Monday, 16th July 2018  

Vijayavani

ಕಾಂಗ್ರೆಸ್‌ ಕಿರುಕುಳದಿಂದಲೇ ಸಿಎಂ ಕಣ್ಣೀರು - ಕಾಂಗ್ರೆಸ್‌ ನೆಚ್ಚಿಕೊಂಡು ಹೋದ್ರೆ ಇದೇ ಸ್ಥಿತಿ - ಎಚ್​ಡಿಕೆ  ಕಣ್ಣೀರಿಗೆ ಜೇಟ್ಲಿ ಟಾಂಗ್‌        ವಾಣಿಜ್ಯ ಬ್ಯಾಂಕ್‌ನಲ್ಲಿನ ಚಾಲ್ತಿ ಸಾಲವೂ ಮನ್ನಾ - ಸಿಎಂ ನಿರ್ಧಾರ - ರೈತರಿಗೆ ಮತ್ತೊಂದು ಕೊಡುಗೆ ನೀಡಿದ ಮುಖ್ಯಮಂತ್ರಿ        ಟ್ರಾಫಿಕ್ ನಿಯಮ ಉಲ್ಲಂಘಿಸಿದ್ದ ಶಾಸಕರ ಪುತ್ರ - ಪ್ರಶ್ನಿಸಿದ ಪೇದೆಗೆ ಅವಾಚ್ಯ ಶಬ್ದಗಳಿಂದ ನಿಂದನೆ        ಬಂಗಾಳದಲ್ಲಿ ಮೋದಿ ರ್ಯಾಲಿ ವೇಳೆ ಅವಗಢ - ಪೆಂಡಾಲ್ ಕುಸಿದು 22 ಜನರಿಗೆ ಗಾಯ - ಆರೋಗ್ಯ ವಿಚಾರಿಸಿದ ಪ್ರಧಾನಿ ನಮೋ        ಕರಾವಳಿಯಲ್ಲಿ ಭಾರಿ ಮಳೆಯ ಅವಾಂತರ - ಕುಸಿದುಬಿತ್ತು ಭಟ್ಕಳದ ಬಸ್ ನಿಲ್ದಾಣ - ಹೊರ ಓಡಿದ ಪ್ರಯಾಣಿಕರು        ಕೆಆರ್​​ಎಸ್​​​ನಿಂದ ಭಾರಿ ಪ್ರಮಾಣದ ನೀರು - ರಂಗನತಿಟ್ಟು ಪಕ್ಷಿಧಾಮ ಸಂಪೂರ್ಣ ಮುಳುಗಡೆ - ಧುಮ್ಮಿಕ್ಕುತ್ತಿದೆ ಹೊಗೇನಕಲ್ ಫಾಲ್ಸ್       
Breaking News

ಆಲ್ಜೀರಿಯಾ ಸೇನಾ ವಿಮಾನ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 257

Wednesday, 11.04.2018, 3:41 PM       No Comments

ಅಲ್ಜೀರಿಸ್​: ಆಲ್ಜೀರಿಯಾದಲ್ಲಿ ಇಂದು ಸಂಭವಿಸಿದ್ದ ಸೇನಾ ವಿಮಾನ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 257ಕ್ಕೆ ಏರಿದೆ. ಈ ಬಗ್ಗೆ ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. ಈ ಹಿಂದೆ ನೂರಕ್ಕೂ ಅಧಿಕ ಮಂಧಿ ಮೃತಟ್ಟಿರುವುದಾಗಿ ಪ್ರಾಥಮಿಕ ಮಾಹಿತಿ ಲಭ್ಯವಾಗಿತ್ತು.

ಆಲ್ಜೀರಿಯಾದ ರಾಜಧಾನಿ ಆಲ್ಜೀರಿಸ್​ನ ಬೌಫರಿಕ್​ ವಿಮಾನ ನಿಲ್ದಾಣದ ಹೊರಭಾಗದಲ್ಲಿ ಈ ದುರಂತ ಸಂಭವಿಸಿತ್ತು.  ಅವಘಡಕ್ಕೆ ತುತ್ತಾಗಿರುವ ವಿಮಾನ ‘ಇಲುಶಿನ್ II-76’ ಹೆಸರಿನದ್ದಾಗಿದ್ದು, ಗರಿಷ್ಠ 120 ಮಂದಿಯನ್ನಷ್ಟೇ ಹೊತ್ತೊಯ್ಯಬಹುದಾದ ಸಾಮರ್ಥ್ಯ ಹೊಂದಿತ್ತು ಎಂದು ಸೇನೆಯ ಹೆಸರು ಹೇಳಲಿಚ್ಛಿಸದ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಮಿಲಿಟರ್​ ಟ್ರೂಪ್​ಗಳನ್ನು ಹೊತ್ತ ಇಲುಶಿನ್ II-76  ವಿಮಾನ ಪಶ್ಚಿಮ ಆಲ್ಜೀರಿಯಾದ ಬೇಚರ್​ಗೆ ತೆರಳುತ್ತಿತ್ತು ಎನ್ನಲಾಗಿದೆ. ಬುಧವಾರ ಸಂಭವಿಸಿದ ಈ ದುರ್ಘಟನೆಯಲ್ಲಿ  ಈ ವರೆಗೆ ಸಿಕ್ಕಿರುವ ಮಾಹಿತಿಯ ಪ್ರಕಾರ 257 ಮಂದಿ ದುರ್ಮರಣಕ್ಕೀಡಾಗಿದ್ದಾರೆ. ಈ ಹಿಂದೆ  ಸ್ಥಳೀಯ ರೆಡಿಯೋವೊಂದು 100ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ ಎಂದು ವರದಿ ಮಾಡಿತ್ತು.

ವಿಮಾನ ಬಿದ್ದ ಸ್ಥಳದಲ್ಲಿ ಭಾರಿ ಪ್ರಮಾಣದಲ್ಲಿ ಹೊಗೆ ಆವರಿಸಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ನೂರಾರು ಆಂಬುಲೆನ್ಸ್​ಗಳು, ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿ ಬೀಡು ಬಿಟ್ಟಿವೆ.  ಏಜನ್ಸೀಸ್​

ವಿಮಾನ ಪತನಗೊಂಡ ಸ್ಥಳದಲ್ಲಿ ಆವರಿಸಿದ್ದ ದಟ್ಟ ಹೊಗೆ

Leave a Reply

Your email address will not be published. Required fields are marked *

Back To Top