Friday, 22nd September 2017  

Vijayavani

1. ಸಮಾವೇಶಕ್ಕೆ ಲಕ್ಷ ಮಂದಿ ಸೇರಿಸೋ ಟಾರ್ಗೆಟ್​- ಬರದಿದ್ರೆ ಅಕ್ಕಿ ಕಟ್​​, ಬ್ಯಾಂಕ್​ ಸಬ್ಸಿಡಿಗೆ ಬ್ರೇಕ್​- ಫಲಾನುಭವಿಗಳಿಗೆ ಕೈ ಕಾರ್ಯಕರ್ತರ ಬೆದರಿಕೆ 2. ಕೊಟ್ಟ ಮಾತು ಮರೆತ ಸಿಎಂ ಸಿದ್ದರಾಮಯ್ಯ- 8 ತಿಂಗಳಾದ್ರೂ ಕುಟುಂಬಸ್ಥರಿಗೆ ಸಿಗದ ಪರಿಹಾರ- ಇದೇನಾ ನುಡಿದಂತೆ ನಡೆಯುವ ಸರ್ಕಾರ..? 3. ಎಸ್​​.ಎಂ.ಕೃಷ್ಣ ಅಳಿಯನ ಮನೆ ಕಚೇರಿ ತಲಾಷ್​​- ಎರಡನೇ ದಿನವೂ ಮುಂದುವರಿದ ಪರಿಶೀಲನೆ- ಹುಡುಕಿದಷ್ಟು ಪತ್ತೆಯಾಗ್ತಿದೆ ದಾಖಲೆ ಪತ್ರ 4. ಗದಗದಲ್ಲಿ ಹನಿ ನೀರಿಗಾಗಿ ಹೋರಾಟ- 6 ಸಾವಿರ ಜನಕ್ಕೆ ಟ್ಯಾಂಕರ್​ ನೀರೇ ಆಧಾರ- ಜನರ ಸಮಸ್ಯೆಗೆ ಸ್ಪಂದಿಸಬೇಕಿದೆ ಸರ್ಕಾರ 5. ಮೈಸೂರು ದಸರಾಗೆ ಜನವೋ ಜನ- ಅತ್ತೆ, ಸೊಸೆ ಜೊತೆ ಜೊತೆ ಮಾಡಿದ್ರು ನಳಪಾಕ- ಕೆಲವೇ ಕ್ಷಣಗಳಲ್ಲಿ ಯುವ ದಸರಾಗೆ ಚಾಲನೆ
Breaking News :

ಬನ್ನೇರುಘಟ್ಟದಲ್ಲಿ ಜಿಂಕೆ ಚರ್ಮ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

Wednesday, 13.09.2017, 8:19 PM       No Comments

ಬೆಂಗಳೂರು: ದಿಗ್ವಿಜಯ ನ್ಯೂಸ್​ ನಡೆಸಿದ ರಹಸ್ಯ ಕಾರ್ಯಾಚರಣೆಯಲ್ಲಿ ನಗರದ ಬನ್ನೇರುಘಟ್ಟದಲ್ಲಿ ಜಿಂಕೆ ಚರ್ಮ ಮಾರಾಟ ಮಾಡುತ್ತಿದ್ದ ಜಾಲ ಪತ್ತೆಯಾಗಿದೆ. ಈ ಸಂಬಂಧ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ತಾತ್ಕಾಲಿಕ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ನಾರಾಯಣ್​ ಮತ್ತು ನಾಗಮಾದ ಬಂಧಿತ ಆರೋಪಿಗಳು. ಬಂಧಿತರಿಂದ ಒಂದು ಜಿಂಕೆ ಚರ್ಮ ಮತ್ತು ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.

ಇವರಿಬ್ಬರೂ ಜಿಂಕೆ ಚರ್ಮ ಮಾರಾಟ ಮಾಡುತ್ತಿರುವ ಬಗ್ಗೆ ದಿಗ್ವಿಜಯ ನ್ಯೂಸ್​ಗೆ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ದಿಗ್ವಿಜಯ ನ್ಯೂಸ್​ ಮತ್ತು ಸಿಐಡಿ ಅರಣ್ಯ ಘಟಕದ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದರು. ಆರೋಪಿಗಳು ಜಿಂಕೆ ಚರ್ಮವನ್ನು ಮಾರಾಟ ಮಾಡಲು ಬಂದಾಗ ಅವರನ್ನು ಬಂಧಿಸಲಾಗಿದೆ. ಸಿಐಡಿ ಇನ್ಸ್​ ಪೆಕ್ಟರ್​ ಪ್ರಮೋದ್​ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.

ಸಿಐಡಿ ಅರಣ್ಯ ಘಟಕದ ಅಧಿಕಾರಿಗಳು ನೀಡಿರುವ ದೂರಿನ ಅನ್ವಯ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಅಡಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top