತಿ ಈ ಕಾರ್ಯಕ್ರಮ ಆಯೋಜಿಸಿದ್ದು ಕನ್ನಡ ಸಮ್ಮೆಳನದ ಮಾದರಿಯಲ್ಲೇ ನಡೆಯಲಿದೆ ಎಂದು ಸಂಘ ರಾಜ್ಯಾಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

3 ದಿನ ನಡೆಯುವ ಉತ್ಸವದಲ್ಲಿ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳಿರಲಿದ್ದು, ಕನ್ನಡ ಚಿತ್ರರಂಗದ ದಿಗ್ಗಜರು, ಸಿನಿಮಾ ನಟ-ನಟಿಯರು, ಕನ್ನಡ ಚಳವಳಿ ಹೋರಾಟಗಾರರು, ಸಾಹಿತಿಗಳು ಸೇರಿ ಹಲವು ಗಣ್ಯರ ದಂಡು ಭಾಗವಹಿಸಲಿದೆ.

ಸೆ.16ರಂದು ಬೆಳಗ್ಗೆ 10.30ಕ್ಕೆ ನಟ ಸುದೀಪ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅಧ್ಯಕ್ಷತೆ ವಹಿಸಲಿದ್ದಾರೆ. ಅದೇ ದಿನ ಬಿಬಿಎಂಪಿ ಕೇಂದ್ರ ಕಚೇರಿಯಿಂದ ಕುವೆಂಪು ಕಲಾಕ್ಷೇತ್ರದವರೆಗೆ ಬೃಹತ್ ಮೆರವಣಿಗೆ ನಡೆಯಲಿದ್ದು, 10 ಸಾವಿರಕ್ಕೂ ಅಧಿಕ ವಿಷ್ಣು ಅಭಿಮಾನಿಗಳು ಕೈಜೋಡಿಸಲಿದ್ದಾರೆ ಎಂದರು.

ವಿನಯಾ ಪ್ರಕಾಶ್​ಗೆ ವಿಷ್ಣು ಪ್ರಶಸ್ತಿ

ಡಾ.ವಿಷ್ಣು ಸೇನಾ ಸಮಿತಿ ನೀಡುವ ಪ್ರತಿಷ್ಠಿತ ಡಾ.ವಿಷ್ಣುವರ್ಧನ ರಾಷ್ಟ್ರೀಯ ಪ್ರಶಸ್ತಿಗೆ ಈ ಸಲ ಖ್ಯಾತ ಅಭಿನೇತ್ರಿ ವಿನಯಾ ಪ್ರಕಾಶ್ ಭಾಜನರಾಗಿದ್ದಾರೆ. ಡಾ.ವಿಷ್ಣುವರ್ಧನ ರಾಷ್ಟ್ರೀಯ ಉತ್ಸವ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

Leave a Reply

Your email address will not be published. Required fields are marked *

Back To Top