Tuesday, 21st November 2017  

Vijayavani

1. ಇಂಧನ ಇಲಾಖೆಯಲ್ಲಿ ಅವ್ಯವಹಾರ ಆರೋಪ – ವಿಧಾನಸಭೆಯಲ್ಲಿ ಸದನ ಸಮಿತಿ ವರದಿ ಮಂಡನೆ – ಸಂಸದೆ ಶೋಭಾ ವಿರುದ್ಧ ಡಿಕೆಶಿ ಅಸ್ತ್ರ 2. ಮದ್ಯಪಾನ ನಿಷೇಧಕ್ಕೆ ಸದನದಲ್ಲಿ ಗುದ್ದಾಟ – ಮದ್ಯ ವಿರೋಧಿ ಹೋರಾಟಕ್ಕೆ ಶೆಟ್ಟರ್​ ಸಾಥ್​​​​​ – ಸಿಎಂ ವಿರುದ್ಧ ಸಂಜಯ್​​ ಪಾಟೀಲ್​​ ಕಟು ಟೀಕೆ 3. 63ರಲ್ಲಿ ಬಿಡುಗಡೆಯಾಗಿತ್ತು ಪದ್ಮಾವತಿ ಚಿತ್ರ – ಆಗಿಲ್ಲದ ವಿವಾದ ಈಗ ಸೃಷ್ಟಿ – ವಿರೋಧಿ ಪಡೆಗೆ ಪ್ರಶ್ನೆ ಮುಂದಿಟ್ಟ ಚಿತ್ರತಂಡ 4. ತ್ರಿವಳಿ ತಲಾಖ್​ಗೆ ಸದ್ಯದಲ್ಲೇ ಬ್ರೇಕ್​ – ಚಳಿಗಾಲದ ಅಧಿವೇಶನದಲ್ಲಿ ವಿಧೇಯಕ ಮಂಡನೆ – ಕೇಂದ್ರ ಸರ್ಕಾರದ ಮಹತ್ವದ ನಡೆ 5. ಐಶ್ವರ್ಯ ಫೋಟೋ ತೆಗೆಯಲು ನೂಕುನುಗ್ಗಲು – ಮಾಧ್ಯಮದವರ ನಡೆಗೆ ಬಚ್ಚನ್​​​​​​​ ಸೊಸೆ ಕಣ್ಣೀರು – ಕೈಮುಗಿದು ಕಣ್ಣೀರಿಟ್ಟ ಐಶ್ವರ್ಯ
Breaking News :

23 ಹೊಸ ಐಷಾರಾಮಿ ಬಸ್ ಸೇರ್ಪಡೆ

Thursday, 14.09.2017, 3:00 AM       No Comments

ಬೆಂಗಳೂರು: ನೂತನ 23 ಐರಾವತ ಕ್ಲಬ್ ಕ್ಲಾಸ್ ಬಸ್​ಗಳು ಬುಧವಾರ ರಾಜ್ಯ ರಸ್ತೆ ಸಾರಿಗೆ ಸೇವೆಗೆ ಸೇರ್ಪಡೆಗೊಂಡವು. ವಿಧಾನಸೌಧದ ಮುಂಭಾಗ ಸಿಎಂ ಸಿದ್ದರಾಮಯ್ಯ ಸಾರಿಗೆ ಇಲಾಖೆಯ ನಾಲ್ಕು ವರ್ಷದ ಸಾಧನೆ ಕೈಪಿಡಿ ಬಿಡುಗಡೆ ಮಾಡಿ ಹೊಸ ಬಸ್ ಸೇವೆಗೆ ಚಾಲನೆ ನೀಡಿದರು.

ಗೃಹ ಸಚಿವ ರಾಮಲಿಂಗಾರೆಡ್ಡಿ, ಸಾರಿಗೆ ಸಚಿವ ಎಚ್.ಎಂ. ರೇವಣ್ಣ, ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಬಸವರಾಜು, ಕೆಎಸ್​ಆರ್​ಟಿಸಿ ವ್ಯವಸ್ಥಾಪಕ ನಿರ್ದೇಶಕ ಉಮಾಶಂಕರ್, ನಿಗಮದ ಅಧ್ಯಕ್ಷ ಗೋಪಾಲ್ ಪೂಜಾರಿ ಮತ್ತಿತರರು ಹಾಜರಿದ್ದರು.

ಹೊಸ ಬಸ್​ಗಳು ಬೆಂಗಳೂರಿನಿಂದ ಕ್ಯಾಲಿಕಟ್, ಚೆನ್ನೈ, ವಿಜಯವಾಡ, ಶ್ರೀಹರಿಕೋಟ, ಮಣಿಪಾಲ್, ಮಂಗಳೂರು, ವಿರಾಜಪೇಟೆ, ಮಡಿಕೇರಿ, ಮೈಸೂರು ನಡುವೆ ಸಂಚರಿಸಲಿವೆ. ಕಳೆದ ನಾಲ್ಕು ವರ್ಷಗಳಲ್ಲಿ 7,333 ಹೊಸ ಬಸ್ ಸೇವೆಗೆ ಸೇರ್ಪಡೆಯಾಗಿದ್ದು, ಡಿಸೆಂಬರ್ ಒಳಗಾಗಿ ಇನ್ನೂ 171 ಐರಾವತ ಕ್ಲಬ್ ಕ್ಲಾಸ್ ಬಸ್​ಗಳು ಕಾರ್ಯಾಚರಣೆಗಿಳಿಯಲಿವೆ ಎಂದು ರೇವಣ್ಣ ತಿಳಿಸಿದರು.

Leave a Reply

Your email address will not be published. Required fields are marked *

Back To Top