Wednesday, 21st February 2018  

Vijayavani

ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಗೂಂಡಾಗಿರಿ ಪ್ರಕರಣ - ಬೌರಿಂಗ್​ ಆಸ್ಪತ್ರೆಯಲ್ಲಿ ಮೆಡಿಕಲ್​ ಟೆಸ್ಟ್​ ಕಂಪ್ಲೀಟ್​​ - ಕೋರ್ಟ್​ಗೆ ಆರೋಪಿಗಳು ಹಾಜರ್​​​        ನಲಪಾಡ್ ಜಾಮೀನು ಅರ್ಜಿ ವಿಚಾರಣೆ ಆರಂಭ - ವಾದ ಮಂಡನೆಗೆ ಅವಕಾಶ ಕೋರಿ ಮಧ್ಯಂತರ ಅರ್ಜಿ - ಸರ್ಕಾರದ ಮೇಲೆ ನಂಬಿಕೆಯಿಲ್ಲ ಎಂದು ಆಲಂ ಪಾಷ ಅರ್ಜಿ        ಇಂದಿನಿಂದ ಬಾಹುಬಲಿ ಹೆಲಿ ಟೂರಿಸಂ - ಜಸ್ಟ್​​​ 2,100 ರೂಪಾಯಿಗೆ 8 ನಿಮಿಷ ಹಾರಾಟ - ಫೆಬ್ರವರಿ 25 ಬರ್ತಿದ್ದಾರೆ ಕೇಂದ್ರ ಗೃಹ ಸಚಿವರು        ಮುಗಿಯದ ಭೈರತಿ ಬಸವರಾಜ್ ಬೆಂಬಲಿಗರ ದರ್ಪ - ಪೇದೆ ಮೇಲೆ ಗೂಂಡಾಗಳ ಹಲ್ಲೆ - ಆರೋಪ ತಳ್ಳಿ ಹಾಕಿದ ಕಾಂಗ್ರೆಸ್​​​​​ ಶಾಸಕ        ಹೋಂ ಮಿನಿಸ್ಟರ್‌ ಹೆಸರಲ್ಲಿ ಭಾರಿ ಆಸ್ತಿ ಆರೋಪ - ದಿಗ್ವಿಜಯ ನ್ಯೂಸ್‌ನಲ್ಲಿ ದಾಖಲೆ ಬಯಲು - ಆರೋಪ ನಿರಾಕರಿಸಿದ ರಾಮಲಿಂಗಾರೆಡ್ಡಿ       
Breaking News

ಐದು ವರ್ಷಗಳಿಂದ ಗ್ರಂಥಾಲಯ ಇಲಾಖೆ ಕೈ ಸೇರದ 259 ಕೋಟಿ ರೂಪಾಯಿ

Tuesday, 14.11.2017, 11:33 AM       No Comments

>> ಬೆಂಗಳೂರು ನಗರವೊಂದರಲ್ಲಿಯೇ 222 ಕೋಟಿ ರೂ. ಬಾಕಿ

ಧಾರವಾಡ : ಸಾರ್ವಜನಿಕ ಗ್ರಂಥಾಲಯ ಇಲಾಖೆಗೆ ಬರಬೇಕರಿರುವ 259 ಕೋಟಿ ರೂಪಾಯಿ ಹಣ ಬಾಕಿ ಇದ್ದು, ಗ್ರಂಥಾಲಯ ಇಲಾಖೆಯ ಅಭಿವೃದ್ಧಿಗೆ ಇದು ಅಡ್ಡಿಯಾಗಿದೆ ಎಂದು ಇಲಾಖೆಯ ನಿರ್ದೇಶಕ ಸತೀಶ್​ಕುಮಾರ ಹೊಸಮನಿ ತಮ್ಮ ಅಸಹಾಯಕತೆ ತೋಡಿಕೊಂಡಿದ್ದಾರೆ.

ಇಲ್ಲಿ ಹಮ್ಮಿಕೊಂಡಿರುವ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಹಿನ್ನೆಲೆಯಲ್ಲಿ ಸತೀಶ್​ಕುಮಾರ್​ ಹೊಸಮನಿಯವರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ರಾಜ್ಯಾದ್ಯಂತ ಇರುವ ಮಹಾನಗರ ಪಾಲಿಕೆ, ಪುರಸಭೆ, ನಗರಸಭೆ, ಪಟ್ಟಣ ಪಂಚಾಯ್ತಿ, ಹೀಗೆ ಎಲ್ಲ ಸ್ಥಳೀಯ ಸಂಸ್ಥೆಗಳ ಮಟ್ಟದಲ್ಲಿಯೂ ಆಸ್ತಿ ಕರ ಪಡೆದುಕೊಳ್ಳುವಾಗ ಶೇಕಡಾ 6ರಷ್ಟು ಗ್ರಂಥಾಲಯ ಸೆಸ್ ಕೂಡ ಸೇರಿರುತ್ತೆ.

ಆದರೆ ಜನರಿಂದ ಪಡೆದುಕೊಂಡಿರುವ ಈ ಸೆಸ್​​ ಹಣ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಕೈ ಸೇರುತ್ತಿಲ್ಲ. ಒಟ್ಟು 259 ಕೋಟಿ ರೂಪಾಯಿ ಬಾಕಿ ಇದೆ ಅದರಲ್ಲಿ ಬೆಂಗಳೂರು ನಗರವೊಂದರಲ್ಲಿಯೇ 222 ಕೋಟಿ ರೂಪಾಯಿ ಬಾಕಿ ಉಳಿದುಕೊಂಡಿದೆ. ಸಾರ್ವಜನಿಕ ಗ್ರಂಥಾಲಯ ಇಲಾಖೆಯೊಂದಿಗೆ ಆಗುತ್ತಿರುವ ಈ ಲೋಪ ರಾಜ್ಯ ಸರ್ಕಾರದ ಅವ್ಯವಸ್ಥೆಗೆ ಒಂದು ಉತ್ತಮ ಉದಾಹರಣೆಯಾಗಿದೆ.

ರಾಜ್ಯ ಸರ್ಕಾರ ಗ್ರಂಥಾಲಯ ಇಲಾಖೆಯಲ್ಲಿನ ಖಾಯಂ ಸಿಬ್ಬಂದಿ ವೇತನ ಕೊಡುವುದಕ್ಕೆ ಮಾತ್ರ ಹಣ ಕೊಡುತ್ತದೆ. ಉಳಿದೆಲ್ಲವನ್ನೂ ಸ್ಥಳೀಯ ಸಂಸ್ಥೆಗಳ ಮೂಲಕ ಬರುವ ಸೆಸ್ ಹಣದಲ್ಲಿಯೇ ಮಾಡಬೇಕಿದೆ. ಕಳೆದ ಐದು ವರ್ಷಗಳ ಅವಧಿಯಿಂದ ಬರಬೇಕಿದ್ದ ಬಾಕಿಯನ್ನು ಬೇಗ ಕೊಡಿಸಿ ಎಂದು ಹಿರಿಯ ಅಧಿಕಾರಿಗಳಿಂದ ಹಿಡಿದು ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರವರೆಗೆ ಎಲ್ಲರಿಗೂ ಪತ್ರ ಬರೆದಿದ್ದರೂ, ಸ್ಪಂದನೆ ಮಾತ್ರ ದೊರೆಯುತ್ತಿಲ್ಲ ಎನ್ನಲಾಗಿದೆ. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *

Back To Top